ಜು.14 ಕ್ಕೆ ಗಾಳಿಪಟ-2 ಎಣ್ಣೆ ಸಾಂಗ್ ರಿಲೀಸ್
Team Udayavani, Jul 13, 2022, 2:19 PM IST
ಗಣೇಶ್ ನಾಯಕರಾಗಿರುವ, ಯೋಗರಾಜ್ ಭಟ್ ನಿರ್ದೇಶನದ “ಗಾಳಿಪಟ-2′ ಚಿತ್ರ ಆಗಸ್ಟ್ 12ಕ್ಕೆ ಬಿಡುಗಡೆಯಾಗುತ್ತಿದೆ.
ಅದಕ್ಕೂ ಮೊದಲು ಚಿತ್ರ ಹಾಡಿನ ಮೂಲಕ ಮೋಡಿ ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಹಿಟ್ಲಿಸ್ಟ್ ಸೇರಿದೆ. ಈಗ ಚಿತ್ರದ ಮತ್ತೂಂದು ಹಾಡು ಬಿಡುಗಡೆಯಾಗುತ್ತಿ ದೆ. ಅದು ಎಣ್ಣೆ ಹಾಡು!
ಈಗಾಗಲೇ ಭಟ್ಟರು ಬರೆದಿರುವ ಅನೇಕ ಎಣ್ಣೆ ಹಾಡುಗಳು ಹಿಟ್ಲಿಸ್ಟ್ ಸೇರಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.
ಈಗ ಈ ಮೂವರ ಕಾಂಬಿನೇಶನ್ನಲ್ಲಿ ಗಾಳಿಪಟ 2 ಚಿತ್ರದ ಮತ್ತೂಂದು ಎಣ್ಣೆ ಸಾಂಗ್ ಜುಲೈ 14 ರಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ಗಾಳಿಪಟ 2 ಚಿತ್ರವನ್ನು ನಿರ್ಮಿಸಿದ್ದಾರೆ. ಅದ್ಧೂರಿ ಬಜೆಟ್ನಲ್ಲಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!