ಮೇ 1ಕ್ಕೆ ಗಣೇಶ್ 99 ತೆರೆಗೆ
ಶುಕ್ರವಾರ ಬದಲು ಬುಧವಾರ ರಿಲೀಸ್
Team Udayavani, Apr 21, 2019, 3:00 AM IST
ಗಣೇಶ್ ನಾಯಕರಾಗಿರುವ ಚಿತ್ರವೊಂದು ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “99′. ರಾಮು ಅವರ ನಿರ್ಮಾಣದಲ್ಲಿ ಮೂಡಿಬಂದಿರುವ “99′ ಚಿತ್ರ ಮೇ 1 ರಂದು ತೆರೆಕಾಣುತ್ತಿದೆ. ಈ ಮೂಲಕ ಗಣೇಶ್ ಅಭಿಮಾನಿಗಳು ಖುಷಿಯಾಗಿದ್ದಾರೆ.
ಈ ಚಿತ್ರವನ್ನು ಪ್ರೀತಂ ಗುಬ್ಬಿ ನಿರ್ದೇಶಿಸಿದ್ದು, ಭಾವನಾ ನಾಯಕಿಯಾಗಿ ನಟಿಸಿದ್ದಾರೆ. ಇನ್ನು, ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುವ ಮೂಲಕ ಚಿತ್ರತಂಡ ಮೊಗದಲ್ಲಿ ಮಂದಹಾಸ ಮೂಡಿದೆ.
ಜನ ಸಿನಿಮಾವನ್ನು ಕೂಡಾ ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ. ಚಿತ್ರ ಮೇ 1 ಬುಧವಾರದಂದು ತೆರೆಕಾಣುತ್ತಿದೆ. ಸಾಮಾನ್ಯವಾಗಿ ಸಿನಿಮಾಗಳು ಶುಕ್ರವಾರ ಬಿಡುಗಡೆಯಾಗೋದು ವಾಡಿಕೆ.
ಆದರೆ, “99′ ಚಿತ್ರ ಎರಡು ದಿನ ಮೊದಲೇ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಗಣೇಶ್ ಹೊಸ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡಿರುವ ಗಣೇಶ್, ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಅಂದಹಾಗೆ, ಇದು ತಮಿಳಿನ ಯಶಸ್ವಿ ಚಿತ್ರ “96′ ರೀಮೇಕ್. ಈ ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತವಿದೆ.