ಕರಾವಳಿ ಶೈಲಿಯಲ್ಲಿದ್ರೂ ಪ್ರೇಕ್ಷಕರ ಮನಸೆಳೆದ ಗರುಡ ಗಮನ ವೃಷಭ ವಾಹನ

Team Udayavani, Nov 23, 2021, 10:22 AM IST

ಗರುಡ ಹಾರಾಟ ಜೋರು…

ಇತ್ತೀಚೆಗಷ್ಟೇ ರಾಜ್‌ ಬಿ. ಶೆಟ್ಟಿ ಮತ್ತು ರಿಷಭ್‌ ಶೆಟ್ಟಿ ಅಭಿನಯದ “ಗರುಡ ಗಮನ ವೃಷಭ ವಾಹನ’ ಚಿತ್ರ ತೆರೆಗೆ ಬಂದಿದ್ದು ನಿಮಗೆ ಗೊತ್ತಿರಬಹುದು. ಸದ್ಯ ಬಿಡುಗಡೆಯಾಗಿರುವ “ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದ್ದು, ಚಿತ್ರದ ಗಳಿಕೆಯಲ್ಲೂ ನಿಧಾನವಾಗಿ ಏರಿಕೆಯಾಗುತ್ತಿದೆ. ಚಿತ್ರ ಬಿಡುಗಡೆಯಾದ ಬಹುತೇಕ ಕಡೆಗಳಲ್ಲಿ ಚಿತ್ರಮಂದಿರದ ಮುಂದೆ ಹೌಸ್‌ಫ‌ುಲ್‌ ಬೋರ್ಡ್‌ ಕೂಡ ಬೀಳುತ್ತಿದೆ. ಇದು ಚಿತ್ರತಂಡದ ಖುಷಿಗೆ ಕಾರಣವಾಗಿದೆ.

ಇದೇ ಖುಷಿಯನ್ನು ಹಂಚಿಕೊಳ್ಳಲು ಮಾಧ್ಯಮಗಳ ಮುಂದೆ ಬಂದಿದ್ದ “ಗರುಡ ಗಮನ ವೃಷಭ ವಾಹನ’ ಚಿತ್ರತಂಡ, ಚಿತ್ರದ ಬಿಡುಗಡೆಯ ಬಳಿಕ ಸಿಗುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಮಾತನಾಡಿತು. ಮೊದಲಿಗೆ ಮಾತನಾಡಿದ ನಟ ಕಂ ನಿರ್ಮಾಪಕ ರಕ್ಷಿತ್‌ ಶೆಟ್ಟಿ, “ತುಂಬ ಕಷ್ಟಪಟ್ಟು ಮಾಡಿದ ಒಳ್ಳೆಯ ಸಿನಿಮಾಕ್ಕೆ ಆಡಿಯನ್ಸ್‌, ಇಂಡಸ್ಟ್ರಿ ಕಡೆಯಿಂದಲೂ ಒಳ್ಳೆಯ ಸಪೋರ್ಟ್‌, ರೆಸ್ಪಾನ್ಸ್‌ ಸಿಗುತ್ತಿದೆ.

ಇದನ್ನೂ ಓದಿ:- 18 ಹಳ್ಳಿಗಳ ಜನರ ಸ್ಥಳಾಂತರ: ತಿರುಪತಿಗೆ ರಸ್ತೆ, ರೈಲು ಸಂಪರ್ಕ ಕಡಿತ

ಜನ ಖುಷಿಯಿಂದ ಸಿನಿಮಾ ನೋಡುತ್ತಿದ್ದಾರೆ’ ಎಂದು ಚಿತ್ರತಂಡದ ಪ್ರಯತ್ನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ನಿರ್ದೇಶಕ ಕಂ ನಟ ರಾಜ್‌ ಬಿ ಶೆಟ್ಟಿ ಮಾತನಾಡಿ, “ಸಿನಿಮಾ ಬಿಡುಗಡೆಯಾದ ಎಲ್ಲ ಕಡೆಗಳಲ್ಲಿ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಸುಮಾರು ಎರಡುವರೆ- ಮೂರು ವರ್ಷ ಪರಿಶ್ರಮ ಹಾಕಿ ಮಾಡಿರುವುದಕ್ಕೆ ಸಾರ್ಥಕ ಎನಿಸುತ್ತಿದೆ. ಎಲ್ಲ ಥರದ ಆಡಿಯನ್ಸ್‌ಗೂ ಸಿನಿಮಾ ಇಷ್ಟವಾಗುತ್ತಿದೆ. ಗಳಿಕೆ ಕೂಡ ನಿಧಾನವಾಗಿ ಹೆಚ್ಚಾಗು ತ್ತಿದೆ.

ಇಡೀ ಟೀಮ್‌ ಒಂದೊಳ್ಳೆ ಸಿನಿಮಾ ಮಾಡಿದ ಖುಷಿಯಲ್ಲಿದ್ದೇವೆ. ನಿರ್ದೇಶಕನಾಗಿ ಮತ್ತು ನಟನಾಗಿ ಸಿನಿಮಾ ನನಗೆ ತೃಪ್ತಿ ನೀಡಿದೆ’ ಎಂದರು. ನಟ ರಿಷಭ್‌ ಶೆಟ್ಟಿ ಮಾತನಾಡಿ, “ಜನ ತುಂಬ ಎಂಜಾಯ್‌ ಮಾಡಿಕೊಂಡು ಸಿನಿಮಾ ನೋಡುತ್ತಿದ್ದಾರೆ. ಕೆಲವರು ಇದನ್ನು ಕರಾವಳಿ ಶೈಲಿಯ ಸಿನಿಮಾ ಅಂದರೂ, ಇದು ಎಲ್ಲ ಭಾಗದ ಪ್ರೇಕ್ಷಕರಿಗೂ ಇಷ್ಟವಾಗುತ್ತಿದೆ.

ಮಂಡ್ಯ, ಮೈಸೂರು, ಹುಬ್ಬಳ್ಳಿ, ಉತ್ತರ ಕರ್ನಾಟಕದ ಹಲವು ಕಡೆಗಳಲ್ಲಿ ಸಿನಿಮಾ ತುಂಬ ಚೆನ್ನಾಗಿ ಓಡುತ್ತಿರು ವುದೇ ಇದಕ್ಕೆ ಸಾಕ್ಷಿ. ನನ್ನ ಪಾತ್ರದ ಬಗ್ಗೆಯೂ ಎಲ್ಲರೂ ಮಾತನಾಡುತ್ತಿದ್ದಾರೆ. ಮೊದಲ ಬಾರಿಗೆ ಇಂಥದೊಂದು ಪಾತ್ರ ಮಾಡಿರುವುದಕ್ಕೆ ಖುಷಿಯಿದೆ’ ಎಂದು ಹೇಳಿಕೊಂಡರು. ಉಳಿದಂತೆ ಚಿತ್ರದ ನಿರ್ಮಾಪಕರಾದ ರವಿ ರೈ, ಸೇರಿದಂತೆ ಚಿತ್ರತಂಡದ ಅನೇಕರು “ಗರುಡ ಗಮನ ವೃಷಭ ವಾಹನ’ ಚಿತ್ರದ ಬಿಡುಗಡೆಯ ನಂತರ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಖುಷಿಯನ್ನು ಹಂಚಿಕೊಂಡರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.