ಸರ್ಕಾರಿ ಹಾಡು ಬಂತು ದೇವರ ಜೊತೆ ಚಂದನ್‌ ಶೆಟ್ಟಿ

Team Udayavani, May 22, 2017, 11:58 AM IST

Sarkari-Kelasa-Devara-Kelas.jpg

ಸರ್ಕಾರದ ಹಾಡು ಹೊರಬಂದಿದೆ. ಜನ ಕೂಡಾ ಕೇಳಿ ಖುಷಿಪಟ್ಟಿದ್ದಾರೆ! ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ಇಲ್ಲಿ ನಾವು ಹೇಳುತ್ತಿರುವುದು “ಸರ್ಕಾರಿ ಕೆಲಸ ದೇವರ ಕೆಲಸ’ ಚಿತ್ರದ ಆಡಿಯೋ ಬಗ್ಗೆ. “ಜೋಗಿ’ ಚಿತ್ರ ನಿರ್ಮಿಸಿರುವ ಅಶ್ವಿ‌ನಿ ರಾಮ್‌ ಪ್ರಸಾದ್‌ ನಿರ್ಮಾಣದ “ಸರ್ಕಾರಿ ಕೆಲಸ ದೇವರ ಕೆಲಸ’ ಚಿತ್ರದ ಆಡಿಯೋ ಇತ್ತೀಚೆಗೆ ಉತ್ತರ ಕರ್ನಾಟಕದ ತವರೂರು ಎನಿಸಿರುವ ವಿಜಾಪುರದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

15000 ಅಧಿಕ ಜನರ ಎದುರು ಆಡಿಯೋ ಬಿಡುಗಡೆ ಮಾಡಿದ ಚಿತ್ರತಂಡ ಖುಷಿಯಾಗಿದೆ. ಈ ಚಿತ್ರದ ಹಾಡಿನಲ್ಲಿ ಚಂದನ್‌ ಶೆಟ್ಟಿ ಕೂಡಾ ಕಾಣಿಸಿಕೊಂಡಿದ್ದಾರೆ. “ದಗಲ್‌ಬಾಜಿ’ ಹಾಡುನಲ್ಲಿ ಚಂದನ್‌ ಶೆಟ್ಟಿ ಇಲ್ಲಿ ಮಾಡರ್ನ್ ಸ್ವಾಮೀಜಿ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಹಿರಿತೆರೆಯಲ್ಲಿ ಕಾಣಿಸಿಕೊಂಡಿರುವ ಚಂದನ್‌ ಶೆಟ್ಟಿ ಸಹಜವಾಗಿಯೇ ಖುಷಿಯಾಗಿದ್ದಾರೆ.”ಹಾಡು ತುಂಬಾ ಚೆನ್ನಾಗಿದೆ. ಸಾಮಾಜಿಕ ಕಳಕಳಿಯ ಹಾಗೂ ಇಂದಿನ ವ್ಯವಸ್ಥೆಯನ್ನು ಎತ್ತಿ ತೋರಿಸುವಂತಹ ಹಾಡು.

ಹಾಗಾಗಿ, ನಾನು ಆ ಹಾಡಿನಲ್ಲಿ ಕಾಣಿಸಿಕೊಂಡೆ. ಎಲ್ಲರಿಂದಲೂ ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ’ ಎನ್ನುವುದು ಚಂದನ್‌ ಶೆಟ್ಟಿ ಮಾತು. ಚಿತ್ರದ “ದಗಲ್‌ಬಾಜಿ’ ಹಾಡಿನ ಮಾತನಾಡುವ ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್‌, ಸರ್ಕಾರದ ವ್ಯವಸ್ಥೆ, ಅಧಿಕಾರ ಸೇರಿದಂತೆ ಇತರ ವಿಷಯಗಳನ್ನು ಇಲ್ಲಿ ವಿಡಂಬನಾತ್ಮಕವಾಗಿ ಹೇಳಲಾಗಿದೆ. ನಿರ್ಮಾಪಕರಿಗೆ ಸಿನಿಮಾ ಹಾಗೂ ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಅನುಭವವಿದ್ದು, ಜನರ ನಾಡಿಮೀಡಿತ ತಿಳಿದ ಕಾರಣ ಒಳ್ಳೆಯ ಹಾಡು ಗಳನ್ನು ಮಾಡಿಸಿದ್ದಾರೆ’ ಎನ್ನುತ್ತಾರೆ ಚಂದನ್‌ ಶೆಟ್ಟಿ.

ಹೊರಟಿದೆ ಸರ್ಕಾರಿ ರಥ: “ಸರ್ಕಾರಿ ಕೆಲಸ ದೇವರ’ ಕೆಲಸ ಚಿತ್ರವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ “ಸರ್ಕಾರಿ ರಥ’ ಎಂಬ ವಾಹನವೊಂದನ್ನು ಸಿದ್ಧಪಡಿಸಿದ್ದು, ಈ ವಾಹನ ರಾಜ್ಯಾದ್ಯಂತ ಸಂಚರಿಸಿ ಸಿನಿಮಾ ಬಗ್ಗೆ ಜನರಿಗೆ ಮಾಹಿತಿ ನೀಡಲಿದೆ. ಮೈಸೂರು, ಹಾಸನ, ಗದಗ, ರಾಣೆಬೆನ್ನೂರು, ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆ ಸಂಚರಿಸಿ ಸಿನಿಮಾದ ಹಾಡು, ಟೀಸರ್‌ ಪ್ರದರ್ಶನ ಮಾಡಲಿದೆ.

“ಸಿನಿಮಾ ಬಿಡುಗಡೆಗೆ ಮುನ್ನ ಸಿನಿಮಾ ಬಗ್ಗೆ ಜನರಿಗೆ ಮಾಹಿತಿ ಇರಬೇಕು. ಆ ಸಿನಿಮಾದೊಳಗಡೆ ಏನಿರಬಹುದೆಂಬ ಕಲ್ಪನೆ ಅವರಿಗೆ ಬರಬೇಕು. ಆ ಕಾರಣದಿಂದ “ಸರ್ಕಾರಿ ರಥ’ ಎಂಬ ವ್ಯಾನ್‌ವೊಂದನ್ನು ಸಿದ್ಧಪಡಿಸಿದ್ದೇವೆೆ’ ಎನ್ನುವುದು ನಿರ್ಮಾಪಕ ಅಶ್ವಿ‌ನಿ ರಾಮ್‌ಪ್ರಸಾದ್‌ ಮಾತು. 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.