ಜಯಣ್ಣ ಬ್ಯಾನರ್‌ನಲ್ಲಿ ಗುರುನಂದನ್‌ ಚಿತ್ರ

ಶೀರ್ಷಿಕೆ ಇಟ್ಟಿಲ್ಲ, ನಾಯಕಿ ಆಯ್ಕೆಯಾಗಿಲ್ಲ

Team Udayavani, Aug 19, 2019, 3:02 AM IST

Gurunandan-

ಸಿನಿಮಾದಲ್ಲಿ “ಫ‌ಸ್ಟ್‌ ರ್‍ಯಾಂಕ್‌’ ಪಡೆದ ರಾಜು ಅಲ್ಲಲ್ಲ, ಗುರುನಂದನ್‌, ಆ ಬಳಿಕ “ಸ್ಮೈಲ್‌ ಪ್ಲೀಸ್‌’ ಎನ್ನುತ್ತಲೇ ನಗಿಸುವ ಪ್ರಯತ್ನ ಮಾಡಿದರು. ಆದರೆ, ಅವರ ಸ್ಮೈಲ್‌ಗೆ ಯಾರೂ ಅಷ್ಟಾಗಿ ಸ್ಮೈಲ್‌ ಮಾಡಲಿಲ್ಲ. ಆ ನಂತರ “ಕನ್ನಡ ಮೀಡಿಯಂ ಸ್ಟೂಡೆಂಟ್‌’ ಆಗಿ “ಮಿಸ್ಸಿಂಗ್‌ ಬಾಯ್‌’ ಎನಿಸಿಕೊಂಡರು. ಅದಾದ ಮೇಲೆ ಗುರುನಂದನ್‌ ಯಾವ ಚಿತ್ರ ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಆದರೆ, ಅದಕ್ಕೆ ಉತ್ತರ ಇರಲಿಲ್ಲ. ಈಗ ಸ್ವತಃ ಗುರುನಂದನ್‌ ಅವರೇ, ಹೊಸದೊಂದು ಚಿತ್ರ ಮಾಡುತ್ತಿರುವ ಕುರಿತು ಹೇಳಿಕೊಂಡಿದ್ದಾರೆ.

ಹೌದು, ಗುರುನಂದನ್‌ ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಆ ಚಿತ್ರವನ್ನು ಜಯಣ್ಣ ನಿರ್ಮಾಣ ಮಾಡುತ್ತಿದ್ದಾರೆ ಎಂಬುದು ವಿಶೇಷ. ಇನ್ನು, ಇತ್ತೀಚೆಗೆ “ಸಿಂಗ’ ಸಿನಿಮಾ ನಿರ್ದೇಶಿಸಿದ್ದ ವಿಜಯ್‌ ಕಿರಣ್‌ ಅವರು, ಗುರುನಂದನ್‌ ಅಭಿನಯದ ಚಿತ್ರವನ್ನು ನಿರ್ದೇಶಿಸಲು ಹೊರಟಿದ್ದಾರೆ. ಆ ಚಿತ್ರಕ್ಕಿನ್ನೂ ನಾಮಕರಣ ಮಾಡಿಲ್ಲ. ಅದು ಸ್ವಮೇಕಾ ಅಥವಾ ರಿಮೇಕಾ ಎಂಬುದನ್ನು ಸಿನಿಮಾ ಬಂದಮೇಲೆ ತಿಳಿದುಕೊಳ್ಳಬೇಕು. ಅಂದಹಾಗೆ, ಸಿನಿಮಾ ಕುರಿತು ಹೇಳಿಕೊಳ್ಳುವ ಗುರುನಂದನ್‌, “ಅದೊಂದು ಪಕ್ಕಾ ಮನರಂಜನಾತ್ಮಕ ಸಿನಿಮಾ.

ಇಲ್ಲಿ ಲವ್‌ಸ್ಟೋರಿಯೂ ಇದೆ. ಹಾಸ್ಯವೂ ಮೇಳೈಸಲಿದೆ. ಜೊತೆಗೆ ಒಂದಷ್ಟು ಎಮೋಷನ್ಸ್‌ ಕೂಡ ಇದೆ. ಸದ್ಯಕ್ಕೆ ನಾಯಕಿಯ ಆಯ್ಕೆ ನಡೆದಿಲ್ಲ. ಉಳಿದಂತೆ ಚಿತ್ರದಲ್ಲಿ ಸಾಧುಕೋಕಿಲ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಕಾಂಬಿನೇಷನ್‌ನಲ್ಲಿ ಸುಮಾರು ಹತ್ತು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ’ ಎಂದು ವಿವರ ಕೊಡುವ ಗುರುನಂದನ್‌, ಸೋಮವಾರ ಚಿತ್ರದ ಪೂಜೆ ನೆರವೇರಲಿದ್ದು, ಚಿತ್ರತಂಡ ಚಿತ್ರೀಕರಣಕ್ಕೆ ಅಣಿಯಾಗಲಿದೆ ಎನ್ನುತ್ತಾರೆ. ಅದೇನೆ ಇರಲಿ, “ಫ‌ಸ್ಟ್‌ ರ್‍ಯಾಂಕ್‌ ರಾಜು’ ಚಿತ್ರ ಭರ್ಜರಿ ಯಶಸ್ಸು ಪಡೆದ ಬಳಿಕ ಗುರುನಂದನ್‌ ಅವರಿಗೆ ಹೊಸ ಇಮೇಜ್‌ ಸಿಕ್ಕಿದ್ದು ಸುಳ್ಳಲ್ಲ.

ಅದೇ ಗೆಲುವಿನ ನಿರೀಕ್ಷೆ ಇಟ್ಟುಕೊಂಡು “ಸ್ಮೈಲ್‌ ಪ್ಲೀಸ್‌’ ಚಿತ್ರ ಮಾಡಿದರೂ, ಅದು ಯಶಸ್ಸು ಕೊಡಲಿಲ್ಲ. ಎಲ್ಲೋ ಒಂದು ಕಡೆ ಗುರುನಂದನ್‌ ಅವರಿಗೆ ಭಯ ಕಾಡಿದ್ದು ನಿಜ. ತಮ್ಮ ಅಸ್ತಿತ್ವ ಕಾಪಾಡಿಕೊಳ್ಳಬೇಕು ಅಂದುಕೊಂಡ ಗುರುನಂದನ್‌ ಅವರಿಗೆ ಪುನಃ, “ಫ‌ಸ್ಟ್‌ ರ್‍ಯಾಂಕ್‌ ರಾಜು’ ತಂಡ ಸೇರಿ “ರಾಜು ಕನ್ನಡ ಮೀಡಿಯಂ’ ಚಿತ್ರ ಮಾಡಿತು. ಅದು ಗುರುನಂದನ್‌ ಮೊಗದಲ್ಲಿ ಮಂದಹಾಸ ಮೂಡಿಸಿದಂತೂ ನಿಜ. ಈಗ ಮತ್ತೂಂದು ಹೊಸ ಚಿತ್ರದ ಹಿಂದೆ ಹೊರಟಿದ್ದಾರೆ. ಈ ಸಿನಿಮಾ ಕೂಡ ಗೆಲುವು ಕೊಡುತ್ತೆ ಎಂಬ ಭವ್ಯ ಭರವಸೆ ಅವರದು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.