ಅಪ್ಪು ನಮ್ಮನ್ನಗಲಿ 5 ದಿನ : ಇಂದು ಕುಟುಂಬಸ್ಥರಿಂದ ಹಾಲು-ತುಪ್ಪ ಬಿಡುವ ಕಾರ್ಯ
Team Udayavani, Nov 2, 2021, 8:28 AM IST
ಬೆಂಗಳೂರು: ಕಳೆದ ಶುಕ್ರವಾರ (ಅಕ್ಟೋಬರ್ 29) ಕರ್ನಾಟಕದ ಪ್ರೀತಿಯ ಅಪ್ಪು, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿದ್ದು, ಇಂದಿಗೆ ಐದು ದಿನ ಕಳೆದಿದೆ. ಈ ಹಿನ್ನಲೆಯಲ್ಲಿ ಅಪ್ಪು ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಕುಟುಂಬಸ್ಥರಿಂದ ಹಾಲು-ತುಪ್ಪ ಬಿಡುವ ಕಾರ್ಯವನ್ನು ಇಂದು ನಡೆಯಲಿದೆ.
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಭಾನುವಾರ ಮುಂಜಾನೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು.
ಅಪ್ಪು ಸಮಾಧಿ ಸ್ಥಳ ಇರುವ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಮಾಧಿ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. ದಿವಂಗತ ನಟ ಪುನೀತ್ ರಾಜ್ಕುಮಾರ್ ಫೋಟೋ ಇಟ್ಟು ಸ್ಟೇಜ್ ಕೂಡ ಸಿದ್ಧತೆ ಮಾಡಲಾಗಿದೆ.
ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಬ್ಯಾರಿಕೇಡ್ ಹಾಕಿ ಎಸಿಪಿ, ಇನ್ಸ್ಪೆಕ್ಟರ್, ಸಬ್ಇನ್ಸ್ಪೆಕ್ಟರ್, 1 KSRP ತುಕಡಿ ಸೇರಿ 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ