ಹರಿಪ್ರಿಯಾಗೆ ಕನ್ನಡ್‌ ಗೊತ್ತಿಲ್ಲ: 26ನೇ ಚಿತ್ರ ಇಂದಿನಿಂದ ಶುರು

Team Udayavani, Sep 6, 2018, 1:11 PM IST

555.jpg

“ಬೆಲ್‌ ಬಾಟಮ್‌’ ಹಾಗೂ “ಡಾಟರ್‌ ಆಫ್ ಪಾರ್ವತಮ್ಮ’ ಚಿತ್ರಗಳು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆಯೇ, ಹರಿಪ್ರಿಯಾ ಸದ್ದಿಲ್ಲದೆ ಇನ್ನೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ, ಅದು ಅವರ 26ನೇ ಚಿತ್ರವಾಗಿದ್ದು, ಇಂದಿನಿಂದ ಪ್ರಾರಂಭವಾಗಲಿದೆ.

ಹರಿಪ್ರಿಯಾ ಒಪ್ಪಿರುವ ಚಿತ್ರದ ಹೆಸರೇನು ಗೊತ್ತಾ? “ಕನ್ನಡ್‌ ಗೊತ್ತಿಲ್ಲ’ ಅಂತ. ಅದು ಕನ್ನಡ್‌ ಅಲ್ಲ, ಕನ್ನಡ ಅಂತ ನೀವು ತಿದ್ದಬಹುದು. ಆದರೆ, ಚಿತ್ರದ ಹೆಸರೇ “ಕನ್ನಡ್‌ ಗೊತ್ತಿಲ್ಲ’ ಅಂತ. ಇಷ್ಟು ಹೇಳಿದ ಮೇಲೆ, ಚಿತ್ರದ ಕಥಾವಸ್ತುವೇನು ಎಂದು ಅಂದಾಜಿಗೆ ಬರಬಹುದು. ಇತ್ತೀಚಿನ ದಿನಗಳಲ್ಲಿ “ಕನ್ನಡ್‌ ಗೊತ್ತಿಲ್ಲ’ ಎಂಬ ಮಾತುಗಳನ್ನು ಬಹಳಷ್ಟು ಕಡೆ ಕೇಳಿರಬಹುದು. ಅದರಲ್ಲೂ ಉತ್ತರ ಭಾರತೀಯರು ಬೆಂಗಳೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದು, ಅವರ ಬಾಯಲ್ಲಿ ಈ ಮಾತುಗಳು ಸರ್ವೇ ಸಾಮಾನ್ಯ. ಹೀಗೆ ಕನ್ನಡ ಕಲಿಯದೆ “ಕನ್ನಡ್‌ ಗೊತ್ತಿಲ್ಲ’ ಎನ್ನುವವರ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ. ಚಿತ್ರದ ಕಥೆ ಮತ್ತು ಹೆಸರೇ ಹೀರೋ ಎನ್ನುವ ಹರಿಪ್ರಿಯಾ, “ಇದುವರೆಗೂ ಯಾವುದೋ ಒಂದು ಪಾತ್ರವನ್ನು ಪ್ರತಿನಿಧಿಸುತ್ತಿದ್ದೆ. ಈಗ ಮೊದಲ ಬಾರಿಗೆ ಕನ್ನಡಿಗರನ್ನು ಪ್ರತಿನಿಧಿಸುವ ಒಂದೊಳ್ಳೆಯ ಅವಕಾಶ ಸಿಕ್ಕಿದೆ. ಕಥೆ ಮತ್ತು ಹೆಸರು ಕೇಳಿದ ತಕ್ಷಣ ಒಪ್ಪಿಕೊಂಡೆ’ ಎನ್ನುತ್ತಾರೆ ಹರಿಪ್ರಿಯಾ. ಈ ಚಿತ್ರದಲ್ಲಿ ಅವರು ಶ್ರುತಿ ಚಕ್ರವರ್ತಿ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ.

ಈ ಚಿತ್ರವನ್ನು ಮಯೂರ್‌ ರಾಘವೇಂದ್ರ ನಿರ್ದೇಶಿಸುತ್ತಿದ್ದಾರೆ. ಮೂಲತಃ ರೇಡಿಯೋ ಜಾಕಿ ಆಗಿರುವ ಮಯೂರ್‌, ಇದಕ್ಕೂ ಮುನ್ನ “ರಿಷಭ್‌ ಪ್ರಿಯ’ ಎಂಬ ಕಿರುಚಿತ್ರವೊಂದನ್ನು ನಿರ್ದೇಶಿಸಿದ್ದರು. ಈಗ “ಕನ್ನಡ್‌ ಗೊತ್ತಿಲ್ಲ’ ನಿರ್ದೇಶಿಸುವ ಸಾಹಸಕ್ಕೆ ಕೈ ಹಾಕಿರುವ ಅವರು, ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ. ಕುಮಾರ ಕಂಠೀರವ ಎನ್ನುವವರು ಈ ಚಿತ್ರದ ನಿರ್ಮಾಪಕರು. ಗಿರಿಧರ್‌ ದಿವಾನ್‌ ಅವರ ಛಾಯಾಗ್ರಹಣ ಮತ್ತು ನಕುಲ್‌ ಅಭಯಂಕರ್‌ ಅವರ ಸಂಗೀತ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.