ಹಾರರ್‌ ʼತಾಯ್ತʼದಲ್ಲಿ ಹರ್ಷಿಕಾ ನಟನೆ


Team Udayavani, Mar 29, 2023, 2:20 PM IST

tdy-12

“ತಾಯ್ತ’- ಹೀಗೊಂದು ಸಿನಿಮಾ ಸದ್ದಿ ಲ್ಲದೇ ಚಿತ್ರೀಕರಣ ಮುಗಿಸಿ, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟೀಸರ್‌ ರಿಲೀಸ್‌ ಆಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್‌, ಹಿರಿಯ ನಿರ್ದೇಶಕ ಸಾಯಿಪ್ರಕಾಶ್‌, ನಟ ಧರ್ಮ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್‌ ಬಿಡುಗಡೆ ಮಾಡಿ ಶುಭ ಕೋರಿದರು.

ಲಯ ಕೋಕಿಲ ಈ ಚಿತ್ರದ ನಿರ್ದೇಶಕರು. ಚಿತ್ರದ ಬಗ್ಗೆ ಮಾತನಾಡುವ ಅವರು, “ಯಾರಾದರೂ ತುಂಬಾ ಹೆದರಿಕೊಂಡಾಗ ತಾಯ್ತ ಕಟ್ಟಿಸಿ ಎಂದು ಹೇಳುತ್ತಾರೆ. ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ತಾಯ್ತ ಎಂದು ಹೆಸರಿಟ್ಟಿದ್ದೀನಿ. ಇದು ಪ್ರೇಮಕಥೆಯಾದರೂ, ಇದರಲ್ಲಿ ಹಾರರ್‌, ಥ್ರಿಲ್ಲರ್‌, ಕಾಮಿಡಿ ಎಲ್ಲವೂ ಇದೆ. ಶಾಹಿದ್‌ ಈ ಚಿತ್ರದ ನಿರ್ಮಾಪಕರು. ರಿಯಾನ್‌ ಈ ಚಿತ್ರದ ನಾಯಕ. ಹರ್ಷಿಕಾ ಪೂಣಚ್ಛ ನಾಯಕಿ. ಸಾಧುಕೋಕಿಲ, ಪುಷ್ಪಸ್ವಾಮಿ, ಶಾಹಿದ್‌, ಶೋಭರಾಜ್‌ ಅವರ ಜೊತೆಗೆ ನಾನು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಸಂಗೀತ ಕೂಡಾ ನೀಡಿದ್ದೇನೆ. ಇಂದು ಟೀಸರ್‌ ಬಿಡುಗಡೆಯಾಗಿದೆ’ಎಂದರು ಲಯಕೋಕಿಲ.

ನಾಯಕ ರಿಯಾನ್‌ ಕೂಡಾ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. “ಈ ಚಿತ್ರದಲ್ಲಿ ನಾನು ಖುಷಿ ಎಂಬ ಹೆಸರಿನ ಕಾಲೇಜು ವಿದ್ಯಾರ್ಥಿ ಪಾತ್ರದಲ್ಲಿ ನಟಿಸಿದ್ದೇನೆ. ಇದು ನಾನು ಅಭಿನಯಿಸಿರುವ ಮೊದಲ ಹಾರರ್‌ ಚಿತ್ರ. ಕಾಲೇಜ್‌ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಒಂದು ಸ್ಥಳಕ್ಕೆ ಹೋದಾಗ ಅಲ್ಲಿ ಏನೇನು ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುವುದು ನಾಯಕಿ ಹರ್ಷಿಕಾ ಪೂಣಚ್ಛ ಮಾತು.

“ಕಥೆ ಇಷ್ಟವಾಗಿ, ನಿರ್ಮಾಣಕ್ಕೆ ಮುಂದಾದೆ. ಚಿಕ್ಕಮಗಳೂರು, ಬೇಲೂರು ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ನಾನು ಕೂಡ ನಟಿಸಿದ್ದೇನೆ. ಚಿತ್ರ ತರೆಗೆ ಬರಲು ಸಿದ್ಧವಾಗಿದೆ’ ಎಂದರು ನಿರ್ಮಾಪಕ ಶಾಹಿದ್‌.

ಹಿರಿಯ ನಟಿ ಪುಷ್ಪಸ್ವಾಮಿ ಕೂಡಾ ಚಿತ್ರದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ

bill gates

ಹಳೆ ಪ್ರೇಮ ಪ್ರಕರಣದಿಂದ Bill Gates ಗೆ ಸಂಕಷ್ಟ!

congress flag

Karnataka: ಸಾಮಾಜಿಕ ಸಮಾನತೆ, ಪ್ರಾದೇಶಿಕ ಅಸಮಾನತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

agrasena kannada movie

ಟೀಸರ್ ನಲ್ಲಿ ‘ಅಗ್ರಸೇನಾ’

melody drama kannada movie

ಪ್ರೇಕ್ಷಕರ ಜತೆ ‘ಮೆಲೋಡಿ ಡ್ರಾಮಾ’ದ ಹೊಸ ಕಥೆ

naveen shankar’s kshetrapathi

‘ಕ್ಷೇತ್ರಪತಿ’ಯಾದ ನವೀನ್‌ ಶಂಕರ್‌

pinki elli kannada movie

ಥಿಯೇಟರ್‌ನತ್ತ ಪಿಂಕಿ ಎಲ್ಲಿ?: ಜೂ.2ರಂದು ಚಿತ್ರ ತೆರಗೆ

radha

ಜೂ.02ಕ್ಕೆ ‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ