ಕಲರ್‌ಫ‌ುಲ್‌ ಸೆಟ್‌ನಲ್ಲಿ ಹಿಡ್ಕ ಹಿಡ್ಕ… ಚಿತ್ರೀಕರಣ

ಶೂಟಿಂಗ್‌ನಲ್ಲಿ ಬ್ರಹ್ಮಚಾರಿ ಬಿಝಿ

Team Udayavani, Oct 16, 2019, 3:05 AM IST

ನೀನಾಸಂ ಸತೀಶ್‌ ನಾಯಕರಾಗಿ ನಟಿಸುತ್ತಿರುವ “ಬ್ರಹ್ಮಾಚಾರಿ’ ಚಿತ್ರಕ್ಕಾಗಿ “ಬಹದ್ದೂರ್‌’ ಚೇತನ್‌ ಕುಮಾರ್‌ ಅವರು ಬರೆದಿರುವ “ಹಿಡ್ಕ ಹಿಡ್ಕ ವಸಿ ಹಿಡ್ಕ ಹಿಡ್ಕ, ತಡ್ಕ ತಡ್ಕ ವಸಿ ತಡ್ಕ ತಡ್ಕ’ ಎಂಬ ಹಾಡಿನ ಚಿತ್ರೀಕರಣ ನೆಲಮಂಗಲ ಬಳಿಯ ಮೋಹನ್‌ ಬಿ ಕೆರೆ ಸ್ಟುಡಿಯೋದಲ್ಲಿ ನಡೆದಿದೆ. ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ ಅವರು ನಿರ್ಮಿಸಿದ್ದ ಅದ್ಧೂರಿ ಸೆಟ್‌ನಲ್ಲಿ ನಡೆದ ಈ ಹಾಡಿನ ಚಿತ್ರೀಕರಣದಲ್ಲಿ ನೀನಾಸಂ ಸತೀಶ್‌ ಹಾಗೂ ಅದಿತಿ ಪ್ರಭುದೇವ ಭಾಗವಸಿದ್ದರು.

ಮುರಳಿ ನೃತ್ಯ ಸಂಯೋಜನೆ ಮಾಡಿದ ಈ ಹಾಡನ್ನು ನವೀನ್‌ ಸಜ್ಜು ಹಾಡಿದ್ದಾರೆ. ಯುಕೆ ಮೆಹ್ತಾ ಎಂಟರ್‌ಪ್ರçಸಸ್‌ ಲಾಂಛನದಲ್ಲಿ ಉದಯ್‌ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಚಂದ್ರಮೋಹನ್‌ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಡಬ್ಬಲ್‌ ಇಂಜಿನ್‌’ ಹಾಗೂ “ಬಾಂಬೆ ಮಿಠಾಯಿ’ ಚಿತ್ರಗಳನ್ನು ಚಂದ್ರಮೋಹನ್‌ ನಿರ್ದೇಶಿಸಿದ್ದಾರೆ. ಕಾಮಿಡಿ ಹಾಗೂ ಕೌಟುಂಬಿಕ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ರವಿ ಕುಮಾರ್‌ ಅವರ ಛಾಯಾಗ್ರಹಣರುವ ಈ ಚಿತ್ರಕ್ಕೆ ಧರ್ಮ ವಿಶ್‌ ಸಂಗೀತ ನೀಡುತ್ತಿದ್ದಾರೆ. ಅರ್ಜುನ್‌ ಕಿಟ್ಟು ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ, ಪ್ರಕಾಶ್‌ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಶಿವರಾಜ್‌ ಕೆ.ಆರ್‌.ಪೇಟೆ, ಅಶೋಕ್‌, ಅಕ್ಷತ, ಅಚ್ಯುತ್‌ ಕುಮಾರ್‌, ಪದ್ಮಜಾ ರಾವ್‌, ದತ್ತಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ