‘ವಿಕ್ರಾಂತ್ ರೋಣ’ ಹಾಡಿಗೆ ಜಾಕ್ವೆಲಿನ್ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ?
Team Udayavani, Jul 8, 2021, 3:11 PM IST
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣದ ಹಾಡೊಂದಕ್ಕೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಡೀಸ್ರವರು ಹೆಜ್ಜೆ ಹಾಕಲಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಸದ್ಯ ಲೆಟೆಸ್ಟ್ ಮ್ಯಾಟರ್ ಏನಪ್ಪಾ ಅಂದ್ರೆ ಈ ಹಾಡಿಗಾಗಿ ಈ ನಟಿ ಪಡೆಯುತ್ತಿರುವ ಸಂಭಾವನೆ ಎಷ್ಟು ಎಂಬುದು ರಿವೀಲ್ ಆಗಿದೆ.
ಬಹು ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತ್ರಿಡಿ ಟೆಕ್ನಾಲಜಿಯಲ್ಲಿ ತೆರೆ ಮೇಲೆ ಬರಲಿದೆ. ಸದ್ಯ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಹಲವು ವಿಶೇಷಗಳೊಂದಿಗೆ ಮೂಡಿಬರುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಹಾಡೊಂದಕ್ಕೆ ಫರ್ನಾಡೀಸ್ ನೃತ್ಯ ಮಾಡಲಿದ್ದಾರೆ. ಸಿನಿಮಾದಲ್ಲಿ ಬರುವ ಕೇವಲ 5 ನಿಮಿಷದ ಹಾಡಿಗೆ ಡ್ಯಾನ್ಸ್ ಮಾಡಲು ಗ್ರೀನ್ ಸಿಗ್ನಲ್ ನೀಡುವ ಜಾಕ್ವೆಲಿನ್, ಇದಕ್ಕಾಗಿ ಬರೋಬ್ಬರಿ 3 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಮೇ ತಿಂಗಳಿನಲ್ಲಿಯೇ ನಡೆಯಬೇಕಾಗಿದ್ದ ಹಾಡಿನ ಶೂಟಿಂಗ್, ಕೊರೊನಾ ಲಾಕ್ಡೌನ್ನಿಂದಾಗಿ ಇದೀಗ ಅದ್ದೂರಿಯಾಗಿ ಬೆಂಗಳೂರಿನಲ್ಲಿ ಹಾಡನ್ನು ಚಿತ್ರೀಕರಿಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಈ ಹಾಡಿಗೆ ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.
ಈ ವರ್ಷದಲ್ಲಿ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಲಿದೆ. ಕನ್ನಡ, ತಮಿಳು, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ವಿಕ್ರಾಂತ್ ರೋಣ ತೆರೆ ಕಾಣಲಿದೆ.