ಖಾಕಿ ತೊಟ್ಟು ಖಡಕ್‌ ಆಫೀಸರ್‌ ಆದ ಡಾಲಿ: ‘ಹೊಯ್ಸಳ’ ಚಿತ್ರದ ಟೀಸರ್ ಔಟ್


Team Udayavani, Feb 5, 2023, 1:15 PM IST

ಖಡಕ್ ಪೊಲೀಸರ್ ಆಗಿ ನಟಿಸಿರುವ ಡಾಲಿ ಧನಂಜಯರವರ ‘ಹೊಯ್ಸಳ’ ಚಿತ್ರದ ಟೀಸರ್ ಔಟ್

ಕೆ.ಆರ್.ಜಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಿರುವ, ನಟ ರಾಕ್ಷಸ ಧನಂಜಯ ಅಭಿನಯದ ಬಹು ನಿರೀಕ್ಷಿತ ಚಿತ್ರ, “ಹೊಯ್ಸಳ” ದ ಟೀಸರ್ ಇಂದು ಬಿಡುಗಡೆಯಾಗಿದೆ.

ನಿಷ್ಠಾವಂತ – ಖಡಕ್ ಪೊಲೀಸ್ ಪಾತ್ರ ನಿರ್ವಹಿಸಿರುವ ನಟ ಧನಂಜಯ, ತಪ್ಪು ಮಾಡಿದವರ ಪಾಲಿಗೆ ಖಾಕಿ ತೊಟ್ಟ ಯಮನಾಗಿ ಕಾಣಿಸಿಕೊಂಡಿದ್ದಾರೆ.

ಟೀಸರ್ ಬಿಡುಗಡೆಯಾಗಿದ್ದು, ಭಾರತ ಸಿನಿಮಾಗಳಲ್ಲಿ ರಫ್ ಅಂಡ್ ಟಫ್ ಪೊಲೀಸ್ ಆಫೀಸರ್ ಗಳಾಗಿ ಕಾಣಿಸಿಕೊಂಡಿದ್ದ ಕನ್ನಡದ ಕಿಚ್ಚ ಸುದೀಪ, ತೆಲುಗು ನಟ ಅದಿವಿ ಶೇಷ್, ಮಲಯಾಳಂ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಕಾರ್ತಿ ರವರು ‘ಗ್ಲಿಮ್ಪ್ಸ್ ಆಫ್ ಗುರುದೇವ್’ ಅನ್ನು ಬಿಡುಗಡೆ ಮಾಡಿದರು. ಆಫೀಸರ್ ಗುರುದೇವ್ ಅಲಿಯಾಸ್ ಧನಂಜಯರವರನ್ನು ಅಭಿನಂದಿಸಿ ತಮ್ಮ ಪೊಲೀಸ್ ಗ್ಯಾಂಗ್ ಗೆ ಬರಮಾಡಿಕೊಂಡಿದ್ದಾರೆ.

ಹೊಯ್ಸಳ ಟೀಸರ್ ನಲ್ಲಿ ಧನಂಜಯರವರ ಖಾಕಿ ಖದರ್, ಹಾಗೂ ಡೈಲಾಗ್ ಗೆ ಜನ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಆನಂದ್ ಆಡಿಯೋ ಚಾನೆಲ್ ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಚಿತ್ರವು ಇದೇ ಮಾರ್ಚ್ ಬಿಡುಗಡೆಯಾಗಲಿದ್ದು ಡಾಲಿ ಧನಂಜಯ ರವರು ಪೊಲೀಸ್ ಆಫೀಸರ್  “ಗುರುದೇವ್” ಆಗಿ ಮಾರ್ಚ್ 30 ರಿಂದ ಚಾರ್ಜ್ ತೆಗೆದುಕೊಳ್ಳಲಿದ್ದಾರೆ.

ಡಾಲಿ ಧನಂಜಯರವರ 25ನೇ ಚಿತ್ರ ಇದಾಗಿದ್ದು, ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅರ್ಪಿಸುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಬ್ಯಾನರ್‌ನಡಿ  ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ರವರು ಚಿತ್ರವನ್ನು ನಿರ್ಮಿಸಿದ್ದಾರೆ.

ವಿಜಯ್.ಎನ್ ರವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ರವರು ಸಂಗೀತ ಸಂಯೋಜಿಸಿದ್ದು, ಕಾರ್ತಿಕ್ ಎಸ್ ರವರು ಛಾಯಾಗ್ರಾಹಕರಾಗಿದ್ಡಾರೆ.

ಸಂಕಲನ ದೀಪು ಎಸ್ ಕುಮಾರ್, ಸಂಭಾಷಣೆ ಮಾಸ್ತಿ ಅವರದು. ಧನಂಜಯ ಹಾಗೂ ಅಮೃತ ಅಯ್ಯಂಗಾರ್ ಜೋಡಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v manohar directed movie darbar

‘ದರ್ಬಾರ್’: 23 ವರ್ಷದ ಬಳಿಕ ನಿರ್ದೇಶನಕ್ಕೆ ಬಂದ ವಿ.ಮನೋಹರ್

ಹೂವುಗಳ ಮಧ್ಯೆ ಖುಷಿಯೋ ಖುಷಿ; ದಿಯಾ ನಟಿ ಸ್ಟೈಲಿಶ್‌ ಫೋಟೋಶೂಟ್‌

ಹೂವುಗಳ ಮಧ್ಯೆ ಖುಷಿಯೋ ಖುಷಿ; ದಿಯಾ ನಟಿ ಸ್ಟೈಲಿಶ್‌ ಫೋಟೋಶೂಟ್‌

ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ..

ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ ನಲ್ಲಿ ಪ್ರೇಕ್ಷಕರ ಮುಂದೆ..

priyanka kumar

ಶ್ರೇಯಸ್‌ ಗೆ ಜೋಡಿಯಾದ ಪ್ರಿಯಾಂಕಾ ಕುಮಾರ್

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ