ಪ್ರೀತಿ ಮತ್ತು ಕ್ರಾಂತಿಯ ನಡುವೆ ನಾನು ಮತ್ತು ಜಾನು

Team Udayavani, Dec 10, 2017, 12:01 PM IST

Naanu-Loves-Jaanu-2.jpg

ಕನ್ನಡ ಚಿತ್ರರಂಗದಲ್ಲಿ ಹೊಸಬರಿಗೆ ಹಾಗೂ ಹೊಸ ಚಿತ್ರಗಳಿಗೆ ಬರವಿಲ್ಲ. ಈಗಂತೂ ಹೊಸ ಆಸೆ, ಆಕಾಂಕ್ಷೆಗಳನ್ನು ಹೊತ್ತು ಬರುವವರ ಸಂಖ್ಯೆಗೇನೂ ಕಮ್ಮಿ ಇಲ್ಲ. ಅಂತಹ ಹೊಸ ತಂಡವೊಂದು ಹೊಸತನದ ಚಿತ್ರದೊಂದಿಗೆ ಗಾಂಧಿನಗರಕ್ಕೆ ಕಾಲಿಟ್ಟಿದೆ. “ನಾನು ಲವ್ವರ್‌ ಆಫ್ ಜಾನು’ ಸಿನಿಮಾ ಮೂಲಕ ಸುರೇಶ್‌ ಜಿ. ನಿರ್ದೇಶಕರಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಕೆಲಸ ಮಾಡಿರುವವರೆಲ್ಲರಿಗೂ ಇದು ಮೊದಲ ಅನುಭವ. ನಿರ್ದೇಶಕ ಸುರೇಶ್‌ ಅವರಿಗೆ ಇದು ಚೊಚ್ಚಲ ಚಿತ್ರವಾದರೂ ಈ ಹಿಂದೆ ಕೆಲ ಚಿತ್ರಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. ಹೊಸಬರೇ ಸೇರಿ ಮಾಡಿರುವ “ನಾನು ಲವ್ವರ್‌ ಆಫ್ ಜಾನು’ ಬಗ್ಗೆ ಒಂದಷ್ಟು…

“ನಾನು ಲವ್ವರ್‌ ಆಫ್ ಜಾನು’ ಚಿತ್ರದ ಮೂಲಕ ಬಾರಿಗೆ ಸುರೇಶ್‌ ಜಿ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರಾದರೂ, ಸಾಕಷ್ಟು ಅನುಭವ ಪಡೆದುಕೊಂಡೇ ಚಿತ್ರ ನಿರ್ದೇಶನಕ್ಕಿಳಿದಿದ್ದಾರೆ. ಕಳೆದ ಆರೇಳು ವರ್ಷಗಳಿಂದಲೂ ಚಿತ್ರರಂಗದಲ್ಲಿರುವ ಅವರು, “ಗೊಂಬೆಗಳ ಲವ್‌’ ಮತ್ತು ‘ಪಯಣ’ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಆ ಬಳಿಕ ಒಂದಷ್ಟು ಚಿತ್ರಗಳಿಗೆ ಸ್ಕ್ರಿಪ್ಟ್ ಕೆಲಸವನ್ನೂ ಮಾಡಿದ್ದಾರೆ.

ಈಗ “ನಾನು ಲವ್ವರ್‌ ಆಫ್ ಜಾನು’ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಬಹುತೇಕ ಹೊಸಬರೇ ಕೆಲಸ ಮಾಡಿದ್ದಾರೆ. ನಾಯಕ ಮತ್ತು ನಾಯಕಿ ಇಬ್ಬರಿಗೂ ಇದು ಹೊಸ ಅನುಭವ. ಆದರೆ, ಅವರ್ಯಾರು, ಹೆಸರೇನು ಎಂಬುದನ್ನು ಗೌಪ್ಯವಾಗಿಡುತ್ತಾರೆ ನಿರ್ದೇಶಕರು. ಯಾಕೆ? ಎಂಬ ಪ್ರಶ್ನೆಯನ್ನು ಅವರ ಮುಂದಿಟ್ಟರೆ, “ಹೊಸತನದ ಕಥೆ ಹೆಣೆದಿರುವುದರಿಂದ ಹೊಸ ನಾಯಕ, ನಾಯಕಿ ಇಲ್ಲಿದ್ದಾರೆ.

ಅವರನ್ನು ಈಗಲೇ ಪರಿಚಯಿಸುವುದಿಲ್ಲ. ವಿಶೇಷ ಕಾರ್ಯಕ್ರಮದ ಮೂಲಕ ಅವರಿಬ್ಬರನ್ನೂ ಪರಿಚಯಿಸುತ್ತೇನೆ’ ಎಂದಷ್ಟೇ ಹೇಳಿ ಸುಮ್ಮನಾಗುತ್ತಾರೆ ನಿರ್ದೇಶಕ ಸುರೇಶ್‌. ಹಾಗಾದರೆ, ಈ “ನಾನು ಲವ್ವರ್‌ ಜಾನು’ ಚಿತ್ರ ಯಾವ ಜಾತಿಗೆ ಸೇರಿದ್ದು? “ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಪ್ರೀತಿ ಕುರಿತಾದ ಚಿತ್ರ. 16 ರಿಂದ 60 ವರ್ಷದವರು ಕುಳಿತು ನೋಡಬಹುದಾದ ಅಪ್ಪಟ ಭಾವನಾತ್ಮಕ ಸಂಬಂಧಗಳ ಸುತ್ತ ಸಾಗುವ ಚಿತ್ರ.

ಎಲ್ಲಾ ಚಿತ್ರಗಳಲ್ಲೂ ಪ್ರೀತಿ ಕಥೆಗಳು ಸಹಜ. ಆದರೆ, ಇಲ್ಲೂ ಪ್ರೀತಿಯ ಕಥೆ ಇದ್ದರೂ, ಅದಕ್ಕೊಂದು ಹೊಸ ಸ್ಪರ್ಶ ಕೊಡಲಾಗಿದೆ. ಈಗಿನ ಟ್ರೆಂಡ್‌ಗೆ ತಕ್ಕಂತೆ ಕಥೆ ಹೆಣೆಯಲಾಗಿದೆ. ಬೆಂಗಳೂರು, ಮಂಗಳೂರು, ತುಮಕೂರು ಮತ್ತು ಚಿಕ್ಕಮಗಳೂರು ಸುತ್ತಮುತ್ತಲ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ ಎಂದು ವಿವರ ಕೊಡುತ್ತಾರೆ ನಿರ್ದೇಶಕರು.

ಈಗಾಗಲೇ ಚಿತ್ರದ ಟೀಸರ್‌ವೊಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಅದಕ್ಕೆ ಸಿಕ್ಕಿರುವ ಪ್ರತಿಕ್ರಿಯೆ ನೋಡಿ ಫ‌ುಲ್‌ ಖುಷಿಯ ಮೂಡ್‌ನ‌ಲ್ಲಿದೆ. ಅಂದಹಾಗೆ, ಜಯಣ್ಣ ಮತ್ತು ಭೋಗೇಂದ್ರ ಟೀಸರ್‌ ಬಿಡುಗಡೆ ಮಾಡಿದ್ದಾರೆ. ಬಿಡುಗಡೆಯಾಗಿರುವ ಟೀಸರ್‌ಗೊಂದು ವಿಶೇಷವೂ ಇದೆ. ಆ ಟೀಸರ್‌ನಲ್ಲೂ ನಾಯಕ ಮತ್ತು ನಾಯಕಿಯನ್ನೆಲ್ಲಿ ತೋರಿಸಿಲ್ಲ. ಟೀಸರ್‌ನಲ್ಲಿ ನಾಯಕ-ನಾಯಕಿ ಇದ್ದರೂ ಸಹ, ಅವರು ಸ್ಪಷ್ಟವಾಗಿ ಗೋಚರಿಸುವುದಿಲ್ಲ.

ಅಂಥದ್ದೊಂದು ಟೀಸರ್‌ ಬಿಡುಗಡೆ ಮಾಡಿ, ಒಂದಷ್ಟು ಕುತೂಹಲ ಮೂಡಿಸಿದ್ದಾರೆ ನಿರ್ದೇಶಕರು. ಈ ಟೀಸರ್‌ನ ಮತ್ತೂಂದು ವಿಶೇಷವೆಂದರೆ, ಟೀಸರ್‌ಗೆ ನಿರ್ದೇಶಕ ಯೋಗರಾಜ್‌ಭಟ್‌ ಅವರು ಹಿನ್ನೆಲೆ ಧ್ವನಿ ಕೊಟ್ಟಿದ್ದಾರೆ. ಅವರ ಹಿನ್ನೆಲೆ ಧ್ವನಿಯಲ್ಲಿ ಮೂಡಿಬಂದಿರುವ ಟೀಸರ್‌ ಸಾಕಷ್ಟು ಸದ್ದು ಮಾಡಿರುವುದರಿಂದ ಚಿತ್ರತಂಡಕ್ಕೆ ಇನ್ನಷ್ಟು ಉತ್ಸಾಹ ಬಂದಿದೆ.

ಹಾಗಾದರೆ, ಇದರ ಕಥೆ ಏನು? “ಕ್ರಾಂತಿ ಮತ್ತು ಪ್ರೀತಿ’ ಎಂದು ಒನ್‌ಲೈನ್‌ ಹೇಳಿ ಸುಮ್ಮನಾಗುತ್ತಾರೆ ನಿರ್ದೇಶಕ ಸುರೇಶ್‌. ಒಂದು ಪ್ರೀತಿ ಇದೆ ಅಂದಮೇಲೆ, ಅಲ್ಲಿ ದ್ವೇಷವೂ ಇರುತ್ತೆ. ಇಲ್ಲೂ ಅದೆಲ್ಲಾ ಇದ್ದರೂ, ಸಮಾಜದೊಳಗಿನ ಕ್ರಾಂತಿ ನಡುವೆ ಪ್ರೀತಿ ಗೆಲ್ಲುತ್ತಾ ಅನ್ನುವುದನ್ನು ಸೂಕ್ಷ್ಮವಾಗಿ ಹೇಳಿದ್ದಾರಂತೆ ನಿರ್ದೇಶಕರು. ಚಿತ್ರದಲ್ಲಿ ಚಿಕ್ಕಣ್ಣ, ಸುಚೇಂದ್ರ ಪ್ರಸಾದ್‌, ರಾಕ್‌ಲೈನ್‌ ವೆಂಕಟೇಶ್‌, ಹರಿಣಿ ಸೇರಿದಂತೆ ಇತರೆ ಕಲಾವಿದರು ನಟಿಸಿದ್ದಾರೆ.

ಶ್ರೀನಾಥ್‌ ವಿಜಿ ಸಂಗೀತ ನೀಡಿದ್ದಾರೆ. ಶಿವು ಕ್ಯಾಮೆರಾ ಹಿಡಿದರೆ, ರಾಜ್‌ಶಿವ ಸಂಕಲನ ಮಾಡಿದ್ದಾರೆ. ಕಲಾತಪಸ್ವಿ ಬ್ಯಾನರ್‌ನಲ್ಲಿ ಐವರು ಗೆಳೆಯರು ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಂದ್ರು, ರಾಜು ಕಲ್‌ಕುಣಿಕೆ, ವಿಷ್ಣು ಭಂಡಾರಿ,ರವಿಶಂಕರ್‌ ಮತ್ತು ಮೂಡ್ಲಿರಾಮ್‌ ಚಿತ್ರದ ನಿರ್ಮಾಪಕರು. ಚಿತ್ರದಲ್ಲಿ ಹಾಡು ಮತ್ತು ಫೈಟ್‌, ಚೇಸಿಂಗ್‌ ಹೈಲೈಟ್‌. ವಿಕ್ರಂ ಫೈಟ್‌ ಮಾಡಿಸಿದ್ದಾರೆ.

ಇನ್ನು, ನಾಗೇಂದ್ರಪ್ರಸಾದ್‌ ಅವರೇ ನಾಲ್ಕು ಹಾಡುಗಳನ್ನು ರಚಿಸಿದ್ದಾರೆ. ವಿಜಯಪ್ರಕಾಶ್‌, ಶ್ರೇಯಾ ಘೋಷಾಲ್‌, ಕಾರ್ತಿಕ್‌, ಚಿನ್ಮಯಿ, ಹರಿಚರಣ್‌ ಹಾಡಿದ್ದಾರೆ.  ಕಳೆದ ಎರಡು ವರ್ಷಗಳ ಹಿಂದೆ ಶುರುವಾಗಿದ್ದ ಈ ಚಿತ್ರ ಈಗ ಬಿಡುಗಡೆಗೆ ರೆಡಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಹೊಸ ವರ್ಷಕ್ಕೆ ಪ್ರೇಕ್ಷಕರ ಮುಂದೆ ಬರಲಿದೆ.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.