ಇಂದು ದಾವಣಗೆರೆಯಲ್ಲಿ “ಐ ಲವ್‌ ಯು’ ಆಡಿಯೋ

Team Udayavani, Feb 3, 2019, 5:40 AM IST

ಉಪೇಂದ್ರ ಅಭಿನಯದ, ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ “ಐ ಲವ್‌ ಯು’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಇಂದು ದಾವಣಗೆರೆಯ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಸಂಜೆ 5 ಗಂಟೆಗೆ ಆರಂಭವಾಗಲಿರುವ ಈ ಸಮಾರಂಭದ ವೇದಿಕೆಯಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್‌ ಮತ್ತು ತಂಡದಿಂದ ರಸಮಂಜರಿ, ಮೋಹನ್‌ ತಂಡದಿಂದ ನೃತ್ಯ ಪ್ರದರ್ಶನ ನಡೆಯಲಿದೆ.

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಮಜಾಭಾರತದ ಸ್ಪರ್ಧಿಗಳು ಕಾಮಿಡಿ ಡ್ರಾಮಾವನ್ನು ಪ್ರದರ್ಶಿಸಲಿದ್ದಾರೆ. ಇವರೊಂದಿಗೆ ಸ್ಯಾಂಡಲ್‌ವುಡ್‌ನ‌ ಅನೇಕ ತಾರೆಯರು ಕೂಡ ಜನಪ್ರಿಯ ಹಾಡುಗಳಿಗೆ ಈ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಲಿದ್ದಾರೆ. ಸಮಾರಂಭಕ್ಕಾಗಿ ಕಳೆದ ಕೆಲ ದಿನಗಳಿಂದ ಭರ್ಜರಿ ತಯಾರಿ ನಡೆಯುತ್ತಿದ್ದು, ಮೈದಾನದಲ್ಲಿ ಬೃಹತ್‌ ವೇದಿಕೆ ಕೂಡ ಸಿದ್ದವಾಗಿದೆ.

ಇನ್ನು ಈ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ. “ಐ ಲವ್‌ ಯು’ ಚಿತ್ರದಲ್ಲಿ ನಟ ಉಪೇಂದ್ರ ಅವರಿಗೆ ನಾಯಕಿಯಾಗಿ ರಚಿತಾ ರಾಮ್‌ ಮತ್ತು ಸೋನು ಗೌಡ ಜೋಡಿಯಾಗಿದ್ದಾರೆ. ಉಳಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಸದ್ಯ “ಐ ಲವ್‌ ಯು’ ಚಿತ್ರದ ಟ್ರೇಲರ್‌ಗಳು ಜೋರಾಗಿ ಸದ್ದು ಮಾಡುತ್ತಿದ್ದು, ಹಾಡುಗಳು ಹೇಗಿರಲಿವೆ ಅನ್ನೋ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ