ಉಪ್ಪಿ ಬರ್ತ್ಡೇಗೆ ಐ ಲವ್ ಯೂ ಮೋಶನ್ ಪೋಸ್ಟರ್
Team Udayavani, Sep 16, 2018, 11:18 AM IST
ಸೆಪ್ಟೆಂಬರ್ 18, ಉಪೇಂದ್ರ ಅವರ ಹುಟ್ಟುಹಬ್ಬ. ಈ ಬಾರಿ ಅವರ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಅವರ ಹೊಸ ಚಿತ್ರ “ಐ ಲವ್ ಯೂ’ನ ಇನ್ನಷ್ಟು ಅಪ್ಡೇಟ್ಸ್ ಸಿಗಲಿವೆ. ಅದು ಹೇಗೆ ಅಂತೀರಾ? ಮೋಶನ್ ಪೋಸ್ಟರ್ ಮೂಲಕ. ಹೌದು, ಆರ್.ಚಂದ್ರು ನಿರ್ಮಾಣ, ನಿರ್ದೇಶನದ “ಐ ಲವ್ ಯೂ’ ಚಿತ್ರದ ಮೋಶನ್ ಪೋಸ್ಟರ್ ಉಪೇಂದ್ರ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ.
ವಿಶೇಷ ಅಂದರೆ ಉಪ್ಪಿ ಅವರ ಅಭಿಮಾನಿಗಳೇ ಈ ಮೋಶನ್ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ. ಅಂದು ಉಪ್ಪಿ ಅವರ ಕನಸಿನ ಪ್ರಜಾಕೀಯ ಪಕ್ಷದ ಕಾರ್ಯಕ್ರವೂ ಇದ್ದು, ಅಲ್ಲೇ ಅಭಿಮಾನಿಗಳು ಮೋಶನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಿದ್ದಾರೆ. ಉಪೇಂದ್ರ ಹಾಗೂ ರಚಿತಾ ರಾಮ್ ಮುಖ್ಯಭೂಮಿಕೆಯಲ್ಲಿರುವ “ಐ ಲವ್ ಯೂ’ ಚಿತ್ರ ಈ ವರ್ಷದ ಬಹುನಿರೀಕ್ಷೆಯ ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಈಗಾಗಲೇ ಉಪೇಂದ್ರ ಅವರ ವಿಭಿನ್ನ ಗೆಟಪ್ ಚಿತ್ರದ ಬಗೆಗಿನ ಕುತೂಹಲವನ್ನು ಹೆಚ್ಚಿಸಿದೆ. ಜೊತೆಗೆ ರಚಿತಾ ರಾಮ್ ಕೂಡಾ ಸಖತ್ ಬೋಲ್ಡ್ ಆಗಿ ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗೆ ಅನೇಕ ಕಾರಣಗಳಿಂದ ಕುತೂಹಲ ಕೆರಳಿಸಿರುವ ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಎರಡು ಹಾಡು ಹಾಗೂ ಫೈಟ್ ಬಾಕಿ ಇದೆ.
ಇದು “ಎ’, “ಉಪೇಂದ್ರ’ ಹಾಗೂ “ಪ್ರೀತ್ಸೆ’ ಶೈಲಿಯ ಲವ್ಸ್ಟೋರಿಯಾಗಿದ್ದು, ಉಪೇಂದ್ರ ಅವರ ಪಾತ್ರ ಕೂಡಾ ವಿಭಿನ್ನವಾಗಿದೆ ಎನ್ನಲಾಗಿದೆ. ಈ ಮೂರು ಶೈಲಿಯ ಜೊತೆಗೆ ಚಂದ್ರು ಅವರ ಶೈಲಿ ಇರಲಿದೆಯಂತೆ. ಈಗಿನ ಟ್ರೆಂಡ್ನಲ್ಲಿ ಉಪೇಂದ್ರ ಅವರು ಪ್ರೀತಿಯನ್ನು ಹೇಗೆ ನೋಡುತ್ತಾರೆ, ಪ್ರೀತಿ ಎಲ್ಲಿ ಪ್ರಾಮುಖ್ಯತೆ ಪಡೆಯುತ್ತದೆ ಸೇರಿದಂತೆ ಹಲವು ಅಂಶಗಳನ್ನು ಇಲ್ಲಿ ಹೇಳಲಾಗಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!