ಚಿತ್ರರಂಗದಲ್ಲೇ ಮುಂದುವರೆಯುತ್ತೇನೆ


Team Udayavani, Oct 1, 2018, 11:50 AM IST

aishani.jpg

ಐಶಾನಿ ಶೆಟ್ಟಿ – ಈ ಹೆಸರನ್ನು ನೀವು ಕೇಳಿರುತ್ತೀರಿ. ಯೋಗರಾಜ್‌ ಭಟ್ಟರ “ವಾಸ್ತು ಪ್ರಕಾರ’, ನೀನಾಸಂ ಸತೀಶ್‌ ನಾಯಕರಾಗಿರುವ “ರಾಕೆಟ್‌’ ಚಿತ್ರಗಳಲ್ಲಿ ನಟಿಸಿರುವ ಐಶಾನಿ, ಇತ್ತೀಚೆಗೆ ಎರಡು ವರ್ಷಗಳಿಂದ ಚಿತ್ರರಂಗದಿಂದ ದೂರವೇ ಇದ್ದರು. ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ತನ್ನ ಪಾಡಿಗಿದ್ದ ಐಶಾನಿ ಶೆಟ್ಟಿ ಈಗ ಮತ್ತೆ ಬಂದಿದ್ದಾರೆ. “ನಡುವೆ ಅಂತರವಿರಲಿ’ ಎಂಬ ಸಿನಿಮಾದಲ್ಲಿ ನಾಯಕಿಯಾಗಿದ್ದು, ಚಿತ್ರ ಈ ವಾರ ತೆರೆಕಾಣುತ್ತಿದೆ. 

ಎಲ್ಲಾ ಓಕೆ, ಐಶಾನಿ ಎರಡು ವರ್ಷ ಬ್ರೇಕ್‌ ತಗೊಂಡಿದ್ದು ಯಾಕೆ ಎಂದರೆ ಕಾಲೇಜ್‌ ಎನ್ನುತ್ತಾರೆ. ಐಶಾನಿ ಶೆಟ್ಟಿ ಕಾಲೇಜು ಓದುತ್ತಿದ್ದಾಗಲೇ ಸಿನಿಮಾಕ್ಕೆ ಬಂದವರು. ಸಹಜವಾಗಿಯೇ ಓದು, ಸಿನಿಮಾ ಎರಡನ್ನೂ ಬ್ಯಾಲೆನ್ಸ್‌ ಮಾಡೋದು ಕಷ್ಟವಾದ ಕಾರಣ, ಐಶಾನಿ ಒಪ್ಪಿಕೊಂಡ ಪ್ರಾಜೆಕ್ಟ್ಗಳನ್ನು ಮುಗಿಸಿ ಒಂದು ನಿರ್ಧಾರಕ್ಕೆ ಬಂದು ಬಿಟ್ಟರು. ಅದು ಓದು ಮುಗಿಯುವವರೆಗೆ ಯಾವುದೇ ಸಿನಿಮಾ ಮಾಡಬಾರದು ಎಂದು.

ಅದರಂತೆ ಮಾಸ್ಟರ್‌ ಡಿಗ್ರಿ ಮುಗಿಸಿರುವ ಐಶಾನಿ ಈಗ ಮತ್ತೆ ಎಂಟ್ರಿಕೊಟ್ಟಿದ್ದಾರೆ. ಈ ನಡುವೆಯೇ “ಕಾಜಿ’ ಎಂಬ ಕಿರುಚಿತ್ರ ನಿರ್ದೇಶಿಸಿ, ಮೆಚ್ಚುಗೆಯ ಜೊತೆಗೆ ಪ್ರಶಸ್ತಿಗಳನ್ನು ಕೂಡಾ ಪಡೆದುಕೊಂಡಿದ್ದರು. ಈ ನಡುವೆಯೇ ಅವರು “ನಡುವೆ ಅಂತರವಿರಲಿ’ ಸಿನಿಮಾ ಒಪ್ಪಿಕೊಂಡಿದ್ದು, ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದಾರೆ. ಹಾಗಾದರೆ ಮುಂದೆ ಐಶಾನಿ ಸಿನಿಮಾ ಕ್ಷೇತ್ರದಲ್ಲಿ ಮುಂದುವರಿಯುತ್ತಾರಾ ಎಂದು ನೀವು ಕೇಳಬಹುದು.

“ಖಂಡಿತಾ ಮುಂದುವರೆಯುತ್ತೇನೆ’ ಎಂಬ ಉತ್ತರ ಐಶಾನಿಯಿಂದ ಬರುತ್ತದೆ. “ನನ್ನ ಎಜುಕೇಶನ್‌ಗೊಸ್ರ ನಾನು ಬ್ರೇಕ್‌ ತಗೊಂಡಿದ್ದೆ. ಈಗ ನನ್ನ ಮಾಸ್ಟರ್‌ ಡಿಗ್ರಿ ಮುಗಿಯಿತು. ಮುಂದೆ ಚಿತ್ರರಂಗದಲ್ಲೇ ಕೆರಿಯೆರ್‌ ಮುಂದುವರೆಸುತ್ತೇನೆ’ ಎನ್ನುತ್ತಾರೆ. ಈಗಾಗಲೇ ಐಶಾನಿ ಒಂದಷ್ಟು ಕಥೆಗಳನ್ನು ಕೇಳಿದ್ದು, ಸದ್ಯದಲ್ಲೇ ಅದರಲ್ಲಿ ಒಂದನ್ನು ಅಂತಿಮ ಮಾಡಲಿದ್ದಾರೆ.

ಅದಕ್ಕೂ ಮುನ್ನ “ನಡುವೆ ಅಂತರವಿರಲಿ’ ಚಿತ್ರವನ್ನು ಜನ ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲ ಐಶಾನಿಗಿದೆ. ಹದಿ ಹರೆಯದ ಪ್ರೀತಿ ಪ್ರೇಮದ ಕುರಿತಾಗಿ ಈ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಐಶಾನಿ ಕೂಡಾ ಬೋಲ್ಡ್‌ ಆಗಿ ನಟಿಸಿದ್ದಾರೆ. “ಕಥೆ, ಪಾತ್ರ ತುಂಬಾ ಚೆನ್ನಾಗಿದೆ. ಹೊಸ ಬಗೆಯ ಪಾತ್ರವದು. ಚಿತ್ರದಲ್ಲಿ ಯೂತ್ಸ್ ಜೊತೆಗೆ ಪೋಷಕರಿಗೂ ಒಂದು ಸಂದೇಶವಿದೆ. ಚಿತ್ರದಲ್ಲಿ ಬೋಲ್ಡ್‌ ಅನ್ನುವುದಕ್ಕಿಂತ ವಿಭಿನ್ನವಾದ ಪಾತ್ರ ಸಿಕ್ಕಿದೆ’ ಎನ್ನುವುದು ಐಶಾನಿ ಮಾತು. 

ಟಾಪ್ ನ್ಯೂಸ್

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.