
ಕನ್ನಡ ಚಿತ್ರರಂಗದ ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ; ಗಣ್ಯರ ಸಂತಾಪ
ಸೂರ್ಯವಂಶ ಸೇರಿದಂತೆ ಸುಮಾರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದರು.
Team Udayavani, Jan 23, 2023, 10:41 AM IST

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲಕ್ಷ್ಮಣ್(74ವರ್ಷ) ಅವರು ಸೋಮವಾರ (ಜನವರಿ 23) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬೆಂಗಳೂರಿನ ಮೂಡಲಪಾಳ್ಯದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕೇವಲ 20 ರೂ.ಗಾಗಿ ಪಾನಿಪುರಿ ವ್ಯಾಪಾರಿಯ ಹೊಟ್ಟೆಗೆ ಚೂರಿ ಇರಿದ ವ್ಯಕ್ತಿ
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಲಕ್ಷ್ಮಣ್ ಅವರು ಕೆಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದಿದ್ದರು ಎಂದು ವರದಿ ತಿಳಿಸಿದೆ.
ಖಳನಟನ ಪಾತ್ರದಿಂದಲೇ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮಣ್ ಅವರು ಯಜಮಾನ, ಮಲ್ಲ, ಸೂರ್ಯವಂಶ ಸೇರಿದಂತೆ ಸುಮಾರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಅಭಿನಯಿಸಿದ್ದರು.
ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಅಂಬರೀಶ್, ರವಿಚಂದ್ರನ್ ಸೇರಿದಂತೆ ಹಲವು ನಟರ ಜೊತೆ ಲಕ್ಷ್ಮಣ್ ನಟಿಸಿದ್ದರು. ಲಕ್ಷ್ಮಣ್ ಅವರ ನಿಧನಕ್ಕೆ ಸ್ಯಾಂಡಲ್ ವುಡ್ ನ ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಸಂಜೆ ಲಕ್ಷ್ಮಣ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್ ಮಾಡಿಸಿದ ಅಭಿಮಾನಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ