ಜೈ ಹೋ ಕನ್ನಡಿಗ ಹಾಡು ಬಂತು
Team Udayavani, Jan 1, 2022, 3:38 PM IST
“ಜೈ ಹೋ ಕನ್ನಡಿಗ’ ಹೀಗೊಂದು ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶಿವ ಎನ್ನುವವರು ಜೈಹೋ ಕನ್ನಡಿಗ ಎಂಬ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಈ ಹಾಡನ್ನು ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಣೆ ಮಾಡಿದ್ದಾರೆ.
ಈ ಹಾಡಿನಲ್ಲಿ ಜೆ.ಆರ್. ಶಿವ, ಹಂಸಲೇಖ, ವಿ.ಮನೋಹರ್, ಸಿ.ಆರ್. ಮನೋಹರ್, ವಿ.ನಾಗೇಂದ್ರ ಪ್ರಸಾದ್, ದೊಡ್ಡರಂಗೇಗೌಡ, ಸಾಲುಮರದ ತಿಮ್ಮಕ್ಕ, ಕೆ.ಮಂಜು, ಅನಿರುದ್ಧ್, ಶ್ರೀಧರ್ ವಿ ಸಂಭ್ರಮ್, ಮಾಸ್ಟರ್ ಆನಂದ್, ಧರ್ಮ ಕೀರ್ತಿರಾಜ್, ಧರ್ಮ ಹಾಗೂ ಪೊಲೀಸ್ ಅಧಿಕಾರಿಗಳು, ಸಾಕಷ್ಟು ಸಂಖ್ಯೆಯಲ್ಲಿ ಕಲಾವಿದರು, ಮಕ್ಕಳು ಅಭಿನಯಿಸಿದ್ದಾರೆ.
ನಾನು ಒರಟ ಐ ಲವ್ ಯು ಚಿತ್ರ ಮಾಡಿದಾಗಿನಿಂದಲೂ ಶಿವ ನನಗೆ ಪರಿಚಯ. ಕನ್ನಡದ ಹಿರಿಮೆ ಸಾರುವ ಈ ಹಾಡು ತುಂಬಾ ಚೆನ್ನಾಗಿದೆ. ಇಂತಹ ಇನ್ನೂ ಸಾಕಷ್ಟು ಹಾಡುಗಳು ಶಿವ ಅವರು ರಚಿಸಲಿ. ಅವರಿಗೆ ಬೇಕಾದ ಸಹಕಾರ ನೀಡುತ್ತೇನೆ ಎನ್ನುತ್ತಾ ಶುಭ ಹಾರೈಸಿದರು ನಿರ್ಮಾಪಕ ಸಿ.ಆರ್.ಮನೋಹರ್.
“ಇದು ನನ್ನೊಬ್ಬನಿಂದ ಆಗಿಲ್ಲ. ನನ್ನ ಹಿಂದೆ ಸಾಕಷ್ಟು ಜನರಿದ್ದಾರೆ. ತುಂಬಾ ದಿನಗಳ ನಂತರ ನಾನು ಈ ಕ್ಷೇತ್ರಕ್ಕೆ ಬಂದಿದ್ದೀನಿ. ನನ್ನ ಜೀವನದಲ್ಲಿ ಮೂರು ಜನ ಗಾಡ್ ಫಾದರ್ ಇದ್ದಾರೆ. ಒಬ್ಬರು ನನ್ನ ತಂದೆ. ಇನ್ನೊಬ್ಬರು ಅಪ್ಪು ಹಾಗೂ ಮತ್ತೂಬ್ಬರು ಸಿ.ಆರ್.ಮನೋಹರ್’ ಎನ್ನುವುದು ಶಿವ ಅವರ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ