
Jalapatha trailer: ಟ್ರೇಲರ್‌ನಲ್ಲಿ ಜಲಪಾತ
Team Udayavani, Sep 27, 2023, 3:53 PM IST

ಮಲೆನಾಡ ಪರಿಸರ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ “ಜಲಪಾತ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ದೆ. ಈ ಚಿತ್ರವನ್ನು ರಮೇಶ್ ಬೇಗಾರ್ ನಿರ್ದೇಶಿಸುತ್ತಿದ್ದಾರೆ. “ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಟ್ರೇಲರ್‌ಗೆ ಜನಮೆಚ್ಚುಗೆ ಬರುತ್ತಿದೆ. ಚಿತ್ರ ಅಕ್ಟೋಬರ್ 6 ರಂದು ತೆರೆಗೆ ಬರಲಿದೆ’ ಎಂದರು ನಿರ್ದೇಶಕ ರಮೇಶ್ ಬೇಗಾರ್. “ನಾನು ಪರಿಸರ ತಜ್ಞ ಎಲ್ಲಪ್ಪ ರೆಡ್ಡಿ ಅವರ ಶಿಷ್ಯ. ಪರಿಸರದ ಬಗ್ಗೆ ಕಾಳಜಿ ಹೆಚ್ಚು. ರಮೇಶ್ ಬೇಗಾರ್ ಅವರ ಕಥೆ ಇಷ್ಟವಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ’ ಎನ್ನುವುದು ನಿರ್ಮಾಪಕ ಟಿ.ಸಿ.ರವೀಂದ್ರ ತುಂಬರಮನೆ ಮಾತು. ನಾಗಶ್ರೀ ಬೇಗಾರ್ ಈ ಚಿತ್ರದ ನಾಯಕಿ.
“ಪದವಿ ಪೂರ್ವ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಾನು ಈ ಚಿತ್ರದ ಮೂಲಕ ನಾಯಕನಾಗಿದ್ದೇನೆ’ ಎನ್ನುತ್ತಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು ನಾಯಕ ರಜನೀಶ್.
ನಿರ್ದೇಶಕ ರಮೇಶ್ ಬೇಗಾರ್ ಅವರ ಕಾರ್ಯವೈಖರಿ ನನಗೆ ಇಷ್ಟ. ಹಾಗಾಗಿ ಅವರ ಎರಡನೇ ಚಿತ್ರದಲ್ಲೂ ನಟಿಸಿದ್ದೇನೆ ಎಂದರು ನಟ ಪ್ರಮೋದ್ ಶೆಟ್ಟಿ.
ಚಿತ್ರದಲ್ಲಿ ನಟಿಸಿರುವ ಎಂ.ಆರ್. ಸುರೇಶ್, ಸಂಗೀತ ನಿರ್ದೇಶಕಿ ಸಾದ್ವಿನಿ ಕೊಪ್ಪ, ಗಾಯಕಿ ಪದ್ಮಿನಿ ಓಕ್ ಹಾಗೂ ಛಾಯಾಗ್ರಾಹಕ ಶಶೀರ್ ಚಿತ್ರದ ಬಗ್ಗೆ ಮಾತನಾಡಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Superstitious Belief: ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

Panaji: ನಮ್ಮ ಸಂಸ್ಕೃತಿ ಪರಂಪರೆಯನ್ನು ಸಾಹಿತ್ಯದ ಮೂಲಕ ಪುನರುಜ್ಜೀವನಗೊಳ್ಳಲು ಸಾಧ್ಯ

Kannada Cinema: ‘ಐ ಲವ್ ಯೂ ಕಣೇ.. ‘; ಭೀಮನ ಸೈಕ್ ಡ್ಯುಯೆಟ್ ಬಂತು

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ