“ಜರ್ಕ್‌’ ಆಡಿಯೋ ಬಂತು

Team Udayavani, Feb 20, 2019, 5:33 AM IST

jerk.jpg

ಸಾಮಾನ್ಯವಾಗಿ ಚಿತ್ರದ ನಾಯಕ ನಟ, ನಾಯಕ ನಟಿ, ಅದರ ನಿರ್ಮಾಪಕ, ನಿರ್ದೇಶಕರ ಹುಟ್ಟು ಹಬ್ಬದ ಪ್ರಯುಕ್ತ ಆ ಚಿತ್ರದ ಪೋಸ್ಟರ್‌ ಲಾಂಚ್‌, ಟೀಸರ್‌ – ಟ್ರೇಲರ್‌ ರಿಲೀಸ್‌, ಆಡಿಯೋ ಬಿಡುಗಡೆ, ಹೀಗೆ ಆ ಚಿತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಡೆಸುವುದು ವಾಡಿಕೆ. ಆದರೆ ಇಲ್ಲೊಂದು ಚಿತ್ರತಂಡ, ತಮ್ಮ ನೆಚ್ಚಿನ ನಾಯಕ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಮೇಲಿನ ಅಭಿಮಾನದಿಂದ ದರ್ಶನ್‌ ಹುಟ್ಟುಹಬ್ಬದಂದೇ ತಮ್ಮ ಚಿತ್ರದ ಆಡಿಯೋ ಬಿಡುಗಡೆ ಮಾಡಿ, ತಮ್ಮ ನೆಚ್ಚಿನ ನಟನಿಗೆ ಅರ್ಪಿಸಿದೆ. 

ಹೌದು, ಇಂಥದ್ದೊಂದು ಅಪರೂಪದ ಉದಾಹರಣೆಗೆ ಕಾರಣವಾಗಿದ್ದು “ಜರ್ಕ್‌’ ಚಿತ್ರತಂಡ. ಈಗಾಗಲೇ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ಧವಿರುವ “ಜರ್ಕ್‌’ ಚಿತ್ರತಂಡ, ಫೆ. 16ರಂದು ನಡೆದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬರ್ತ್‌ಡೇಯಂದು ತಮ್ಮ ಚಿತ್ರದ ಆಡಿಯೋವನ್ನು ಬಿಡುಗಡೆಗೊಳಿಸಿದೆ. 

ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಸಾಹಿತಿ ಪ್ರೊ. ದೊಡ್ಡರಂಗೇಗೌಡ, ನಿರ್ದೇಶಕ ಜಯತೀರ್ಥ, ಲಹರಿ ವೇಲು, ಮಜಾ ಟಾಕೀಸ್‌ ಪವನ್‌, ಗಡ್ಡಪ್ಪ, ಕುರಿರಂಗ, ನೃತ್ಯ ನಿರ್ದೇಶಕ ತ್ರಿಭುವನ್‌ ಮತ್ತಿತರರು ಹಾಜರಿದ್ದು ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. “ಜರ್ಕ್‌’ ಚಿತ್ರಕ್ಕೆ ಮಹಾಂತೇಶ್‌ ಮದಕರಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ.

ಚಿತ್ರದ ಕಥಾಹಂದರದ ಬಗ್ಗೆ ಮಾತನಾಡಿದ ನಿರ್ದೇಶಕ ಮಹಾಂತೇಶ್‌ ಮದಕರಿ, “ಜೀವನ ಅನ್ನೋ ಜರ್ನಿಯಲ್ಲಿ ಹಲವು ತಿರುವುಗಳು ಬರುತ್ತವೆ, ವೇಗದಲ್ಲಿದ್ದ ಬದುಕು ಕಾರಣಾಂತರಗಳಿಂದ ಒಮ್ಮೆಲೇ ನಿಂತಂತಾಗುತ್ತದೆ. ಕೆಎಎಸ್‌ ಕೋಚಿಂಗ್‌ಗಾಗಿ ಬೆಂಗಳೂರಿಗೆ ಬರುವ ಹುಡುಗನಿಗೆ ಇಲ್ಲಿ ಆಗುವ ಅನುಭವಗಳ ಪರಿಕಲ್ಪನೆಯಲ್ಲಿ ಚಿತ್ರದ ಕಥೆಯನ್ನು ಹೆಣೆಯಲಾಗಿದೆ.

ಕಮರ್ಷಿಯಲ್‌ ಅಂಶಗಳ ಜೊತೆಗೆ ಸಂದೇಶ ಕೂಡಾ ಇರಬೇಕೆಂಬ ಆಸೆಯಿಂದ ಚಿತ್ರದಲ್ಲಿ ಸಾಮಾಜಿಕ ಸಂದೇಶವನ್ನು ಕೂಡಾ ಸೇರಿಸಲಾಗಿದೆ. ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಚಿತ್ರ ಮೂಡಿಬಂದಿದೆ’ ಎಂದರು. “ಜರ್ಕ್‌’  ಚಿತ್ರದಲ್ಲಿ ಕೃಷ್ಣರಾಜ್‌ ಎಂಬ ಹೊಸ ಪ್ರತಿಭೆ ನಾಯಕನಾಗಿ, ನಿತ್ಯಾರಾಜ್‌ ಹಾಗೂ ಆಶಾ ಭಂಡಾರಿ ನಾಯಕಿಯರಾಗಿ ನಟಿಸುತ್ತಿದ್ದಾರೆ. ತಿಥಿ ಖ್ಯಾತಿಯ ಗಡ್ಡಪ್ಪ ಮೊದಲ ಬಾರಿಗೆ ಈ ಚಿತ್ರದಲ್ಲಿ ಡಬಲ್‌ ಶೇಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ಬುಲೆಟ್‌ ಪ್ರಕಾಶ್‌, ಥ್ರಿಲ್ಲರ್‌ ಮಂಜು, ನೆ.ಲ ನರೇಂದ್ರ ಬಾಬು ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಜರ್ಕ್‌’ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಎಡ್ವರ್ಡ್‌ ಷಾ ಸಂಗೀತ ಸಂಯೋಜಿಸಿದ್ದಾರೆ. ಸಂತೋಷ್‌ ವೆಂಕಿ, ಮಾನಸ ಹೊಳ್ಳ, ದೇಸಿ ಮೋಹನ್‌, ಸುನೀತಾ ಮೊದಲಾದವರು ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. 

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.