ಕಬ್ಜ 25ನೇ ದಿನದ ಸಂಭ್ರಮ: ಕಬ್ಜ 2 ಪೋಸ್ಟರ್ ರಿಲೀಸ್
Team Udayavani, Apr 20, 2023, 11:45 AM IST
ಆರ್.ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಚಿತ್ರ ” ಕಬ್ಜ ‘ 25 ದಿನಗಳನ್ನು ಪೂರೈಸಿದೆ. ಬಿಡುಗಡೆಗೆ ಮುನ್ನ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ, ಬಿಡುಗಡೆ ನಂತರವೂ ಸಿನಿಪ್ರಿಯರ ಮನ ಗೆದ್ದಿತ್ತು. ಈ ಖುಷಿಯನ್ನು ಚಿತ್ರತಂಡ 25ನೇ ದಿನದಂದು ಸಂಭ್ರಮಿಸಿದೆ.
ಚಿತ್ರಕ್ಕೆ ದುಡಿದ ತಾಂತ್ರಿಕ ವರ್ಗಕ್ಕೆ ನೆನಪಿನ ಕಾಣಿಕೆ ನೀಡುವ ಮೂಲಕ ಚಿತ್ರದ ಯಶಸ್ಸಿನ ನೆನಪನ್ನು ಶಾಶ್ವತಗೊಳಿಸಿದೆ. ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಬ್ಜ-2 ಪೋಸ್ಟರ್ ರಿಲೀಸ್
ಚಿತ್ರದ 25ನೇ ದಿನದ ಸಂಭ್ರಮದ ವೇಳೆಯೇ ಆರ್.ಚಂದ್ರು “ಕಬ್ಜ-2′ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಮರದ ಚೇರ್, ಪಕ್ಕದಲ್ಲೊಂದು ಗನ್ ಇಟ್ಟಿರುವ ಪೋಸ್ಟರ್ ಸಖತ್ ಕುತೂಹಲ ಸೃಷ್ಟಿಸಿರುವುದಂತೂ ಸುಳ್ಳಲ್ಲ.
ಕಬ್ಜ ಚಿತ್ರದಲ್ಲಿ ಉಪೇಂದ್ರ, ಕಿಚ್ಚ ಸುದೀಪ ಮತ್ತು ಶ್ರೀಯಾ ಸರಣ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಿವರಾಜ್ ಕುಮಾರ್ ಅವರು ಕ್ಯಾಮಿಯೋ ಮಾಡಿದ್ದರು. ಆರ್ ಚಂದ್ರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…