ಉಪ್ಪಿ ‘ಕಬ್ಜ’ದಲ್ಲಿ ಹೊಸ ಲೋಕ: ಅದ್ಧೂರಿ ಮೇಕಿಂಗ್‌ನಲ್ಲಿ ಚಂದ್ರು ಸಿನಿಮಾ


Team Udayavani, Apr 2, 2021, 9:29 AM IST

kabza

ತರಕಾರಿ ಮಾರ್ಕೇಟ್‌, ದಿನಸಿ ಅಂಗಡಿ, ಆಯಿಲ್‌ ಮಿಲ್‌, ಕೆಮಿಕಲ್‌ ಶಾಪ್‌, ಪಾತ್ರೆ-ಪಗಡಿಗಳ ಮಾರಾಟ, ಪಬ್‌ ಹೌಸ್‌…. ಒಂದಾ- ಎರಡಾ… ಲೆಕ್ಕ ಹಾಕುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇದು ಯಾವುದೋ ಒಂದು ಊರಿನಲ್ಲಿರುವ ಅಂಗಡಿಗಳ ಪಟ್ಟಿಯಲ್ಲ. ಬದಲಾಗಿ ಉಪೇಂದ್ರ ನಾಯಕರಾಗಿರುವ ಪ್ಯಾನ್‌ ಇಂಡಿಯಾ ” ಕಬ್ಜ’ ಚಿತ್ರಕ್ಕಾಗಿ ಹಾಕಲಾದ ಸೆಟ್‌.

ಹಾಗಂತ ಇದು ಇವತ್ತಿನ ಶೈಲಿಯ ಸೆಟ್‌ ಗಳಲ್ಲ, ಈ ಎಲ್ಲಾ ಸೆಟ್‌ ಗಳಿಗೂ 60ರಿಂದ 80ರ ದಶಕದ ಸ್ಪರ್ಶ ನೀಡಲಾಗಿದೆ. ಚಿತ್ರೀಕರಣ ಸೆಟ್‌ಗೆ ಭೇಟಿ ಕೊಟ್ಟರೆ ಯಾವುದೋ ಒಂದು ಹೊಸ ಲೋಕದಲ್ಲಿ ಇದ್ದಂತೆ ಭಾಸವಾಗುವುದರಲ್ಲಿ ಅನುಮಾನವೇ ಇಲ್ಲ. ಆ ಮಟ್ಟಿಗೆ ನಿರ್ದೇಶಕ ಕಂ ನಿರ್ಮಾಪಕ ಆರ್‌. ಚಂದ್ರು ” ಕಬ್ಜ’ವನ್ನು ಕಟ್ಟಿಕೊಡುತ್ತಿದ್ದಾರೆ.

ಪ್ಯಾನ್‌ ಇಂಡಿಯಾ ಸಿನಿಮಾ ಎಂದರೆ ಅದರ ಗುಟಮಟ್ಟ ಹಾಗೂ ಅದರಲ್ಲಿನ ಸಣ್ಣ ಸಣ್ಣ ಅಂಶಗಳ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಸಿನಿಮಾವನ್ನು ಅದೇ ಮಟ್ಟಕ್ಕೆ ಕಟ್ಟಿಕೊಡ ಬೇಕಾಗುತ್ತದೆ. ಈಗ ಆರ್.ಚಂದ್ರು ” ಕಬ್ಜ ‘ವನ್ನು ಪ್ಯಾನ್‌ ಇಂಡಿಯಾ ಸಿನಿಮಾವಾಗಿ ಅದ್ಧೂರಿಯಾಗಿ ಕಟ್ಟಿಕೊಡುತ್ತಿದ್ದಾರೆ. 40ಕ್ಕೂ ಹೆಚ್ಚು ಸೆಟ್‌ಗಳನ್ನು ಹಾಕಿ ಚಂದ್ರು ಸತತವಾಗಿ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಶೇ80ರಷ್ಟು ಚಿತ್ರೀಕರಣ ಮುಗಿಸಿರುವ “ಕಬ್ಜ’ ಕೇವಲ ಔಟ್‌ ಡೋರ್‌ ಚಿತ್ರೀಕರಣವನ್ನಷ್ಟೇ ಬಾಕಿ ಇಟ್ಟು ಕೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಚಿತ್ರ ಈ ವರ್ಷವೇ ಬಿಡುಗಡೆಯಾಗಬಹುದು.

ಇದನ್ನೂ ಓದಿ:ಹೇಗಿದೆ ಈ ಸಿನಿಮಾ: ‘ಯುವ ಮನಸ್ಸುಗಳಿಗೊಂದು ‘ಪವರ್ ಫುಲ್‌’ ಮೆಸೇಜ್‌

” ಕಬ್ಜ ‘ಸಿನಿಮಾದ ಕ್ಯಾನ್ವಾಸ್‌, ಸೆಟ್‌, ಮೇಕಿಂಗ್‌ ನೋಡಿದಾಗ ಚಂದ್ರು ತಮ್ಮ ಮೇಕಿಂಗ್‌ ಶೈಲಿ ಬದಲಾಗಿರೋದು ಹಾಗೂ ಪ್ಯಾನ್‌ ಇಂಡಿಯಾ ಮಟ್ಟಕ್ಕೆ ಸಿದ್ಧವಾಗಿರೋದು ಕಾಣುತ್ತಿದೆ. ಅದೇ ಕಾರಣದಿಂದ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿದೆ. ಬೇರೆ ಬೇರೆ ಭಾಷೆಯ ದೊಡ್ಡ ದೊಡ್ಡ ಸಿನಿಮಾ ಸಂಸ್ಥೆಗಳು ಕೂಡಾ ” ಕಬ್ಜ ‘ ಚಿತ್ರದ ಮೇಲೆ ಒಂದು ಕಣ್ಣಿಟ್ಟಿದ್ದು, ಬಿಝಿನೆಸ್‌ ಮಾತುಕತೆಗಳು ಕೂಡಾ ಆರಂಭವಾಗಿದೆ ಎನ್ನಲಾಗಿದೆ.

ಉಪೇಂದ್ರ ಅವರ ಗೆಟಪ್‌, ಲುಕ್‌ ಎಲ್ಲವೂ ಇಲ್ಲಿ ಬದಲಾಗಿದೆ. ಈಗಾಗಲೇ “ಕೆಜಿಎಫ್’ ಚಿತ್ರ ಪ್ಯಾನ್‌ ಇಂಡಿಯಾ ಸಿನಿಮಾವಾಗಿ ಕನ್ನಡಕ್ಕೆ ಬಹುಭಾಷಾ ಮಾರುಕಟ್ಟೆಯಲ್ಲಿ ಬೇಡಿಕೆ ಬರುವಂತೆ ಮಾಡಿದೆ. ಈಗ ” ಕಬ್ಜ’ಕೂಡಾ ಅದೇ ಹಾದಿಯಲ್ಲಿರೋದಂತು ಸುಳ್ಳಲ್ಲ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.