
ಥಿಯೇಟರ್ ಬಳಿಕ ಓಟಿಟಿಯಲ್ಲಿ ʼಕಬ್ಜʼ ಅಬ್ಬರಕ್ಕೆ ಡೇಟ್ ಫಿಕ್ಸ್? : ರಿಲೀಸ್ ಡೇಟ್ ವೈರಲ್
Team Udayavani, Mar 27, 2023, 12:24 PM IST

ಬೆಂಗಳೂರು: ಪ್ಯಾನ್ ಇಂಡಿಯಾದಲ್ಲಿ ದೊಡ್ಡ ಹೈಪ್ ಕ್ರಿಯೇಟ್ ಮಾಡಿದ ಆರ್.ಚಂದ್ರು ಅವರ ʼಕಬ್ಜʼ ಚಿತ್ರ ಥಿಯೇಟರ್ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಕಂಡಿರುವ ಸಿನಿಮಾ ಇದೀಗ ಓಟಿಟಿ ಬರಲು ಸಜ್ಜಾಗಿದೆ ಎಂದು ವರದಿಯೊಂದು ಹೊರ ಬಿದ್ದಿದೆ.
ಗ್ಯಾಂಗ್ ಸ್ಟರ್ ಕಥಾಹಂದರವನ್ನು ಒಳಗೊಂಡಿರುವ ʼಕಬ್ಜʼದಲ್ಲಿ ಉಪ್ಪಿ ಲಾಂಗ್ ಹಿಡಿದು ಮಾಸ್ ಅವತಾರವನ್ನು ಎತ್ತಿದ್ದಾರೆ. ಕಿಚ್ಚ ಸುದೀಪ್, ಶಿವರಾಜ್ ಕುಮಾರ್ ಅವರ ಪಾತ್ರವೂ ಸಿನಿಮಾದಲ್ಲಿ ಗಮನ ಸೆಳೆದಿದೆ.
ಮಾ.17 ರಂದು ಪ್ಯಾನ್ ಇಂಡಿಯಾ ʼಕಬ್ಜʼ ಸಿನಿಮಾ ರಿಲೀಸ್ ಆಗಿತ್ತು. ಸಿನಿಮಾಕ್ಕೆ ಉಪ್ಪಿ ಫ್ಯಾನ್ಸ್ ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗಲೂ ಸಿನಿಮಾ ಯಶಸ್ವಿಯಾಗಿ ಥಿಯೇಟರ್ ನಲ್ಲಿ ರನ್ನಿಂಗ್ ಆಗುತ್ತಿದೆ. ಈ ನಡುವೆಯೇ ಸಿನಿಮಾ ಓಟಿಟಿಯಲ್ಲಿ ರಿಲೀಸ್ ಆಗಲಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೊಂದು ವೈರಲ್ ಆಗಿದೆ.
ಅಮೇಜಾನ್ ಪ್ರೈಮ್ ಸಿನಿಮಾದ ಓಟಿಟಿ ಹಕ್ಕನ್ನು ಭಾರೀ ದೊಡ್ಡ ಮೊತ್ತಕ್ಕೆ ಖರೀದಿಸಿರುವುದು ಗೊತ್ತೇ ಇದೆ. ಇದೀಗ ಏ. 14 ರಂದು ʼಕಬ್ಜʼ ಸಿನಿಮಾ ಓಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ ಎನ್ನುವ ಪೋಸ್ಟರ್ ವೊಂದು ವೈರಲ್ ಆಗಿದೆ.
ಟ್ವಟಿರ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ʼಕಬ್ಜʼ ಓಟಿಟಿಯಲ್ಲಿ ರಿಲೀಸ್ ಆಗಲಿದೆ ಎನ್ನುವ ಪೋಸ್ಟರ್ ವೈರಲ್ ಆಗಿದೆ. ಆದರೆ ಇದುವರೆಗೆ ಚಿತ್ರ ತಂಡವಾಗಲಿ, ಪ್ರೈಮ್ ವಿಡಿಯೋ ಆಗಲಿ ಅಧಿಕೃತವಾಗಿ ಈ ವಿಷಯವನ್ನು ಎಲ್ಲೂ ಹಂಚಿಕೊಂಡಿಲ್ಲ.
ಏ.14 ರಂದು ಓಟಿಟಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆಯೇ ಇಲ್ಲವೋ ಎನ್ನುವುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.
#Kabzaa will be Premieres on Amazon prime video from April 14 #KabzaaonPrime
#Upendra #KicchaSudeep #Kannada pic.twitter.com/gqgrBlL4MF
— Filmy Corner (@filmycorner9) March 27, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
