ಮೊದಲು ಕಾಂಗ್ರೆಸ್ ತೊಡೆದು ಹಾಕಬೇಕು : ನಟ ಚೇತನ್
Team Udayavani, Sep 10, 2021, 2:16 PM IST
ಬೆಂಗಳೂರು : ಕಾಂಗ್ರೆಸ್ ಮತ್ತು ಆರ್ ಎಸ್ ಎಸ್ ( ಸಂಘ ಪರಿವಾರ ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ ಎಸ್ ಎಸ್, ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕೆಂದು ಚಿತ್ರನಟ ಹಾಗೂ ಹೋರಾಟಗಾರ ಚೇತನ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚೇತನ್, ಕಾಂಗ್ರೆಸ್ ಮತ್ತು ಬಿಜೆಪಿ, ಎರಡನ್ನೂ ಮಣಿಸಬೇಕು – ಹೇಗೆ? ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನನ್ನು ಬೇಕಾದರೂ ಮಾಡುತ್ತದೆ. ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್.ಎಸ್.ಎಸ್ಸನ್ನು ಸ್ಥಾಪಿಸಿದರು. ಕಾಂಗ್ರೆಸ್ ನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ