‘ಜಯ ಯಾರಿಗೆ ಎಂದು ನೋಡೇ ಬಿಡೋಣ’ : ಕನ್ನಡದ ಸುದ್ದಿ ವಾಹಿನಿಗೆ ರಕ್ಷಿತ್ ಶೆಟ್ಟಿ ಸವಾಲು


Team Udayavani, Jul 1, 2021, 6:45 PM IST

987456

ಬೆಂಗಳೂರು: ತಮ್ಮ ತೇಜೋವಧೆ ಮಾಡುವಂತಹ ಕಾರ್ಯಕ್ರಮ ಪ್ರಸಾರ ಮಾಡಿದ ಕನ್ನಡದ ಸುದ್ದಿವಾಹಿನಿ ವಿರುದ್ಧ ನಟ ರಕ್ಷಿತ್ ಶೆಟ್ಟಿ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಆ ವಾಹಿನಿಗೆ ಬಹಿರಂಗ ಸವಾಲು ಎಸೆದಿದ್ದಾರೆ.

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು, ‘ನಿಮ್ಮ ಬಳಿ  ಇರುವ ಅಸ್ತ್ರ’ಟಿಆರ್ ಪಿ’ ಗೋಸ್ಕರ ನಡೆಸುತ್ತಿರುವ ಒಂದು ನ್ಯೂಸ್ ಚಾನೆಲ್. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗೂ ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ’ ಎಂದು ಗುಡುಗಿದ್ದಾರೆ.

ನನ್ನ ವೃತ್ತಿ ಜೀವನದಲ್ಲಿ ಯಾರೆಲ್ಲ ನನ್ನ ಜೊತೆ ಕೆಲಸ ಮಾಡಿದ್ದಾರೋ, ಅವರಲ್ಲಿ ಶೇಕಡಾ 90 ರಷ್ಟು ಜನ ಇಂದಿಗೂ ನನ್ನ ಜೊತೆಯಲ್ಲೇ ಇರುವರು. ಬಿಟ್ಟು ಹೋದವರು ನನ್ನಿಂದ ನನ್ನ ಕೆಲಸದಿಂದ ಏನಾದರೂ ಪಡೆದುಕೊಂಡು ಹೋಗಿದ್ದಾರೆ ಹೊರತು ಯಾರೂ ಕಳೆದುಕೊಂಡು ಹೋಗಿಲ್ಲ. ಕಳೆದುಕೊಂಡವರಿಗೆ ಮುಂದೆ ಹೋಗಿ ಸಹಾಯ ಮಾಡಿದ್ದೇನೆ. ಅಥವಾ ಅವರಿಗೆ ಭುಜ ಕೊಟ್ಟು ನಿಂತಿದ್ದೇನೆ. ಇದಕ್ಕೆ ನನ್ನ ಜೊತೆ ಕೆಲಸ ಮಾಡಿದ ಪ್ರತಿಯೊಬ್ಬ ಲೈಟ್ ಆಪರೇಟರ್ ನಿಂದ ಹಿಡಿದು ಟೆಕ್ನಿಷಿಯನ್ ಡೈರೆಕ್ಟರ್ ಹಾಗೂ ಪ್ರತಿಯೊಬ್ಬ ಪ್ರೊಡ್ಯೂಸರ್ ಸಾಕ್ಷಿ. ನಾನು ಇದೆಲ್ಲದರ ಬಗ್ಗೆ ಎಲ್ಲಿಯೂ ಮಾತಾಡಲು ಬಯಸುವುದಿಲ್ಲ. ನನಗೆ ಅದರ ಅಗತ್ಯವೂ ಇಲ್ಲ. ಹಾಗಂತ ನಿಜ ಸುಳ್ಳಾಗಲ್ಲ.

ಖಾಸಗಿ ವಾಹಿನಿಯವರು ಕಳೆದ ಎರಡು ವರ್ಷಗಳಲ್ಲಿ ನನ್ನ ಬಗ್ಗೆ ಈ ರೀತಿಯ ಹಲವಾರು ಕಾರ್ಯಕ್ರಮ ಮಾಡಿದ್ದಾರೆ. ನಾನು ಈ ಎಲ್ಲ ತೇಜೋವಧೆಯ ಪ್ರಯತ್ನಗಳನ್ನು ನಿರ್ಲಕ್ಷ್ಯಿಸುತ್ತ ಬಂದಿದ್ದೆ. ಕಾರಣ ಇದಕ್ಕೆಲ್ಲ ನನ್ನ ಕೆಲಸ ಉತ್ತರ ಕೊಡುತ್ತದೆ ಎನ್ನುವ ನಂಬಿಕೆ ಇತ್ತು.

ಈಗ ಮತ್ತೊಮ್ಮೆ ಈ ಸುದ್ದಿ ವಾಹಿನಿಯು ಮಾಧ್ಯಮದ ನೈತಿಕ ಜವಾಬ್ದಾರಿಯನ್ನು ಮರೆತು ವೈಯಕ್ತಿಕ ದಾಳಿ ನಡೆಸಿ, ನನ್ನ ವ್ಯಕ್ತಿತ್ವಕ್ಕೆ ಮತ್ತೆ ಮಸಿ ಬಳಿಯುವ ಕೀಳು ಮಟ್ಟದ ಕೆಲಸಕ್ಕೆ ಇಳಿದಿದ್ದಾರೆ.

ಈ ಬಾರಿ ಇದನ್ನು ನಿರ್ಲಕ್ಷಿಸಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಇದಕ್ಕೆ ಉತ್ತರ ಕೊಡುತ್ತೇನೆ. ಆದರೆ, 10 ದಿನಗಳ ಬಳಿಕ.  ಅಲ್ಲಿಯವರೆಗೆ ನಾನು ಕೆಲಸ ಮಾಡಿದ ಪ್ರತಿಯೊಂದು ಸಿನಿಮಾದ ಕುರಿತು ನನ್ನ ಕೆಲಸದ ಕುರಿತು ಯಾವ ಯಾವ ಸತ್ಯ ಹೊರ ಬರುತ್ತದೋ ಅದಕ್ಕೆ ಸಂಬಂಧಪಟ್ಟವರ ಬಾಯಿಯಿಂದಲೆ ಹೊರ ಬರಲಿ. ನಾನು ಕಾದು ನೋಡುತ್ತೇನೆ.

ನನ್ನ ಉತ್ತರ ಜುಲೈ 11 ರಂದು. ಕಾದು ನೋಡಿ. ‘Truth is mighty And must prevail’.

ನನ್ನ ಎಲ್ಲಾ ಏಳು ಬೀಳುಗಳಲ್ಲಿ ನನ್ನ ಜೊತೆಗಿದ್ದ ನನ್ನ ಆತ್ಮೀಯರಿಗೂ ಹಿತೈಸಿಗಳಿಗೂ ಅಭಿಮಾನಿಗಳ ಬಳಗಕ್ಕೂ ಚಿರಋಣಿ ಎಂದು ಬಹಿರಂಗ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.