ಹುಟ್ಟು ಹಬ್ಬಕ್ಕೆ ಕೋಣ ಬಲಿ : ಅಭಿಮಾನಿಗಳ ಕೃತ್ಯಕ್ಕೆ ಸುದೀಪ್ ಬೇಸರ
Team Udayavani, Sep 2, 2021, 8:13 PM IST
ಬೆಂಗಳೂರು : ತಮ್ಮ ಹುಟ್ಟು ಹಬ್ಬದ ನಿಮಿತ್ತ ಪ್ರಾಣಿ ಬಲಿ ನೀಡಿದ ಅಭಿಮಾನಿಗಳ ಕೃತ್ಯಕ್ಕೆ ನಟ ಸುದೀಪ್ ಅವರು ಅಸಮಾಧಾನಗೊಂಡಿದ್ದಾರೆ.
ಇಂದು (ಸೆ.02) ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿಯಲ್ಲಿ ಸಾರ್ವಜನಿಕವಾಗಿ ಕೋಣ ಬಲಿಕೊಟ್ಟಿದ್ದಾರೆ.
ಅಭಿಮಾನಿಗಳ ಈ ಹುಚ್ಚಾಟಕ್ಕೆ ಸುದೀಪ್ ಬೇಸರ ವ್ಯಕ್ತಪಡಿಸಿದ್ದು, ಅಭಿಮಾನಿಗಳ ಹೆಸರಲ್ಲಿ ಈ ರೀತಿ ಪ್ರಾಣಿ ಹಿಂಸೆ ಮಾಡುವುದು ಸರಿಯಲ್ಲ. ನನಗೆ ನಿಮ್ಮ ಪ್ರೀತಿ ಮಾತ್ರ ಸಾಕು ಎಂದು ಅಭಿಮಾನಿಗಳಿಗೆ ಬುದ್ಧಿಮಾತು ಹೇಳಿದ್ದಾರೆ ಸುದೀಪ್.
ಇನ್ನು ಪ್ರತಿ ವರ್ಷ ಸುದೀಪ್ ಅವರನ್ನು ನೋಡೋಕೆ ಬೇರೆಬೇರೆ ಊರುಗಳಿಂದ ಬೆಂಗಳೂರಿಗೆ ಅಭಿಮಾನಿಗಳು ಆಗಮಿಸುತ್ತಿದ್ದರು. ಆದರೆ, ಕೊವಿಡ್ ಕಾರಣದಿಂದ ಇದಕ್ಕೆ ಬ್ರೇಕ್ ಬಿದ್ದಿದೆ. ಹೀಗಾಗಿ, ತಮ್ಮತಮ್ಮ ಊರುಗಳಲ್ಲೇ ಅಭಿಮಾನಿಗಳು ಕಿಚ್ಚನ ಬರ್ತ್ಡೇ ಆಚರಿಸಿದ್ದಾರೆ. ಸಾಮಾನ್ಯವಾಗಿ ಬರ್ತ್ಡೇ ದಿನ ಕೇಕ್ ಕತ್ತರಿಸಲಾಗುತ್ತದೆ. ಕೆಲವೆಡೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ. ಕೆಲವರು ಕಿಚ್ಚನ ಜನ್ಮದಿನದಂದು ರಕ್ತದಾನ ಶಿಬಿರ ಕೂಡ ನಡೆಸಿದ್ದಾರೆ. ಆದರೆ, ತಾಲೂಕಿನ ಬಂಡ್ರಿಯಲ್ಲಿ ಸಾರ್ವಜನಿಕವಾಗಿ ಕೋಣ ಬಲಿಕೊಟ್ಟಿದ್ದಾರೆ. ಅಭಿಮಾನದ ಹೆಸರಲ್ಲಿ ಪ್ರಾಣಿ ಹಿಂಸೆ ಮಾಡಿ ವಿಕೃತಿ ಮೆರೆದಿರುವುದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!