“ಕಾಣೆಯಾದವರ ಬಗ್ಗೆ ಪ್ರಕಟಣೆ” ಟ್ರೇಲರ್ ರಿಲೀಸ್
Team Udayavani, Apr 21, 2022, 3:07 PM IST
“ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ದುನಿಯಾ ವಿಜಯ್ ಹಾಗೂ ಡಾಲಿ ಧನಂಜಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.
ರಂಗಾಯಣ ರಘು, ರವಿಶಂಕರ್ ಹಾಗೂ ತಬಲನಾಣಿ ಪ್ರಮುಖಪಾತ್ರದಲ್ಲಿ ಅಭಿನಯಿಸಿ ರುವ ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ. ಮುಸುಕು ಧರಿಸಿದ ಮೂರು ಪ್ರಮುಖ ಪಾತ್ರಧಾರಿಗಳನ್ನು, ಪೊಲೀಸ್ ಪಾತ್ರಧಾರಿ ವೇದಿಕೆಗೆ ಕರೆತರುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು.
ನಾನು ಹಾಗೂ ನಿರ್ದೇಶಕ ಅನಿಲ್ ಹಲವು ವರ್ಷಗಳ ಸ್ನೇಹಿತರು. ಆಗ ನಾವು ಕಳೆದ ದಿನಗಳು ಸುಂದರ. ಆಗಿನಿಂದ ಅನಿಲ್ ಗೆ ಬರವಣಿಗೆಯಲ್ಲಿ ಆಸಕ್ತಿ. ಮುಂದೆ ಆತನ ಸಂಭಾಷಣೆಯಲ್ಲಿ ಉತ್ತಮ ಚಿತ್ರಗಳು ಬಂದಿದೆ. ನಿರ್ದೇಶಕನಾಗೂ ಆತ ಚಿರಪರಿಚಿತ ಈಗ ತೀರ ಅಪರೂಪವೆಂಬ ಕಥಾವಸ್ತು ಆಯ್ಕೆಮಾಡಿಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ರಂಗಾಯಣ ರಘು, ರವಿಶಂಕರ್, ತಬಲನಾಣಿ ಹಾಗೂ ಚಿಕ್ಕಣ್ಣ ಅವರಂತಹ ಉತ್ತಮ ಕಲಾವಿದರ ಅಭಿನಯದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಒಳ್ಳೆಯದಾಗಲಿ. ನಾನು ಸಹ ಮೊದಲ ದಿನ ಈ ಚಿತ್ರ ನೋಡುತ್ತೇನೆ ಎಂದರು ದುನಿಯಾ ವಿಜಯ್.
ಇದನ್ನೂ ಓದಿ:‘ಓ ಮೈ ಲವ್’ ಹಾಡಿಗೆ ಮೆಚ್ಚುಗೆ; ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್
ಒಬ್ಬ ನಾಯಕ ಎರಡೂವರೆ ಗಂಟೆಗಳ ಕಾಲ ಒಬ್ಬನೇ ತೆರೆಯ ಮೆಲೆ ಕಾಣಲು ಸಾಧ್ಯವಿಲ್ಲ. ನಾಯಕನಿಗೆ ಇಲ್ಲಿರುವ ಅದ್ಭುತ ಕಲಾವಿದರ ಸಹಕಾರಬೇಕು. ನಮ್ಮ ಚಿತ್ರದಲ್ಲಿ ರಘು ಅಣ್ಣ ಮಾಡಿರುವ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಕಲಾವಿದರ ಸಂಗಮದಲ್ಲಿ ಮೂಡಿಬಂದಿರುವ ಈ ಚಿತ್ರ ನೋಡಲು ನಾನು ಕಾತುರಾನಾಗಿದ್ದೀನಿ ಎಂದರು ಡಾಲಿ ಧನಂಜಯ.
ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದುನಿಯಾ ವಿಜಯ್ ಹಾಗೂ ಡಾಲಿ ಅವರಿಗೆ ಧನ್ಯವಾದ. ಇನ್ನೂ ಚಿತ್ರದ ಬಗ್ಗೆ ಹೇಳುವುದಾದರೆ ಇದೊಂದು ವಿಭಿನ್ನ ಕಥಾವಸ್ತು. ರಂಗಾಯಣ ರಘು, ರವಿಶಂಕರ್, ತಬಲ ನಾಣಿ, ಚಿಕ್ಕಣ್ಣ, ತಿಲಕ್, ಆಶಿಕಾ ರಂಗನಾಥ್ ಮುಂತಾದ ಕಲಾವಿದರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ನನ್ನ ಅಣ್ಣ ಜಿತೇಂದ್ರ ಮಂಜುನಾಥ್ ನಮ್ಮ ಚಿತ್ರಕ್ಕೆ ಹಣ ಹೂಡಿದ್ದಾರೆ. ಈ ಚಿತ್ರಕ್ಕೆ ನನ್ನ ಸ್ನೇಹಿತರ ಸಹಕಾರ ಅಪಾರ. ಈಗ ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಮೇನಲ್ಲಿ ಚಿತ್ರ ತೆರೆಗೆ ತರುತ್ತೇವೆ ಎಂದರು ನಿರ್ದೇಶಕ ಅನಿಲ್ ಕುಮಾರ್.
ಕನ್ನಡಿಗ ಉತ್ತಮ ಕಥೆಯುಳ್ಳ ಚಿತ್ರಕ್ಕೆ ಜೈ ಎನ್ನುತ್ತಾನೆ. ಅನಿಲ್ ಕುಮಾರ್ ಸಹ ಉತ್ತಮ ಕಥೆಯುಳ್ಳ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರ ಗೆಲ್ಲುವ ಭರವಸೆಯಿದೆ ಎಂದರು ರಂಗಾಯಣ ರಘು.
ರವಿಶಂಕರ್, ತಬಲಾ ನಾಣಿ, ಚಿಕ್ಕಣ್ಣ , ನಿರ್ಮಾಪಕ ಜಿತೇಂದ್ರ ಮಂಜುನಾಥ್ ಸಹ ಚಿತ್ರದ ಬಗ್ಗೆ ಮಾತನಾಡಿ ಚಿತ್ರಕ್ಕೆ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ