‘ಅಭಿರಾಮಚಂದ್ರ’ ಚಿತ್ರಕ್ಕೆ ಅಶ್ವಿನಿ ಪುನೀತ್ ಸಾಥ್
Team Udayavani, Jan 24, 2023, 4:30 PM IST
“ಅಭಿರಾಮಚಂದ್ರ’- ಹೀಗೊಂದು ಹೊಸಬರ ಸಿನಿಮಾ ಆರಂಭವಾಗಿದ್ದು, ಇತ್ತೀಚೆಗೆ ಚಿತ್ರದ ಫಸ್ಟ್‌ಲುಕ್ ಪೋಸ್ಟರ್ ಅನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಚಿತ್ರತಂಡಕ್ಕೆ ಶುಭಕೋರಿದರು. ಈ ಚಿತ್ರದ ಮೂಲಕ ರಥ ಕಿರಣ ನಾಯಕರಾಗಿ ಎಂಟ್ರಿಕೊಡುತ್ತಿದ್ದಾರೆ.
“ಅಭಿರಾಮಚಂದ್ರ’ ಸಿನಿಮಾಗೆ ನಾಗೇಂದ್ರ ಗಾಣಿಗ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. “ಕಿರಿಕ್ ಪಾರ್ಟಿ’ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.
ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೋನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ನಾಯಕ ನಟನಾಗಿ ಬಣ್ಣ ಹಚ್ಚಿದ್ದು, ಸಿದ್ದು ಮೂಲಿಮನಿ, ನಾಟ್ಯರಂಗ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ ರೈ ನಟಿಸಿದ್ದಾರೆ.
ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ. ಕುಂದಾಪುರ, ಬೆಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ.