ಡಬ್ಬಿಂಗ್ ನಲ್ಲಿ ಬ್ಯುಸಿಯಾದ ‘ಲವ್ ಲಿ’
Team Udayavani, Mar 7, 2023, 3:10 PM IST
ವಸಿಷ್ಠ ಸಿಂಹ ನಟನೆಯ “ಲವ್ ಲಿ’ ಚಿತ್ರ, ಸದ್ಯ ಚಿತ್ರೀಕರಣ ಮುಗಿಸಿದ್ದು, ಚಿತ್ರತಂಡ ಡಬ್ಬಿಂಗ್ ನಲ್ಲಿ ನಿರತವಾಗಿದೆ. ಲಂಡನ್ನಲ್ಲಿ ಸೆರೆ ಹಿಡಿಯುವ ಸಾಂಗ್ವೊಂದನ್ನು ಹೊರತು ಪಡಿಸಿ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಲವ್ ಲಿ ತಂಡ ಕಳೆದ ಏಳು ದಿನದಿಂದ ಡಬ್ಬಿಂಗ್ನಲ್ಲಿ ತೊಡಗಿದೆ.
ವಸಿಷ್ಠ ಸಿಂಹ, ಸ್ಟೆಫಿ ಪಟೇಲ್, ದತ್ತಣ್ಣ, ರಂಗಾಯಣ ರಘು, ಅಚ್ಯುತ್ ಕುಮಾರ್, ವಂಶಿಕಾ, ಸೂರಜ್ ಚಿತ್ರದ ಡಬ್ಬಿಂಗ್ ಕೆಲಸವನ್ನು ಮುಗಿಸಿದ್ದಾರೆ. ಐದು ದಿನಗಳ ಡಬ್ಬಿಂಗ್ ಕೆಲಸ ಬಾಕಿ ಇದೆ ಎಂದು ನಿರ್ದೇಶಕ ಚೇತನ್ ಕೇಶವ್ ಮಾಹಿತಿ ಹಂಚಿಕೊಂಡಿದ್ದಾರೆ.
ಚಿತ್ರದಲ್ಲಿ ಸಮೀಕ್ಷಾ, ಸಾಧುಕೋಕಿಲ, ದತ್ತಣ್ಣ, ಅಚ್ಯುತ್ ಕುಮಾರ್, ವಂಶಿಕಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಒಳಗೊಂಡ ದೊಡ್ಡ ತಾರಾಬಳಗ “ಲವ್ ಲಿ’ ಚಿತ್ರದಲ್ಲಿದೆ. ಎಂ.ಆರ್ ರವೀಂದ್ರ ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾಗೆ ಅಶ್ವಿನ್ ಕೆನಡಿ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್