Kannada Cinema: ‘ಮ್ಯಾಟ್ನಿ’ಯಲ್ಲಿ ಕಿಕ್ ಏರಿಸುವ ಹಾಡು
Team Udayavani, Jan 2, 2024, 6:47 PM IST
“ಅಯೋಗ್ಯ’ ಸಿನಿಮಾದ ಬಳಿಕ ನಟ ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಜೋಡಿಯಾಗಿ ಅಭಿನಯಿಸುತ್ತಿರುವ “ಮ್ಯಾಟ್ನಿ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ.
ಸದ್ಯ ಭರದಿಂದ “ಮ್ಯಾಟ್ನಿ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಹೊಸ ವರ್ಷದ ಸಂದರ್ಭದಲ್ಲಿ “ಬಾರೋ ಬಾರೋ ಬಾಟಲ್ ತಾರೋ…’ ಎಂಬ ಮಾಸ್ ಹಾಡನ್ನು ಬಿಡುಗಡೆ ಮಾಡಿದೆ. ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಈ ಹಾಡಿಗೆ ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ ರೀಲ್ ರೀನಾ ಧ್ವನಿಯಾಗಿದ್ದು, ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಇಂದಿನ ಯುವ ಪೀಳಿಗೆಯ ಅಭಿರುಚಿಗೆ ತಕ್ಕಂತೆ ಮೂಡಿ ಬಂದಿರುವ ಈ ಹಾಡಿಗೆ ನಟರಾದ ನೀನಾಸಂ ಸತೀಶ್, ನಾಗಭೂಷಣ್ ಹಾಗೂ ಶಿವರಾಜ್ ಕೆ. ಆರ್ ಪೇಟೆ ಹೆಜ್ಜೆ ಹಾಕಿದ್ದಾರೆ.
“ಎಫ್ 3 ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಪಾರ್ವತಿ ಎಸ್. ಗೌಡ ನಿರ್ಮಿಸಿರುವ “ಮ್ಯಾಟ್ನಿ’ ಸಿನಿಮಾಕ್ಕೆ ಮನೋಹರ್ ಕಾಂಪಲ್ಲಿ ನಿರ್ದೇಶನವಿದೆ. ಸಿನಿಮಾಕ್ಕೆ ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಹಾಗೂ ಕೆ. ಎಂ. ಪ್ರಕಾಶ್ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್