ಕೆಜಿಎಫ್ ದಾಖಲೆ ಮುರಿದ ‘ಕಾಂತಾರ‘..!; ಹೊಂಬಾಳೆ ಫಿಲ್ಮ್ಸ್ ಘೋಷಣೆ

ಭಾರತ ಮತ್ತು ಪಾಕ್ ಮೆಲ್ಬರ್ನ್‌ ಪಂದ್ಯದಲ್ಲೂ ಗಮನ ಸೆಳೆದ ಚಿತ್ರ ವೈರಲ್ !!

Team Udayavani, Oct 24, 2022, 4:52 PM IST

1-sasadasd

ಬೆಂಗಳೂರು : ಸೆಪ್ಟೆಂಬರ್ 30 ರಂದು ಬಿಡುಗಡೆಯಾಗಿದ್ದ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಮನೋಜ್ಞ ನಟನೆಯ ‘ಕಾಂತಾರ’ ಚಿತ್ರದ ನಾಗಾಲೋಟ ವಿಶ್ವದೆಲ್ಲೆಡೆ ಮುಂದುವರಿದಿದ್ದು, ಒಂದಾದ ಮೇಲೊಂದು ಹೊಸ ದಾಖಲೆಗಳನ್ನು ಬರೆಯುತ್ತಾ ಇನ್ನಷ್ಟು ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿದೆ ಮತ್ತು ವೀಕ್ಷಿಸಿದ ಪ್ರೇಕ್ಷರನ್ನು ಹೊಸ ಲೋಕಕ್ಕೆ ಕೊಂಡೊಯ್ಯುತ್ತಿದೆ.

ಕನ್ನಡದ ದೈತ್ಯ ಚಿತ್ರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಂಸ್ಥೆಗೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ 2’ ಬಳಿಕ ಇನ್ನೊಂದು ಭಾರಿ ಯಶಸ್ಸು ನೀಡಿರುವ ಚಿತ್ರ ಇದಾಗಿದೆ.

”ಈವರೆಗೆ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ‘ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ’ ಎಂಬ ಹೆಗ್ಗಳಿಕೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ‘ ಕಾಂತಾರ ‘..! ನಿಮ್ಮ ಪ್ರೋತ್ಸಾಹಕ್ಕೆ ನಾವು ಸದಾ ಋಣಿ..ಧನ್ಯವಾದ ಕರ್ನಾಟಕ” ಎಂದು ವಿಜಯ್ ಕಿರಗಂದೂರು ಅವರ ಒಡೆತನದ ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿ ಸಂಭ್ರಮ ಹಂಚಿಕೊಂಡಿದೆ.

ಮೆಲ್ಬರ್ನ್‌ನಲ್ಲಿ ನಡೆದ ಭಾರತ ಮತ್ತು ಪಾಕಿಸ್ಥಾನ ನಡುವಿನ ಜಿದ್ದಾಜಿದ್ದಿನ ಕ್ರಿಕೆಟ್ ಪಂದ್ಯಾಟದ ವೀಕ್ಷಕರ ಗ್ಯಾಲರಿಯಲ್ಲಿ, ಕನ್ನಡದ ದಂತಕಥೆ ‘ಕಾಂತಾರ’ ಚಿತ್ರದ ಪೋಸ್ಟರ್ ಹಿಡಿದು ಕುಂದಾಪುರದ ಅಚ್ಯುತ್ ಎಂಬ ಅಭಿಮಾನಿ ಸಂಭ್ರಮಿಸಿರುವ ವಿಡಿಯೋ ಈಗ ವೈರಲ್ ಆಗಿದೆ. ವಿಶೇಷವೆಂದರೆ ಪಂದ್ಯದ ರೋಮಾಂಚನಕಾರಿ ಗೆಲುವಿನ ಬಳಿಕ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ವಿರಾಟ್ ಕೊಹ್ಲಿ ‘ಕಾಂತಾರ’ ಚಿತ್ರ ನೋಡಿದ್ದರು ಎಂಬ ಪೋಸ್ಟರ್ ಗಳನ್ನೂ ಸಾಮಾಜಿಕ ತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು.

ಇದುವರೆಗೆ ಹೊಂಬಾಳೆ , ನಿನ್ನಿಂದಲೆ , ಮಾಸ್ಟರ್ ಪೀಸ್, ರಾಜಕುಮಾರ, ಕೆಜಿಎಫ್ 1, ಯುವರತ್ನ, ಕೆಜಿಎಫ್ 2 ಚಿತ್ರಗಳು ಬಿಡುಗಡೆಯಾಗಿದ್ದು, ಇನ್ನೂ ಹಲವು ಚಿತ್ರಗಳನ್ನು ನಿರ್ಮಿಸುತ್ತಿದೆ. ಆ ಪೈಕಿ ರಕ್ಷಿತ್ ಶೆಟ್ಟಿ ಅವರ ‘ರಿಚರ್ಡ್ ಆಂಟನಿ’ ಘೋಷಣೆಯಾಗಿದ್ದು, ‘ರಾಘವೇಂದ್ರ ಸ್ಟೋರ್ಸ್’ ಚಿತ್ರೀಕರಣ ಮುಕ್ತಾಯಗೊಂಡಿದೆ. ಪ್ರಭಾಸ್ ನಟಿಸುತ್ತಿರುವ ‘ಸಲಾರ್’ ಮೊದಲಾದ ಬಿಗ್ ಬಜೆಟ್ ಚಿತ್ರಗಳಿವೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.