
ʼವರಾಹ ರೂಪಂʼ ವಿವಾದ: ಕೊನೆಗೂ ಕಾನೂನು ಸಮರದಲ್ಲಿ ಗೆಲುವು ಸಾಧಿಸಿದ ʼಕಾಂತಾರʼ
Team Udayavani, Dec 3, 2022, 1:55 PM IST

ಬೆಂಗಳೂರು: ʼಕಾಂತಾರʼ ಚಿತ್ರದ ʼವರಾಹ ರೂಪಂʼ ಹಾಡಿನ ವಿವಾದ ಕೊನೆಗೂ ಬಗೆಹರಿದಿದ್ದು, ಶೀಘ್ರದಲ್ಲಿ ಹಾಡನ್ನು ಓಟಿಟಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಸ್ವತಃ ಟ್ವೀಟ್ ಮಾಡಿ ತಿಳಿಸಿದ್ದಾರೆ.
“ವರಾಹ ರೂಪಂ’ ಹಾಡಿನ ವಿರುದ್ಧ ಕೇರಳದ ಮ್ಯೂಸಿಕ್ ಬ್ಯಾಂಡ್ ಥೈಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಕಲ್ಲಿಕೋಟೆ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಕೇರಳ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ತಂದಿತ್ತು. 8ರವರೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ನ್ಯಾ.ಪಿ. ಸೋಮರಾಜನ್ ಅವರು, ಹೊಂಬಾಳೆ ಫಿಲಂಸ್, ರಿಷಭ್ ಶೆಟ್ಟಿ, ಸಂಗೀತ ನಿರ್ದೇಶಕ ಬಿ.ಎಲ್.ಅಜನೀಶ್, ಪೃಥ್ವಿರಾಜ್ ಫಿಲಂಸ್, ಅಮೆಜಾನ್ ಸೆಲ್ಲರ್ ಸರ್ವಿಸ್ ಪ್ರೈವೇಟ್ ಲಿ., ಗೂಗಲ್ ಇಂಡಿಯಾ ಪ್ರಧಾನ ಕಚೇರಿ, ಸ್ಫೋಟಿಫೈ ಇಂಡಿಯಾ ಪ್ರೈ.ಲಿ. ಮತ್ತು ಪೃಥ್ವಿರಾಜ್ ಸುಕುಮಾರನ್ ಮತ್ತಿತರರಿಗೆ ನೋಟಿಸ್ ಕೂಡ ಜಾರಿ ಮಾಡಿತ್ತು.
ಇದೀಗ ವಿವಾದ ಬಗೆ ಹರಿದಿದ್ದು, ಈ ಬಗ್ಗೆ ಸ್ವತಃ ರಿಷಬ್ ಶೆಟ್ಟಿ ಅವರೇ ಟ್ವೀಟ್ ಮಾಡಿದ್ದಾರೆ. ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ ಎಂದಿದ್ದಾರೆ.
ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ . @VKiragandur@ChaluveG @AJANEESHB @Karthik1423 @hombalefilms @KantaraFilmhttps://t.co/STsNEyKmuT
— Rishab Shetty (@shetty_rishab) December 3, 2022
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
