“ಕೀರ್ತನೆಗಳು’ ಸಂಪೂರ್ಣ
Team Udayavani, Feb 5, 2020, 7:01 AM IST
ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ “ಕ್ರಿಟಿಕಲ್ ಕೀರ್ತನೆಗಳು’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿದ್ದ ಕೋರ್ಟ್ಹಾಲ್ ಸೆಟ್ನಲ್ಲಿ ನಡೆಯುವ ದೃಶ್ಯಗಳನ್ನು ಚಿತ್ರೀಕರಿಸುವ ಮೂಲಕ ಚಿತ್ರತಂಡ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿತು.
“ಕೇಸರಿ ಫಿಲಂ ಕ್ಯಾಪರ್’ ಲಾಂಛನದಲ್ಲಿ ಕುಮಾರ್ ಮತ್ತು ಸ್ನೇಹಿತರು ಸೇರಿ ನಿರ್ಮಿಸಿರುವ “ಕ್ರಿಟಿಕಲ್ ಕೀರ್ತನೆಗಳು’ ಚಿತ್ರಕ್ಕೆ ಈ ಹಿಂದೆ ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರವನ್ನು ನಿರ್ದೇಶಿಸಿದ್ದ ಕುಮಾರ್.ಎಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
ಚಿತ್ರಕ್ಕೆ ಶಿವಸೇನ ಮತ್ತು ಶಿವಶಂಕರ್ ಛಾಯಾಗ್ರಹಣವಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಚಿತ್ರದ ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸಿದ್ದಾರೆ. ಐಪಿಎಲ್ ಬೆಟ್ಟಿಂಗ್ನ ವಿಷಯವನ್ನು ಹೊಂದಿರುವ ನೈಜ ಘಟನೆ ಆಧಾರಿತ ಸಂಪೂರ್ಣ ಹಾಸ್ಯಮಯ ಕಥಾಹಂದರ ಹೊಂದಿರುವ “ಕ್ರಿಟಿಕಲ್ ಕೀರ್ತನೆಗಳು’ ಚಿತ್ರದಲ್ಲಿ ತಬಲಾ ನಾಣಿ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ತರಂಗ ವಿಶ್ವ, ಅಪೂರ್ವ,
ಅಪೂರ್ವ ಭಾರದ್ವಾಜ್, ಅರುಣಾ ಬಾಲರಾಜ್, ಧರ್ಮ, ದಿನೇಶ್ ಮಂಗಳೂರು, ರಘು ಪಾಂಡೇಶ್ವರ, ಯಶಸ್ ಅಭಿ, ದೀಪ, ಗುರುರಾಜ ಹೊಸಕೋಟೆ, ಮಾಸ್ಟರ್ ಮಹೇಂದ್ರ, ಮಾಸ್ಟರ್ ಪುಟ್ಟರಾಜು, ಯಶ್ವಂತ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಬೆಂಗಳೂರು , ಕುಂದಾಪುರ, ಮಂಡ್ಯ, ಬೆಳಗಾವಿ ಮೊದಲಾದ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್