ನಟಿಗೆ ಲೈಂಗಿಕ ಕಿರುಕುಳ; ಮಲಯಾಳಂ ಖ್ಯಾತ ನಟ ದಿಲೀಪ್ ಬಂಧನ
Team Udayavani, Jul 11, 2017, 10:05 AM IST
ಕೊಚ್ಚಿ: ಬಹು ಭಾಷಾ ನಟಿಯ ಅಪಹರಣ, ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಖ್ಯಾತ ನಟ
ದಿಲೀಪ್ರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸೋಮವಾರ ಎರಡನೇ ಬಾರಿಗೆ ವಿಚಾರಣೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಈ ಮಾಹಿತಿ ಖಚಿತ ಪಡಿಸಿದ್ದಾರೆ.
ದಿಲೀಪ್ ವಿಚಾರಣೆ ನಡೆಸಿದ ಹಿರಿಯ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ ನೀಡಿ ಎರಡನೇ ಬಾರಿ ನಡೆಸಿದ ವಿಚಾರಣೆಯಲ್ಲಿ
ಪ್ರಕರಣದಲ್ಲಿ ಹೆಚ್ಚಿನ ಹಾಗೂ ಪ್ರಮುಖ ಅಂಶಗಳು ಬೆಳಕಿಗೆ ಬಂದಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.