ಲಹರಿ ಸಂಸ್ಥೆ ತೆಕ್ಕೆಗೆ ‘ಕೆಜಿಎಫ್ ಚಾಪ್ಟರ್ -2’ ಆಡಿಯೋ ರೈಟ್ಸ್
Team Udayavani, Jul 1, 2021, 4:16 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಆಡಿಯೋ ರೈಟ್ಸ್ ಇದೀಗ ಬಿಗ್ ಮೊತ್ತಕ್ಕೆ ಸೇಲಾಗಿದೆ.
ಕೆಜಿಎಫ್ ಆಡಿಯೋ ರೈಟ್ಸ್ ಹೆಸರಾಂತ ಸಂಸ್ಥೆ ‘ಲಹರಿ ಆಡಿಯೋಸ್ ಕಂಪನಿ’ಯ ಪಾಲಾಗಿದೆ. ಇಂದು ( ಜುಲೈ 01) ಲಹರಿ ಆಡಿಯೋ ಸಂಸ್ಥೆ ಮಾಲೀಕರಾದ ಮನೋಹರ್ ನಾಯ್ಡು ಹಾಗೂ ಲಹರಿ ವೇಲು ಅವರನ್ನು ಭೇಟಿಯಾದ ನಿರ್ಮಾಪಕ ವಿಜಯ್ ಕಿರಗಂದೂರ್ ಕೆಜಿಎಫ್ 2 ಚಿತ್ರದ ಆಡಿಯೋ ರೈಟ್ಸ್ ಮಾರಾಟದ ಪ್ರತಿಯನ್ನು ಹಸ್ತಾಂತರಿಸಿದ್ದಾರೆ. ಎಷ್ಟು ಮೊತ್ತಕ್ಕೆ ಮಾರಾಟವಾಗಿದೆ ಎಂಬುದು ಮಾತ್ರ ರಿವೀಲ್ ಆಗಿಲ್ಲ.
ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳಿರುವ ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸಿರುವ ಕೆಜಿಎಫ್ ಚಾಪ್ಟರ 2 ಸಿನಿಮಾ ಇದೆ ವರ್ಷ ಬಿಡುಗಡೆಯಾಗಲಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಅವರು ಬಹುಕೋಟಿಯಲ್ಲಿ ಈ ಸಿನಿಮಾ ನಿರ್ಮಿಸಿದ್ದಾರೆ.
ಕನ್ನಡ, ತೆಲುಗು, ಹಿಂದಿ ಸೇರಿದಂತೆ ಬಹುಭಾಷೆಯಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ನಟಿಸಿರುವುದು ನಿರೀಕ್ಷೆ ದುಪ್ಪಟ್ಟಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ