“ಬಳ್ಳಿಯ ಮಿಂಚಿ’ಗೆ ಹೊಡೀತು ಕೋಲ್ಮಿಂಚು: Watch
Team Udayavani, Dec 16, 2018, 5:15 PM IST
ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್’ ಚಿತ್ರದ ಟ್ರೈಲರ್ ಗಳು ಮತ್ತು ಹಾಡುಗಳು ಈಗಾಗಲೇ ಬಿಡುಗಡೆಯಾಗಿ ಭರ್ಜರಿ ಹವಾ ಎಬ್ಬಿಸಿರುವ ಬೆನ್ನಲ್ಲೇ ಇದೀಗ ಚಿತ್ರದ ಐಟಂ ಸಾಂಗ್ “ಜೋಕೆ’ ಹಾಡಿನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡಿದೆ. ಅಲ್ಲದೇ ಈ ಹಾಡು ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ 9 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ, ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ನಟಿ ತಮನ್ನಾ ಭಾಟಿಯಾ ಈ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ್ದು, ಹಾಡಿನ ಮಧ್ಯೆ ಯಶ್ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಾರೆ. “ಪರೋಪಕಾರಿ’ ಕನ್ನಡ ಚಿತ್ರದ “ಜೋಕೆ ನಾನು ಬಳ್ಳಿಯ ಮಿಂಚು’ ರೆಟ್ರೋ ಹಾಡನ್ನು ಈ ಚಿತ್ರಕ್ಕಾಗಿ ಸಂಗೀತ ನಿರ್ದೇಶಕ ರವಿ ಬಸ್ರೂರ್ ಮತ್ತಷ್ಟು ಎನರ್ಜಿ ತುಂಬಿ ರೀ-ಕ್ರಿಯೇಟ್ ಮಾಡಿದ್ದಾರೆ. ಹಿಂದಿನ ಹಾಡಿಗೆ ಎಲ್.ಆರ್ ಈಶ್ವರಿ ಧ್ವನಿಯಾಗಿದ್ದರು. ಇದೀಗ ಐರಾ ಉಡುಪಿ ಹಿನ್ನೆಲೆ ಗಾಯನದಲ್ಲಿ ಹೊಸ “ಜೋಕೆ’ ರಿಮಿಕ್ಸ್ ಹಾಡು ಮೂಡಿ ಬಂದಿದ್ದು, ಪ್ರತಿಷ್ಠಿತ ಲಹರಿ ಸಂಸ್ಥೆ ಈ ಹಾಡನ್ನು ಬಿಡುಗಡೆ ಮಾಡಿದೆ.
ಇನ್ನು ಚಿತ್ರದ ತೆಲುಗು, ತಮಿಳು ಹಾಗೂ ಮಲಯಾಳಂ ವರ್ಶನ್ನಲ್ಲಿ ಇದೇ ಹಾಡಿನ ಟ್ಯೂನ್ ಇರಲಿದ್ದು, ಹಿಂದಿಯಲ್ಲಿ ಮಾತ್ರ “ಗಲೀ ಗಲೀ’ ಹಾಡನ್ನು ಬಳಸಿಕೊಳ್ಳಲಾಗಿದೆ. ಇದೇ ಹಾಡು ಈಗಾಗಲೇ ತೆಲುಗು, ಮಲಯಾಳಂನಲ್ಲಿಯೂ ಬಿಡುಗಡೆಗೊಂಡಿದೆ. ಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಡಿಸೆಂಬರ್ 21ರಂದು ತೆರೆಗೆ ಬರಲು ಸಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ