ಸೋಮವಾರ ಅಪ್ಪಳಿಸಲಿದೆ ರಾಕಿಂಗ್ ‘ತೂಫಾನ್’; ಕೆಜಿಎಫ್ 2 ಹಾಡು ಬಿಡುಗಡೆ
Team Udayavani, Mar 20, 2022, 3:00 PM IST
ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್ 2’ ಎಪ್ರಿಲ್ 14ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರದ ಫೀವರ್ ಈಗಾಗಲೇ ಆರಂಭವಾಗಿದೆ. ಚಿತ್ರದ ಮೊದಲ ಹಾಡು ಮಾರ್ಚ್ 21ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಕೆಜಿಎಫ್ 2 ಚಿತ್ರದ ಮೊದಲ ಲಿರಿಕಲ್ ವಿಡಿಯೋ ‘ತೂಫಾನ್’ ಹಾಡು ಸೋಮವಾರ ಬೆಳಗ್ಗೆ 11.07ಕ್ಕೆ ಬಿಡುಗಡೆಯಾಗಲಿದೆ. ಈ ಮೂಲಕ ಕೆಜೆಎಫ್ 2 ತನ್ನ ಪ್ರಚಾರ ಕಾರ್ಯ ಆರಂಭಿಸಿದೆ.
ಚಿತ್ರದ ಟ್ರೇಲರ್ ನ್ನು ಮಾರ್ಚ್ 27ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಈ ಮೊದಲೇ ಘೋಷಣೆ ಮಾಡಿತ್ತು. ಇದೀಗ ಲಿರಿಕಲ್ ಹಾಡು ಬಿಡುಗಡೆಯ ಮಾಹಿತಿಯನ್ನು ನಿರ್ಮಾಣ ಸಂಸ್ಥೆಹೊಂಬಾಳೆ ಫಿಲ್ಸ್ಮ್ ಅಧಿಕೃತವಾಗಿ ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿದೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸಂಗೀತವು ‘ಕೆಜಿಎಫ್: ಚಾಪ್ಟರ್ 1’ ಚಿತ್ರಕ್ಕೆ ಹೊಸ ಮೆರುಗು ತಂದಿತ್ತು. ಈಗ ‘ಕೆಜಿಎಫ್ 2’ ಸಿನಿಮಾದ ಹಾಡುಗಳ ಮೂಲಕ ಅವರು ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂದು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.
ಇದನ್ನೂ ಓದಿ:ಹೋಳಿ: ಗಂಗಾವತಿ ಪತ್ರಕರ್ತರ ಫೋಟೋ ಶೇರ್ ಮಾಡಿದ ಅನುಪಮ್ ಖೇರ್
ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಚಿತ್ರವನ್ನು ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಬಾಲಿವುಡ್ ಸ್ಟಾರ್ ಕಲಾವಿದರಾದ ಸಂಜಯ್ ದತ್ ಮತ್ತು ರವೀನಾ ಟಂಡನ್ ಅವರು ಕೆಜಿಎಫ್ 2 ಚಿತ್ರದಲ್ಲಿ ನಟಿಸಿದ್ದು, ಸಿನಿಮಾದ ಕ್ರೇಜ್ ಹೆಚ್ಚುವಂತೆ ಮಾಡಿದ್ದಾರೆ. ಉಳಿದಂತೆ ಶ್ರೀನಿಧಿ ಶೆಟ್ಟಿ, ಪ್ರಕಾಶ್ ರೈ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ.
Get Ready! #Toofan is coming ?
‘Toofan’ Lyrical Video will be out on March 21st at 11:07 AM.#KGFChapter2 #KGF2onApr14@Thenameisyash @prashanth_neel @VKiragandur@hombalefilms @HombaleGroup @duttsanjay @TandonRaveena @SrinidhiShetty7 @bhuvangowda84 @RaviBasrur @LahariMusic pic.twitter.com/tlkvs4ZPAq
— Hombale Films (@hombalefilms) March 18, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ