46ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್: ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರ
Team Udayavani, Sep 2, 2019, 9:08 AM IST
ಬೆಂಗಳೂರು: 46ನೇ ವಸಂತಕ್ಕೆ ಕಾಲಿಟ್ಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸುದೀಪ್ ಅವರ ಜೆ.ಪಿ ನಗರದ ನಿವಾಸಕ್ಕೆ ಆಗಮಿಸಿ ಶುಭ ಹಾರೈಸಿದ್ದಾರೆ.
ಗಣೇಶ ಹಬ್ಬದ ಜೊತೆಜೊತೆಗೆ ತಮ್ಮ ನೆಚ್ಚಿನ ನಟನ ಜನ್ಮದಿನವನ್ನೂ ಅದ್ದೂರಿಯಾಗಿ ಆಚರಿಸುತ್ತಿರುವ ಅಭಿಮಾನಿಗಳು ರಕ್ತದಾನ, ಅನ್ನದಾನದ ಮೂಲಕ ಸಂಭ್ರಮಿಸುತ್ತಿದ್ದಾರೆ. ಮತ್ತೊಂದೆಡೆ ಉತ್ತರ ಕರ್ನಾಟಕದ ಪ್ರವಾಹ ಹಿನ್ನಲೆಯಲ್ಲಿ ವಿಜೃಂಭಣೆಯ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ.
ನಟ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದ್ದು ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಶುಭಹಾರೈಸಿದ್ದಾರೆ.
ಪೈಲ್ವಾನ್ ಚಿತ್ರತಂಡ ಹುಟ್ಟು ಹಬ್ಬದ ಸಂಭ್ರಮ ಕ್ಷಣಕ್ಕೆ ಸಾಕ್ಷಿಯಾಗಿ ಒಂದು ಹಾಡನ್ನು ಕೂಡ ಬಿಡುಗಡೆ ಮಾಡಿದ್ದು ಇದೇ 12 ರಂದು ವಿಶ್ವದಾದ್ಯಂತ 5 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಣ್ಣನವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಹೆಚ್. ಡಿ. ಕೋಟೆಯಲ್ಲಿ ಸುದೀಪ್ ಅಣ್ಣನವರ ಅಭಿಮಾನಿಗಳು ಅನ್ನ ಸಂತರ್ಪಣೆಯನ್ನು ಮಾಡಿದ ಕ್ಷಣ.
ಅ ದೇವರು ನಿಮಗೆ ಆಯುಷ್ ಅರೋಗ್ಯ ಕೊಟ್ಟು ಕಾಪಾಡಲಿ ಅಣ್ಣ ?❣️@KicchaSudeep pic.twitter.com/vjD1Z2pHNW— Kiccha Sudeepa Foundation(Bangalore) (@KSFB_Official) September 1, 2019
???????????????????????????????????????? https://t.co/ERR2ixET10
— Kichcha Sudeepa (@KicchaSudeep) September 1, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ