ಲಾರ್ಡ್ಸ್‌ ಸ್ಟೇಡಿಯಂನಲ್ಲಿ ಕಿಚ್ಚ ಕಮಾಲ್‌

ಮೈದಾನದಲ್ಲಿ ಮೊದಲ ಪಂದ್ಯ ಗೆದ್ದು ಬೀಗಿದ ಸುದೀಪ ತಂಡ

Team Udayavani, Jun 15, 2019, 3:01 AM IST

sudeep-12

ಸದ್ಯ ಎಲ್ಲೆ ನೋಡಿದ್ರು ವರ್ಲ್ಡ್ ಕಪ್‌ ಕ್ರಿಕೆಟ್‌ ಫೀವರ್‌. ಅದರಲ್ಲೂ ಕ್ರಿಕೆಟ್‌ ತವರು ಇಂಗ್ಲೆಂಡ್‌ನ‌ಲ್ಲಿ ವರ್ಲ್ಡ್ ಕಪ್‌ ಅಬ್ಬರ ಜೋರಾಗಿದೆ. ಇದರ ನಡುವೆಯೇ ಲಾರ್ಡ್ಸ್‌ ಮೈದಾನದಲ್ಲಿ ನಟ ಕಿಚ್ಚ ಸುದೀಪ್‌ ಕೂಡ ಬ್ಯಾಟ್‌ ಹಿಡಿದು ಅಬ್ಬರಿಸುತ್ತಿದ್ದಾರೆ. ಹೌದು, ಚಿತ್ರೀಕರಣದಿಂದ ಬ್ರೇಕ್‌ ಪಡೆದು ಸುದೀಪ್‌ ಕೆಲ ದಿನಗಳ ಹಿಂದಷ್ಟೇ ವಿದೇಶಕ್ಕೆ ಹಾರಿದ್ದಾರೆ. ಜೊತೆಗೆ ತಮ್ಮ ಕ್ರಿಕೆಟ್‌ ತಂಡವನ್ನು ಕರೆದೊಯ್ದಿದ್ದಾರೆ.

ಪ್ರತಿವರ್ಷದಂತೆ ಈ ವರ್ಷ ಕೂಡ ಕಾರ್ಪೋರೆಟ್‌ ಕ್ರಿಕೆಟ್‌ ಲೀಗ್‌ ನಡೆಯುತ್ತಿದ್ದು, ಸಿನಿಮಾ ಸೆಲೆಬ್ರಿಟಿಗಳ ಜೊತೆ ವೃತ್ತಿ ನಿರತ ಆಟಗಾರರು ಸೇರಿ ನಡೆಸುವ ಈ ಕ್ರಿಕೆಟ್‌ ಲೀಗ್‌ನಲ್ಲಿ ಸುದೀಪ್‌ ಮತ್ತು ತಂಡ ಭಾಗಿಯಾಗುತ್ತಿದೆ. ಇನ್ನು ಕ್ರಿಕೆಟ್‌ ಕಾಶಿ ಲಾರ್ಡ್ಸ್‌ ಸ್ಟೇಡಿಯಂನಲ್ಲಿ ಈ ಲೀಗ್‌ನ ಮೊದಲ ಪಂದ್ಯ ನಡೆದಿದ್ದು, ಮೊದಲ ಪಂದ್ಯದಲ್ಲೆ ಸುದೀಪ್‌ ಆ್ಯಂಡ್‌ ಟೀಮ್‌ ಜಯಭೇರಿ ಬಾರಿಸಿ ಗೆಲುವಿನ ನಗು ಬೀರಿದೆ.

ಸುದೀಪ್‌ ಮತ್ತು ತಂಡದ ಸದಸ್ಯರು ತಮ್ಮ ಮೊದಲ ಪಂದ್ಯ ಗೆದ್ದ ಖುಷಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಖುಷಿಯ ನಡುವೆಯೇ ಸುದೀಪ್‌ ಬಳಗಕ್ಕೆ ಇನ್ನೊಂದು ದುಃಖ ಕೂಡ ಕಾಡುತ್ತಿದೆ. ಕಳೆದ ಬಾರಿ ಈ ಲೀಗ್‌ ಪಂದ್ಯದಲ್ಲಿ ಸುದೀಪ್‌ ತಂಡದಲ್ಲಿ ನಟ ಮತ್ತು ಕ್ರಿಕೆಟ್‌ ಆಟಗಾರ ಧ್ರುವ ಶರ್ಮಾ ಜೊತೆಯಾಗಿದ್ದರು.

ಆದರೆ ಅಕಾಲಿಕ ನಿಧನದಿಂದ, ಸುದೀಪ್‌ ಮತ್ತವರ ತಂಡದೊಂದಿಗೆ ಸುದೀರ್ಘ‌ ಒಡನಾಟ ಹೊಂದಿದ್ದ ಧ್ರುವ ಈಗ ತಂಡದಲ್ಲಿಲ್ಲ. ಈ ದುಃಖ ಸಹಜವಾಗಿಯೇ ಸುದೀಪ್‌ ಮತ್ತವರ ತಂಡಕ್ಕೆ ಕಾಡುತ್ತಿದೆ. ಇನ್ನು ಅಗಲಿದ ಸ್ನೇಹಿತನ ಸ್ಮರಣಾರ್ಥ ಮೊದಲ ಪಂದ್ಯದ ಗೆಲುವನ್ನು ಧ್ರುವ ಅವರಿಗೆ ಸಮರ್ಪಿಸಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಬರೆದುಕೊಂಡಿರುವ ಸುದೀಪ್‌, ಈ ಗೆಲುವನ್ನು ಧ್ರುವ ಅವರಿಗೆ ಅರ್ಪಿಸಿರುವುದಾಗ ಹೇಳಿದ್ದಾರೆ. ಸದ್ಯ ಮೊದಲ ಪಂದ್ಯದಲ್ಲೇ ಗೆದ್ದು ಬೀಗುತ್ತಿರುವ ಸುದೀಪ ತಂಡಕ್ಕೆ ಚಿತ್ರರಂಗದಿಂದ ಮತ್ತು ಫ್ಯಾನ್ಸ್‌ ಕಡೆಯಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.