ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
Team Udayavani, Jul 5, 2022, 5:46 PM IST
ಬೆಂಗಳೂರು : ಸ್ಯಾಂಡಲ್ ವುಡ್ ನ ಪ್ರಸಿದ್ಧ ಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಸೋಮವಾರ ಕಿಶೋರ್ ಆರೋಗ್ಯದಲ್ಲಿ ಏರುಪೇರಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ರಾಮ್‌ಕುಮಾರ್ ಅವರು ಕಿಶೋರ್ ಪತ್ತಿಕೊಂಡ ಅವರ ಅರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದು, ಈ ವೇಳೆ ಮಾತನಾಡಿದ ಅವರು ಕಿಶೋರ್ ಅವರಿಗೆ ಮೆದುಳಿನ ಸರ್ಜರಿ ನಡೆದಿದ್ದು ಚಿಕಿತ್ಸೆ ಮುಂದುವರೆದಿದೆ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಮಂಗಳವಾರ ಮುಂಜಾನೆ ಐಸಿಯು ಗೆ ಸ್ಥಳಾಂತರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರವಾದ ಜೇಮ್ಸ್ ಚಿತ್ರ ನಿರ್ಮಾಣವನ್ನು ಕಿಶೋರ್ ಮಾಡಿದ್ದು ಬಿಡುಗಡೆಯಾಗಿ 100 ದಿನಗಳು ಯಶಸ್ವಿ ಪ್ರದರ್ಶನ ಕಂಡಿದೆ.
ಇದನ್ನೂ ಓದಿ : ಕನ್ಹಯ್ಯ ಹತ್ಯೆಗೆ ರಾಜಸ್ಥಾನ ಸರ್ಕಾರವೇ ಕಾರಣ; ರೇಣುಕಾಚಾರ್ಯ