
ಡಬ್ಬಿಂಗ್ ಮುಗಿಸಿದ ಖುಷಿಯಲ್ಲಿ ‘ಗೌಳಿ’: ರಗಡ್ ಲುಕ್‌ನಲ್ಲಿ ಕಂಬ್ಯಾಕ್‌ಗೆ ಕಿಟ್ಟಿ ತಯಾರಿ
Team Udayavani, Jun 12, 2022, 12:08 PM IST

“ಇಂತಿ ನಿನ್ನ ಪ್ರೀತಿಯ’ ಚಿತ್ರದ ಮೂಲಕ ಕನ್ನಡಿಗರ ಗಮನ ಸೆಳೆದಿದ್ದ ನಟ ಶ್ರೀನಗರ ಕಿಟ್ಟಿ, ಈಗ ಔಟ್ ಆ್ಯಂಡ್ ಔಟ್ ರಗಡ್ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಅದು “ಗೌಳಿ’ ಸಿನಿಮಾದ ಮೂಲಕ.
ಹೌದು, ಶ್ರೀನಗರ ಕಿಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿರುವ “ಗೌಳಿ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದ್ದು, ಸದ್ಯ ಭರದಿಂದ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ನಡೆಸುತ್ತಿರುವ ಚಿತ್ರತಂಡ, ಇತ್ತೀಚೆಗೆ “ಗೌಳಿ’ಯ ಡಬ್ಬಿಂಗ್ ಕಾರ್ಯಗಳನ್ನು ಪೂರ್ಣಗೊಳಿಸಿದೆ.
“ಸೊಹನ ಫಿಲಂ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ರಘು ಸಿಂಗಂ ನಿರ್ಮಿಸುತ್ತಿರುವ “ಗೌಳಿ’ ಸಿನಿಮಾಕ್ಕೆ ಸೂರ ಆ್ಯಕ್ಷನ್-ಕಟ್ ಹೇಳಿದ್ದಾರೆ. “ಗೌಳಿ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಅವರಿಗೆ ಪಾವನಾ ಗೌಡ ನಾಯಕಿಯಾಗಿ ಜೋಡಿಯಾಗಿದ್ದಾರೆ.
ಉಳಿದಂತೆ ರಂಗಾಯಣ ರಘು, ಶರತ್ ಲೋಹಿತಾಶ್ವ, ಯಶ್ ಶೆಟ್ಟಿ, ಗೋಪಾಲಕೃಷ್ಣ ದೇಶಪಾಂಡೆ, ಸುಧೀ, ಮುರುಡಯ್ಯ, ಗೋವಿಂದೇ ಗೌಡ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇತ್ತೀಚೆಗೆ ಬಿಡುಗಡೆಯಾಗಿದ್ದ “ಗೌಳಿ’ ಚಿತ್ರದ ಮೋಶನ್ ಪೋಸ್ಟರ್ ಮತ್ತು ಟೀಸರ್‌ಗೆ ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ನಾಯಕ ನಟ ಶ್ರೀನಗರ ಕಿಟ್ಟಿ ಸಖತ್ ರಗಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ ಕೊಡಲಿ, ಉದ್ದನೆಯ ಗಡ್ಡ, ಕೊಪದ ಮುಖವಿರುವ ಕಿಟ್ಟಿ ಗೆಟಪ್ ಸಿನಿ ಪ್ರೇಕ್ಷಕರ ಕುತೂಹಲ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ:ವಿಕ್ರಾಂತ್ ರೋಣ: ಕಿಚ್ಚನ ಫ್ಯಾಂಟಸಿ ಲೋಕಕ್ಕೆ ರಮೇಶ್ ಅರವಿಂದ ಮೆಚ್ಚುಗೆ
ಇನ್ನು ಚಿತ್ರದಲ್ಲಿ ನಾಯಕಿ ಪಾವನಾ ಗೌಡ ಅಪ್ಪಟ ಹಳ್ಳಿ ಹುಡುಗಿ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಬಿಡುಗಡೆಗೂ ಮೊದಲೇ “ಗೌಳಿ’ ಒಂದಷ್ಟು ಸೌಂಡ್ ಮಾಡುತ್ತಿರುವುದು ಚಿತ್ರತಂಡದ ಭರವಸೆಯನ್ನು ಇನ್ನಷ್ಟು ಹೆಚ್ಚಿಸಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಆದಷ್ಟು ಬೇಗ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.
ಔಟ್ ಆ್ಯಂಡ್ ಔಟ್ ಆ್ಯಕ್ಷನ್ -ಥ್ರಿಲ್ಲರ್ ಕಥಾಹಂದರ ಹೊಂದಿರುವ “ಗೌಳಿ’ ಚಿತ್ರದ ಬಹುಭಾಗವನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಯಲ್ಲಾಪುರ, ಹೊನ್ನಾವರ ಮುಂತಾದ ಕಡೆಗಳಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಸಂದೀಪ್ ವಲ್ಲೂರಿ ಛಾಯಾಗ್ರಹಣ, ಉಮೇಶ್ ಸಂಕಲನವಿದೆ. “ಗೌಳಿ’ಯ ಹಾಡುಗಳಿಗೆ ಶಶಾಂಕ್ ಶೇಷಗಿರಿ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಸಾಹಸ ದೃಶ್ಯಗಳಿಗೆ ವಿಕ್ರಂ ಮೋರ್, ಅರ್ಜುನ್ ರೈ ಸಾಹಸ ಸಂಯೋಜಿಸಿದ್ದಾರೆ. ಚಿತ್ರಕ್ಕೆ ರಘು ಎಂ ಕಲಾ ನಿರ್ದೇಶನವಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
