Kannada Cinema; ಕೋಮಲ್ ಹೊಸ ಚಿತ್ರ ‘ಕೋಣ’
Team Udayavani, Dec 1, 2023, 5:11 PM IST
ನಟ ಕೋಮಲ್ ಸದ್ದಿಲ್ಲದೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದು “ಕೋಣ’. ಇತ್ತೀಚೆಗೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಯಿತು. ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ.
ಡಾರ್ಕ್ ಕಾಮಿಡಿ ಜಾನರ್ ಇರುವ ಈ ಚಿತ್ರವನ್ನು ಈ ಹಿಂದೆ ಜಗ್ಗೇಶ್ ಅವರು ಅಭಿನಯಿಸಿದ್ದ “8ಎಂಎಂ’ ಚಿತ್ರವನ್ನು ನಿರ್ದೇಶಿಸಿದ್ದ ಎಸ್. ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಕೋಮಲ್ ಅವರು ಈವರೆಗೂ ಕಾಣಿಸಿಕೊಳ್ಳದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕನ್ನಡದಲ್ಲಿ ಆನೆ, ನಾಯಿ, ಕೋತಿ ಮೊದಲಾದ ಪ್ರಾಣಿಗಳನ್ನು ಬಳಸಿಕೊಂಡು ಸಾಕಷ್ಟು ಬಂದಿದ್ದು ಈ ಚಿತ್ರದಲ್ಲಿ ಕೋಣ ಮುಖ್ಯ ಪಾತ್ರವಾಗಿರುವುದು ವಿಶೇಷವಾಗಿರಲಿದೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ.
ವಿನೋದ್ ಕುಮಾರ್ ಹಾಗೂ ಸೆಲ್ವನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ, ವಿನೋದ್ ಕುಮಾರ್ ಬಿ ಛಾಯಾಗ್ರಹಣ ಹಾಗೂ ಉಮೇಶ್ ಆರ್.ಬಿ ಅವರ ಸಂಕಲನ ಈ ಚಿತ್ರಕ್ಕಿದೆ.
ಸಂಜಯ್ ಹಾಗೂ ಉತ್ತಮ್ ಸ್ವರೂಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…