ರಿಲೀಸ್ಗೂ ಮುನ್ನವೇ ಕೋಟಿಗೊಬ್ಬ-3 ದಾಖಲೆ!
Team Udayavani, Apr 20, 2020, 12:19 PM IST
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ “ಕೋಟಿಗೊಬ್ಬ-3′ ಚಿತ್ರದ ಕುರಿತು ಅಚ್ಚರಿಯ ಮಾಹಿತಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ಎಲ್ಲ ಅಂದುಕೊಂಡಂತೆ ಆಗಿದ್ದರೆ, ಮೇ 1ರ ಕಾರ್ಮಿಕರ ದಿನದಂದು ಸುದೀಪ್ ಅಭಿನಯದ ಬಹುನಿರೀಕ್ಷಿತ “ಕೋಟಿಗೊಬ್ಬ-3′ ಚಿತ್ರ ತೆರೆ ಕಾಣಬೇಕಿತ್ತು. ಆದರೆ ಕೊರೊನಾ ಲಾಕೌ ಡೌನ್ ಹಿನ್ನೆಲೆ ರಿಲೀಸ್ ಡೇಟ್ ಮುಂದಕ್ಕೆ ಹಾಕಲಾಗಿದೆ. ಸದ್ಯಕ್ಕೆ ರಿಲೀಸ್ ಡೇಟ್ ಇನ್ನೂ ಫಿಕ್ಸ್ ಆಗದಿರುವುದರಿಂದ, ಅಭಿಮಾನಿಗಳಲ್ಲಿ ಸಹಜವಾಗಿಯೇ ಒಂದಷ್ಟು ಬೇಸರ ಮನೆ ಮಾಡಿದೆ.
ಆದರೆ ಇದೀಗ ಅಭಿಮಾನಿಗಳ “ಕೋಟಿಗೊಬ್ಬ-3′ ಚಿತ್ರದ ಕುರಿತು ಸಂತಸದ ಸುದ್ದಿಯೊಂದು ಹೊರ ಬಿದ್ದಿದೆ.ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿದೆ. ಚಿತ್ರದ ಬಿಡುಗಡೆಗೆ ಕೆಲ ಫೈನಲ್ ಕೆಲಸಗಳಷ್ಟೇ ಬಾಕಿ ಇದ್ದು, ಲಾಕೌಡೌನ್ ನಿಂದಾಗಿ ಚಿತ್ರದ ಕೆಲ ಕೆಲಸಗಳು ಸ್ಥಗಿತಗೊಂಡಿವೆ. ಇದರ ಮಧ್ಯೆಯೇ ಇದೀಗ ಚಿತ್ರದ ಟಿ.ವಿ ರೈಟ್ಸ್ ಬಗ್ಗೆ ಅಚ್ಚರಿಯ ಮಾಹಿತಿಯೊಂದು ಹೊರ ಬಿದ್ದಿದೆ.
ಹೌದು ಖಾಸಗಿ ವಾಹಿನಿಯೊಂದು ದಾಖಲೆಯ ಮೊತ್ತಕ್ಕೆ “ಕೋಟಿಗೊಬ್ಬ-3′ ಚಿತ್ರವನ್ನು ಖರೀದಿಸಿ ದೆಯಂತೆ. ಬರೋಬ್ಬರಿ 9 ಕೋಟಿ ರೂ.ಗಳಿಗೆ ವಾಹಿನಿಗೆ ಟಿವಿ ರೈಟ್ಸ್ ಮಾರಾಟವಾಗಿದೆ ಎಂದು ಕಿಚ್ಚ ಸುದೀಪ್ ಅಭಿಮಾನಿಗಳ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ರೀತಿಯ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಟ್ವಿಟ್ಟರ್ನಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳು ಇದನ್ನು ಹಂಚಿಕೊಂಡು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಸುದೀಪ್ ನಾಯಕರಾಗಿ ನಟಿಸಿರುವ ಈ ಚಿತ್ರದಲ್ಲಿ ಮಡೋನ್ನಾ ಸೆಬಸ್ಟಿಯನ್, ಶ್ರದ್ಧಾ ದಾಸ್ ಹಾಗೂ ರವಿಶಂಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ