KTM ಸವಾರಿಯಲ್ಲಿ ಹಾಡುಗಳ ಸೌಂಡ್; ಫೆ.16ರಂದು ಸಿನಿಮಾ ತೆರೆಗೆ

Team Udayavani, Jan 31, 2024, 10:07 AM IST

ktm kannada movie songs out

“ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್‌ ಶೆಟ್ಟಿ ಅಭಿನಯದ “ಕೆಟಿಎಂ’ ಸಿನಿಮಾ ತನ್ನ ಟೀಸರ್‌ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ “ಕೆಟಿಎಂ’ ಸಿನಿಮಾದ ಹಾಡುಗಳು ಬಿಡುಗಡೆಯಾಗಿದ್ದು, ಈ ಹಾಡುಗಳು ಕೂಡ ನಿಧಾನವಾಗಿ ಸೋಶಿಯಲ್‌ ಮೀಡಿಯಾಗಳಲ್ಲಿ ಸದ್ದು ಮಾಡುತ್ತಿವೆ. ಇತ್ತೀಚೆಗಷ್ಟೇ “ಕೆಟಿಎಂ’ ಸಿನಿಮಾದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಈ ಎರಡೂ ಹಾಡುಗಳಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಲಕ್ಷಾಂತರ ಹಿಟ್ಸ್‌ ಪಡೆದುಕೊಳ್ಳುವಲ್ಲಿ ಹಾಡುಗಳು ಯಶಸ್ವಿಯಾಗಿದೆ.

ಚೇತನ್‌ ರಾವ್‌ ಸಂಗೀತ ಸಂಯೋಜಿಸಿರುವ “ಕೆಟಿಎಂ’ ಸಿನಿಮಾದ “ಸೋಜಿಗ…’ ಎಂಬ ಹಾಡಿಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ಸಂಚಿತ್‌ ಹೆಗ್ಡೆ  ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ.

“ಅಯ್ಯಯ್ಯೋ…’ ಎಂಬ ಮತ್ತೂಂದು ಹಾಡಿಗೆ “ಟಗರು’ ಖ್ಯಾತಿಯ ಆಂತೋನಿ ದಾಸ್‌ ಹಾಡಿದ್ದು, ಆರವ್‌ ಜೋಷಿ ಹಾಗೂ ಚೇತನ್‌ ರಾವ್‌ ಇವರಿಗೆ ಸಾಥ್‌ ನೀಡಿದ್ದಾರೆ. ಅಭಿನಂದನೆ ದೇಶಪ್ರಿಯ ಸಾಹಿತ್ಯ ಈ ಹಾಡಿಗಿದೆ. ಈ ಹಿಂದೆ “ಅಥರ್ವ’ ಸಿನಿಮಾ ನಿರ್ದೇಶಿಸಿದ್ದ ಅರುಣ್‌ “ಕೆಟಿಎಂ’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. “ಮಹಾಸಿಂಹ ಮೂವೀಸ್‌’ ಬ್ಯಾನರ್‌ನಲ್ಲಿ ವಿನಯ್‌ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇನ್ನು ನವಿರಾದ ಪ್ರೇಮಕಹಾನಿ ಇರುವ “ಕೆಟಿಎಂ’ ಸಿನಿಮಾದಲ್ಲಿ ದೀಕ್ಷಿತ್‌ ಶೆಟ್ಟಿ ನಾಲ್ಕು ವಿಭಿನ್ನ ಶೇಡ್‌ನ‌ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಕಾಜಲ್‌ ಕುಂದರ್‌ ಹಾಗೂ ಸಂಜನಾ ನಾಯಕಿಯರಾಗಿದ್ದಾರೆ. ಉಳಿದಂತೆ ಉಷಾ ಭಂಡಾರಿ, ಪ್ರಕಾಶ್‌ ತುಮ್ಮಿನಾಡು, ರಘು ರಾಮನಕೊಪ್ಪ, ಶಾನಿಲ್‌ ಗುರು, ಬಾಬು ಹಿರಣಯ್ಯ, ದೇವ್‌ ದೇವಯ್ಯ, ಅಭಿಷೇಕ್‌ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸಿನಿಮಾಕ್ಕೆ ನವೀನ್‌ ಛಾಯಾಗ್ರಹಣ, ಅರ್ಜುನ್‌ ಕಿಟ್ಟು ಸಂಕಲನವಿದೆ. ಉಡುಪಿ, ಮಂಗಳೂರು, ಕಾರ್ಕಳ, ಬೆಂಗಳೂರು ಸುತ್ತಮುತ್ತ “ಕೆಟಿಎಂ’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಇದೇ ಫೆಬ್ರವರಿ 16ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಯಾಗುತ್ತಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.