ನಾಲ್ಕು ಭಾಷೆಗಳಲ್ಲಿ “ಕುರುಕ್ಷೇತ್ರ’ ಪೋಸ್ಟರ್‌

ಚಿತ್ರ ಬಿಡುಗಡೆಗೆ ಸಿದ್ಧತೆ

Team Udayavani, Apr 22, 2019, 3:00 AM IST

Kurukshetra

ಸೆಟ್ಟೇರಿದಾಗಿನಿಂದಲೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿರುವ “ಮುನಿರತ್ನ ಕುರುಕ್ಷೇತ್ರ’ ಚಿತ್ರದ ಕಡೆಯಿಂದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಹಾಗಾದ್ರೆ, “ಮುನಿರತ್ನ ಕುರುಕ್ಷೇತ್ರ’ ಚಿತ್ರದ ಬಿಡುಗಡೆಯ ದಿನಾಂಕ ಅನೌನ್ಸ್‌ ಮಾಡಿದ್ದಾರ ಅಂತ ಕೇಳಬೇಡಿ. ನಾವು ಹೇಳುತ್ತಿರುವುದು ಮುನಿರತ್ನ ನಿರ್ಮಾಣದ ಕುರುಕ್ಷೇತ್ರದ ಚಿತ್ರದ ಬಗ್ಗೆಯೇ ಆದರೂ, ಬಿಡುಗಡೆಯ ಬಗ್ಗೆ ಅಲ್ಲ.

ಸದ್ಯದ ಸುದ್ದಿ ಏನಪ್ಪ ಅಂದ್ರೆ, “ಕುರುಕ್ಷೇತ್ರ’ ಚಿತ್ರದ ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಫೇಸ್‌ಬುಕ್‌ ಸೇರಿದಂತೆ ಸೋಷಿಯಲ್‌ ಮೀಡಿಯಾಗಳಲ್ಲಿ ಕನ್ನಡ, ತಮಿಳು, ತೆಲುಗು ಮತ್ತು ಮಲೆಯಾಳಂ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಈ ಪೋಸ್ಟರ್‌ ಏಕ ಕಾಲಕ್ಕೆ ಬಿಡುಗಡೆಯಾಗಿದ್ದು, ಚಿತ್ರ ಬಿಡುಗಡೆಯ ಬಗ್ಗೆ ಅಭಿಮಾನಿಗಳ ನಿರೀಕ್ಷೆಗೆ ಮತ್ತೆ ಗರಿಗೆದರಿದೆ.

ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗಾಗಲೇ “ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೊಳ್ಳಬೇಕಿತ್ತು. ಆರಂಭದಲ್ಲಿ ಈ ವರ್ಷದ ಮೊದಲ ವಾರದಲ್ಲಿಯೇ ಮುನಿರತ್ನ ಕುರುಕ್ಷೇತ್ರ ಬಿಡುಗಡೆ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಚಿತ್ರದ ನಿರ್ಮಾಣ, ನಂತರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಚಿತ್ರತಂಡ ಸಾಕಷ್ಟು ಸಮಯ ತೆಗೆದುಕೊಂಡಿದ್ದರಿಂದ ಅಂದುಕೊಂಡ ಸಮಯಕ್ಕೆ ಕುರುಕ್ಷೇತ್ರವನ್ನು ಪ್ರೇಕ್ಷಕರ ಮುಂದೆ ತರಲು ಸಾಧ್ಯವಾಗುತ್ತಿಲ್ಲ.

ಅಂತೆಯೇ ಎಲ್ಲ ನಾಲ್ಕು ಭಾಷೆಗಳಲ್ಲಿ ಡಬ್ಬಿಂಗ್‌ ಕೆಲಸ ನಡೆಯುತ್ತಿದ್ದರಿಂದ ಸಿನಿಮಾ ರಿಲೀಸ್‌ ತಡವಾಗುತ್ತಿದೆ. ಚಿತ್ರದ ತಾಂತ್ರಿಕ ಕೆಲಸಗಳಿಗೆ ಸಾಕಷ್ಟು ಸಮಯ ಹಿಡಿಯುತ್ತಿರುವುದರಿಂದ, ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುತ್ತಿದೆ ಎಂದು ನಿರ್ಮಾಪಕ ಮುನಿರತ್ನ ಈ ಹಿಂದೆ ತಿಳಿಸಿದ್ದರು. ಆದರೆ, ಚಿತ್ರ ಬಿಡುಗಡೆ ಯಾವಾಗ ಆಗಬಹುದು ಎಂಬ ಪ್ರಶ್ನೆಗೆ ಮಾತ್ರ ಮುನಿರತ್ನ ಉತ್ತರಿಸಿರಲಿಲ್ಲ.

ಇನ್ನು “ಕುರುಕ್ಷೇತ್ರ’ ಚಿತ್ರದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವುದರಿಂದ, ಚಿತ್ರ ಈ ವಾರ ಬಿಡುಗಡೆಯಾಗಬಹುದು, ಮುಂದಿನ ವಾರ ಬಿಡುಗಡೆಯಾಗಬಹುದು ಎಂದು ಕಾದು ಕುಳಿತಿದ್ದ ಡಿ ಬಾಸ್‌ ಫ್ಯಾನ್ಸ್‌ ಕೊನೆಗೆ ಚಿತ್ರತಂಡದ ಕಡೆಯಿಂದ ಯಾವುದೇ ಮಾಹಿತಿಗಳು ಹೊರಬೀಳದೆ ಇದ್ದರಿಂದ ಚಿತ್ರದ ಬಗ್ಗೆ ಕೈಚೆಲ್ಲಿ ಕುಳಿತಿದ್ದರು.

ಇವೆಲ್ಲದರ ನಡುವೆ ಸರ್‌ಪ್ರೈಸ್‌ ಎನ್ನುವಂತೆ, ಚಿತ್ರತಂಡ “ಕುರುಕ್ಷೇತ್ರ’ ಚಿತ್ರದ ಪೋಸ್ಟರ್‌ ಅನ್ನು ಬಿಡುಗಡೆಗೊಳಿಸಿದೆ. ಕನ್ನಡ, ತಮಿಳು, ತೆಲಗು ಮತ್ತು ಮಲಯಾಳಂ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಕುರುಕ್ಷೇತ್ರ ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಸಿನಿಮಾ ನಾಲ್ಕೂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ ಎಂಬ ಭರವಸೆಯನ್ನು ಮತ್ತೆ ಚಿಗುರುವಂತೆ ಮಾಡಿದೆ.

ಇನ್ನು ಕುರುಕ್ಷೇತ್ರ ಚಿತ್ರದಲ್ಲಿ ದರ್ಶನ್‌ ಅವರೊಂದಿಗೆ, ಅಂಬರೀಶ್‌, ರವಿಚಂದ್ರನ್‌, ಅರ್ಜುನ್‌ ಸರ್ಜಾ, ಶಶಿಕುಮಾರ್‌, ನಿಖೀಲ್‌ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್‌, ಮೇಘನಾ ರಾಜ್‌, ಹರಿಪ್ರಿಯಾ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಜನಪ್ರಿಯ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇನ್ನು ಚಿತ್ರತಂಡ ಮೂಲಗಳ ಪ್ರಕಾರ ಸದ್ಯ ನಿಧಾನವಾಗಿ ಚಿತ್ರದ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಲು ನಿರ್ಧರಿಸಿರುವ ಚಿತ್ರತಂಡ, ಇದೇ ಜೂನ್‌ ವೇಳೆಗೆ “ಕುರುಕ್ಷೇತ್ರ’ವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

dr-ashwat-narayan

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ: ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದೇನು? 

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

covid-1

ಕರ್ನಾಟಕಕ್ಕೇ ಕಾಲಿಟ್ಟ ಒಮಿಕ್ರಾನ್ : ದೇಶದಲ್ಲಿ ಮೊದಲ 2 ಪ್ರಕರಣಗಳು!

ಸರ್ಕಾರಿ ಉದ್ಯೋಗ ಸಿಗುತ್ತಿಲ್ಲವೇಕೆ? ಯುವಕರು ಇನ್ನೆಷ್ಟು ದಿನ ತಾಳ್ಮೆ ವಹಿಸಬೇಕು: ವರುಣ್

ಸರ್ಕಾರಿ ಉದ್ಯೋಗ ಸಿಗುತ್ತಿಲ್ಲವೇಕೆ? ಯುವಕರು ಇನ್ನೆಷ್ಟು ದಿನ ತಾಳ್ಮೆ ವಹಿಸಬೇಕು: ವರುಣ್

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

1-ff

ಬೆಂಗಳೂರಿನ ರಸ್ತೆ ಗುಂಡಿ: ಡೆಲಿವರಿ ಬಾಯ್ ಸಾವು; ಅಧಿಕಾರಿ ವಿರುದ್ಧವೇ ಕೇಸ್!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಸಾವು-ಬದುಕಿನ “ಅಘೋರ” ದರ್ಶನ

ಸಾವು-ಬದುಕಿನ “ಅಘೋರ” ದರ್ಶನ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

jeju gudu theft

ರೈತರ ನಿದ್ದೆಗೆಡಿಸಿದ ರೇಷ್ಮೆಗೂಡು ಕಳವು ಪ್ರಕರಣ

ಏಡ್ಸ್‌ ನಿಯಂತ್ರಣಕ್ಕೆ ಸರ್ಕಾರಿ ಯೋಜನೆ ಸಹಕಾರಿ

ಏಡ್ಸ್‌ ನಿಯಂತ್ರಣಕ್ಕೆ ಸರ್ಕಾರಿ ಯೋಜನೆ ಸಹಕಾರಿ

ಬಿಟ್ಟೂ ಬಿಟ್ಟೂ ಸುರಿದ ಮಳೆಗೆ ಕೈಕೊಟ್ತು ಬೆಳೆ

ಬಿಟ್ಟೂ ಬಿಟ್ಟೂ ಸುರಿದ ಮಳೆಗೆ ಕೈಕೊಟ್ತು ಬೆಳೆ

ಕಲ್ಯಾಣಕ್ಕೆ ಖೂಬಾ-ಚವ್ಹಾಣ ಕೊಡುಗೆ ಶೂನ್ಯ

ಕಲ್ಯಾಣಕ್ಕೆ ಖೂಬಾ-ಚವ್ಹಾಣ ಕೊಡುಗೆ ಶೂನ್ಯ

1-asdsdweqe

ಜನಮಾನಸದಿಂದ ಮಾಸ್ಕ್ ದೂರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.