ಸೀತೆಯಲ್ಲಿ ರಾವಣನಾಗಿ ಅಬ್ಬರಿಸಿದ್ದ ಲಂಬೂ ನಾಗೇಶ್ ಇನ್ನಿಲ್ಲ
Team Udayavani, Sep 2, 2017, 11:31 AM IST
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪೋಷಕ ನಟ ಲಂಬೂ ನಾಗೇಶ್ ಅವರು ಶನಿವಾರ ನಗರದ ಎಂ.ಎಸ್.ರಾಮಯ್ಯ ಅಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು.
ಹಲವು ಧಾರಾವಾಹಿಗಳಲ್ಲಿ ಖಳ ಛಾಯೆಯ ಪಾತ್ರಗಳಲ್ಲಿ ಮಿಂಚಿದ್ದ ನಾಗೇಶ್ ಅವರು ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಸೀತೆ ಧಾರಾವಾಹಿಯಲ್ಲಿ ರಾವಣನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದರು.
ಪೊಲೀಸ್ ಸ್ಟೋರಿ, ನೀಲಕಂಠ, ನಾಗ ಮುಂತಾದ ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ತಮ್ಮ ಕಂಚಿನ ಕಂಠದಿಂದ ಗಮನ ಸೆಳೆದಿದ್ದರು.
ಶ್ರೀನಿವಾಸ ಪುರದ ಮಾರುತಿ ನಗರದಲ್ಲಿ ಅಂತಿಮ ದರ್ಶನದ ಬಳಿಕ ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ.
ನಾಗೇಶ್ ನಿಧನಕ್ಕೆ ಚಿತ್ರರಂಗದ ಮತ್ತು ಕಿರತೆರೆಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ