ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರಕ್ಕೆ ಚಾಲನೆ
Team Udayavani, Dec 17, 2019, 6:32 AM IST
ಕನ್ನಡ ಚಿತ್ರರಂಗದಲ್ಲಿ ಹಿಂದಿನ ಸುಮಧುರ ಹಾಡುಗಳ ಮೊದಲ ಸಾಲು ಸಾಕಷ್ಟು ಚಿತ್ರದ ಶೀರ್ಷಿಕೆಗಳಾಗಿವೆ. ಈಗ ಅ ಸಾಲಿಗೆ ಮತ್ತೊಂದು ಸೇರ್ಪಡೆ “ಎಲ್ಲಿಗೆ ಪಯಣ ಯಾವುದೋ ದಾರಿ’. ಪ್ರಸ್ತುತ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಪದ್ಮನಾಭನಗರದ ಶ್ರೀಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿತು.
ಸುದರ್ಶನ್ ಆರ್ಟ್ಸ್ ಲಾಂಛನದಲ್ಲಿ ನಂದೀಶ್ ಎಂ.ಸಿ.ಗೌಡ ಹಾಗೂ ಜತಿನ್ ಜಿ ಪಟೇಲ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಕಿರಣ್ ಸೂರ್ಯ ನಿರ್ದೇಶಿಸುತ್ತಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮಡಿಕೇರಿ ಸುತ್ತಮುತ್ತ 45ದಿನಗಳ ಚಿತ್ರೀಕರಣ ನಡೆಯಲಿದೆ.
ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ನಾಯಕನಾಗಿ ಅಭಿಮನ್ಯು ಕಾಶಿನಾಥ್ ಅಭಿನಯಿಸುತ್ತಿದ್ದಾರೆ. ಸ್ಫೂರ್ತಿ ಉಡಿಮನೆ, ವಿಜಯಶ್ರೀ, ಗಣೇಶ್ ನಾರಾಯಣ್, ರವಿಕುಮಾರ್, ದೇವು ರಂಗಭೂಮಿ, ಶೋಭಾ, ಕಿಶೋರ್, ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಎರಡು ಹಾಡುಗಳಿರುವ ಈ ಚಿತ್ರಕ್ಕೆ ಗಣೇಶ್ ನಾರಾಯಣ್ ಸಂಗೀತ ನೀಡುತ್ತಿದ್ದಾರೆ. ಗೌತಮ್ ಮನು ಛಾಯಾಗ್ರಹಣ ಹಾಗೂ ರವಿಚಂದ್ರನ್, ಗಣೇಶ್ ಅವರ ಸಂಕಲನ ಈ ಚಿತ್ರಕ್ಕಿದೆ.