ಹೊರಬಂತು ಲೀಡರ್‌ ರಾಮಯ್ಯ ಟೈಟಲ್‌ ಪೋಸ್ಟರ್‌: ಸಿದ್ಧರಾಮಯ್ಯ ಬಯೋಪಿಕ್‌..?

Team Udayavani, Apr 1, 2023, 10:59 AM IST

leader ramaiah movie poster out

ಹಿಂದಿ, ತಮಿಳು, ತೆಲುಗು, ಮಲೆಯಾಳಂ ಸೇರಿದಂತೆ ಭಾರತೀಯ ಚಿತ್ರರಂಗದ ವಿವಿಧ ಭಾಷೆಗಳಲ್ಲಿ ಅನೇಕ ರಾಜಕಾರಣಿಗಳ ಜೀವನಗಾಥೆ ಸಿನಿಮಾ ರೂಪದಲ್ಲಿ ತೆರೆಗೆ ಬಂದಿದ್ದು, ಬರುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ನರೇಂದ್ರ ಮೋದಿ, ಜಯಲಲಿತಾ, ಎನ್‌.ಟಿ ರಾಮರಾಮ್‌ (ಎನ್‌ಟಿಆರ್‌) ಹೀಗೆ ಹುಡುಕುತ್ತ ಹೋದರೆ ಹಲವು ರಾಜಕಾರಣಿಗಳ ಬಯೋಪಿಕ್‌ಗಳ ದೊಡ್ಡ ಪಟ್ಟಿಯೇ ಸಿಗುತ್ತದೆ. ಆದರೆ ಬೇರೆ ಭಾಷೆಗಳಿಗೆ ಹೋಲಿಸಿದರೆ, ಕನ್ನಡದಲ್ಲಿ ಮಾತ್ರ ಇಲ್ಲಿನ ರಾಜಕಾರಣಿಗಳ ಕಥೆ ಸಿನಿಮಾವಾದ ನಿದರ್ಶನ ಇಲ್ಲವೆಂದೇ ಹೇಳಬಹುದು. ಈ ಹಿಂದೆ ಕೂಡ ಹೆಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಕೆಲವು ರಾಜಕಾರಣಿಗಳ ಬಯೋಪಿಕ್‌ ತೆರೆಗೆ ತರುವ ಪ್ರಯತ್ನ ನಡೆದಿತ್ತಾದರೂ, ಕೊನೆಗೆ ಆ ಪ್ರಯತ್ನ ಕಾರಣಾಂತರಗಳಿಂದ ಅರ್ಧಕ್ಕೆ ನಿಂತಿತ್ತು.

ಸದ್ಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿರುವಾಗಲೇ, ಕರ್ನಾಟಕ ಮಾಜಿ ಸಿಎಂ ಮತ್ತು ಹಾಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೀವನಗಾಥೆ ಸಿನಿಮಾ ರೂಪದಲ್ಲಿ ತೆರೆಗೆ ಬರಲಿದೆ ಎಂಬ ಸುದ್ದಿ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಹರಿದಾಡುತ್ತಿದೆ.

ಹೌದು, ಶ್ರೀರಾಮ ನವಮಿ ಹಬ್ಬದ ಸಂದರ್ಭದಲ್ಲಿ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾ ಎಂದು ಹೇಳಲಾದ “ಲೀಡರ್‌ ರಾಮಯ್ಯ’ ಎಂಬ ಹೆಸರಿನ ಸಿನಿಮಾದ ಟೈಟಲ್‌ ಪೋಸ್ಟರ್‌ ಸೋಶಿಯಲ್‌ ಮೀಡಿಯಾದಲ್ಲಿ ಬಿಡುಗಡೆಯಾಗಿದೆ. ಇನ್ನು “ಲೀಡರ್‌ ರಾಮಯ್ಯ’ಸಿನಿಮಾದ ಟೈಟಲ್‌ಗೆ “ಎ ಕಿಂಗ್‌ ರೈಸ್ಡ್ ಬೈ ದ ಪೀಪಲ್‌’ ಎಂಬ ಅಡಿಬರಹವಿದ್ದು, ಪೋಸ್ಟರ್‌ನಲ್ಲಿ ಮೈಸೂರು ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಬೀಸುತ್ತಿರುವ ಚಿತ್ರವಿದೆ.

ಈ ಹಿಂದೆ “ಕಥಾ ಲೇಖನ’ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದ ಸತ್ಯರತ್ನಂ ಈ ಸಿನಿಮಾಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. “ಎಂ. ಎಸ್‌ ಕ್ರಿಯೇಟಿವ್‌ ವರ್ಕ್ಸ್’ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ “ಲೀಡರ್‌ ರಾಮಯ್ಯ’ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಪ್ಯಾನ್‌ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗಲಿದೆ. ಈ ಸಿನಿಮಾದಲ್ಲಿ ಸಿದ್ದರಾಮಯ್ಯ ಪಾತ್ರವನ್ನು ತಮಿಳು ನಟ ವಿಜಯ್‌ ಸೇತುಪತಿ ನಿರ್ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಸಿದ್ದರಾಮಯ್ಯ ಅವರ ಹೋರಾಟ, ರಾಜಕೀಯ ಜೀವನ ಚಿತ್ರಣ ಈ ಸಿನಿಮಾದಲ್ಲಿದೆ ಎನ್ನಲಾಗಿದೆ.

ಸದ್ಯ “ಲೀಡರ್‌ ರಾಮಯ್ಯ’ಸಿನಿಮಾದ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿರುವ ಚಿತ್ರತಂಡ ಸಿನಿಮಾದ ಬಗ್ಗೆ ಹೆಚ್ಚೇನೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೀಸರ್‌ ಮತ್ತು ಹಾಡಿನಲ್ಲಿ ಅರಳಿದ ಹೂವುಗಳು

ಟೀಸರ್‌ ಮತ್ತು ಹಾಡಿನಲ್ಲಿ ಅರಳಿದ ಹೂವುಗಳು

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

darbar

ಜೂ.09ಕ್ಕೆ ವಿ.ಮನೋಹರ್‌ ನಿರ್ದೇಶನದ ‘ದರ್ಬಾರ್‌’ ತೆರೆಗೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ