ಬಿಡುಗಡೆ ಉತ್ಸಾಹದಲ್ಲಿ “ಲೈಟಾಗಿ ಲವ್ವಾಗಿದೆ’

ಸಿಂಗರ್‌ ಚನ್ನಪ್ಪ ಹುದ್ದಾರ ಈಗ ಹೀರೋ

Team Udayavani, Dec 21, 2019, 7:03 AM IST

liteagi

“ಲೈಟಾಗಿ ಲವ್ವಾಗಿದೆ’ ಅನ್ನೋ ಚಿತ್ರಗೀತೆಯನ್ನು ನೀವೆಲ್ಲ ಕೇಳಿರಬಹುದು. ಈಗ ಇದೇ ಹೆಸರನ್ನು ಇಟ್ಟುಕೊಂಡು ಈಗ ಹೊಸಬರ ಚಿತ್ರವೊಂದು ತೆರೆಗೆ ಬರುತ್ತಿದೆ. ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳು ಸೇರಿ ನಿರ್ಮಿಸಿರುವ ಈ ಚಿತ್ರಕ್ಕೆ ಗುರುರಾಜ ಗದಾಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರತಿಯೊಬ್ಬರ ಬದುಕಿನಲ್ಲೂ ಒಮ್ಮೆಯಾದರೂ ಪ್ರೀತಿ ಹುಟ್ಟಿರುತ್ತದೆ. ನಿಜವಾದ ಪ್ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಪ್ರೀತಿ ಮಾಡಿದರೆ ಮೋಸ ಮಾಡಬಾರದು. ನಂಬಿಕೆ -ನಿಯತ್ತಿಗೆ ಇನ್ನೊಂದು ಹೆಸರೇ ಪ್ರೀತಿ. ಈ ಎಲ್ಲ ಅಂಶಗಳನ್ನು ಇಟ್ಟುಕೊಂಡು “ಲೈಟಾಗಿ ಲವ್ವಾಗಿದೆ’ ಚಿತ್ರ ಮಾಡಲಾಗಿದೆಯಂತೆ. ಈ ಹಿಂದೆ ಉತ್ತರ ಕರ್ನಾಟಕದ ಜನಪದ ಶೈಲಿಯ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದ ಮತ್ತು “ಬದುಕಿಗಾಗಿ’ ಎಂಬ ಕಿರುಚಿತ್ರ ನಿರ್ದೇಶನ ಮಾಡಿದ್ದ ಗುರುರಾಜ ಗದಾಡಿ, ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಗಾಂಧಿನಗರಕ್ಕೆ ಪರಿಚಯವಾಗುತ್ತಿದ್ದಾರೆ.

ಕಿರುತೆರೆ ಜನಪ್ರಿಯ ರಿಯಾಲಿಟಿ ಶೋ “ಸರಿಗಮಪ ಸೀಸನ್‌-11’ರ ವಿಜೇತ ಚನ್ನಪ್ಪ ಹುದ್ದಾರ ಈ ಚಿತ್ರದ ಮೂಲಕ ನಾಯಕನಾಗಿ ಮತ್ತು ನಟಿ ದಿವ್ಯಾ ವಾಗುಕರ ನಾಯಕಿಯಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ಉಳಿದಂತೆ ಶ್ವೇತಾ ಧಾರವಾಡ, ಸಚ್ಚಿನ್‌ ತಿಮ್ಮಯ್ಯ, ಪ್ರದೀಪ್‌ ತಿಪಟೂರು, ಅನ್ವಿತಾ, ಯಲ್ಲೇಶ್‌ ಕುಮಾರ್‌, ಚೈತ್ರಾ ಹಿರೇಮಠ, ರತಿಕಾ ಗೋಕಾಕ್‌, ಅಂಕಿತಾ, ಸೋನಿ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಆಯರ್‌ಸ್ವಾಮಿ ಸಂಕಲನ ಮಾಡುವ ಜೊತೆಗೆ ಸಂಭಾಷಣೆಗೆ ಪದಗಳನ್ನು ಪೋಣಿಸಿದ್ದಾರೆ. ಚಿತ್ರಕ್ಕೆ ಶಿವಪುತ್ರ-ವಿನೋದ್‌ ಛಾಯಾಗ್ರಹಣ, ಆಯರ್‌ ಸ್ವಾಮಿ ಸಂಕಲನ ಕಾರ್ಯವಿದೆ. ಆಕಾಶ್‌ ಪರ್ವ ಸಂಗೀತ ಸಂಯೋಜನೆಯ ಹಾಡುಗಳಿಗೆ ಸಂಜಯ ಕುಮಾರ್‌, ಕಿನ್ನಾಳರಾಜ್‌ ಸಾಹಿತ್ಯ ಒದಗಿಸಿದ್ದಾರೆ. “ಲೈಟಾಗಿ ಲವ್ವಾಗಿದೆ’ ಚಿತ್ರದ ಶೇಕಡ 90ರಷ್ಟು ಚಿತ್ರೀಕರಣವನ್ನು ಬೆಳಗಾವಿ, ಕೊಪ್ಪಳದ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಉಳಿದ ಭಾಗವನ್ನು ಬೆಂಗಳೂರು, ಹಾಸನ, ಚಿಕ್ಕಮಗಳೂರು ಮೊದಲಾದ ಕಡೆಗಳಲ್ಲಿ ಚಿತ್ರೀಕರಿಸಲಾಗಿದೆ.

“ಪ್ರಜ್ವಲ್‌ ಸಿನಿ ಕ್ರಿಯೇಶನ್ಸ್‌’ ಬ್ಯಾನರ್‌ ಅಡಿಯಲ್ಲಿ ಎನ್‌.ಆರ್‌ ರಜಪೂತ, ಕಿಶೋರ್‌ ಭಟ್‌, ಶಫೀಕ್‌ ಸನದಿ ಜಂಟಿಯಾಗಿ ಈ ಚಿತ್ರ ನಿರ್ಮಿಸಿದ್ದಾರೆ. ಇತ್ತೀಚೆಗಷ್ಟೆ ಪ್ರಾದೇಶಿಕ ಸೆನ್ಸಾರ್‌ ಮಂಡಳಿಯಿಂದ “ಯು/ಎ’ ಪ್ರಮಾಣ ಪತ್ರ ಪಡೆದುಕೊಂಡಿರುವ ಈ ಚಿತ್ರ ಫೆಬ್ರವರಿ ವೇಳೆಗೆ ತೆರೆ ಕಾಣುವ ಸಾಧ್ಯತೆ ಇದೆ. ಇತ್ತೀಚೆಗೆ ಉತ್ತರ ಕರ್ನಾಟಕ ಭಾಗದಿಂದ ಸಾಕಷ್ಟು ದೊಡ್ಡ ಸಂಖ್ಯೆಯ ಪ್ರತಿಭೆಗಳು ಗಾಂಧಿನಗರಕ್ಕೆ ಅಡಿಯಿಡುತ್ತಿದ್ದು, ಉತ್ತರದ ಮಂದಿಯ “ಲೈಟಾಗಿ ಲವ್ವಾಗಿದೆ’ ಚಿತ್ರ ಸಿನಿ ಮಂದಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಶೀಘ್ರದಲ್ಲಿಯೇ ಗೊತ್ತಾಗಲಿದೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.