Sandalwood: ‘ಲೈನ್ ಮ್ಯಾನ್’ ಸೆನ್ಸಾರ್ ನಲ್ಲಿ ಪಾಸ್!
Team Udayavani, Sep 7, 2023, 6:24 PM IST
ಈ ಹಿಂದೆ “ಟಕ್ಕರ್’ ಹಾಗೂ “ರನ್ ಆಂಟೋನಿ’ ಚಿತ್ರಗಳನ್ನು ನಿರ್ದೇಶಿಸಿದ್ದ ರಘು ಶಾಸ್ತ್ರಿ ನಿರ್ದೇಶನದ ಮೂರನೇ ಚಿತ್ರ “ಲೈನ್ ಮ್ಯಾನ್’ ಬಿಡುಗಡೆಗೆ ಸಿದ್ದವಾಗಿದೆ. ಗ್ರಾಮೀಣ ಭಾಗಗಳಲ್ಲಿ ಪ್ರತಿನಿತ್ಯ ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್ ಸಂಬಂಧಿಸಿ ತೊಂದರೆ ಸರಿಪಡಿಸುವ “ಲೈನ್ ಮ್ಯಾನ್’ ಸುತ್ತ ಈ ಸಿನಿಮಾದ ಕಥೆ ನಡೆಯಲಿದೆ.
ಯುವ ನಟ ತ್ರಿಗುಣ್ ಸಿನಿಮಾದಲ್ಲಿ “ಲೈನ್ ಮ್ಯಾನ್’ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕಾಜಲ್ ಕುಂದರ್ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದು, ಉಳಿದಂತೆ ಹಿರಿಯ ನಟಿ ಬಿ. ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ, ಅಪೂರ್ವಶ್ರೀ ಮತ್ತಿತರರು ಸಿನಿಮಾದ ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿ ಫಸ್ಟ್ ಕಾಪಿ ಜೊತೆ ಹೊರಬಂದಿರುವ “ಲೈನ್ ಮ್ಯಾನ್’ ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ, ಸಿನಿಮಾಕ್ಕೆ “ಯು’ ಸರ್ಟಿಫಿಕೇಟ್ ನೀಡಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಇದೇ ಅಕ್ಟೋಬರ್ ಮೊದಲ ವಾರ “ಲೈನ್ಮ್ಯಾನ್’ ಸಿನಿಮಾವನ್ನು ತೆರೆಗೆ ತರಲು ಪ್ಲಾನ್ ಹಾಕಿಕೊಂಡಿದೆ. “ಪರ್ಪಲ್ ರಾಕ್’ ಬ್ಯಾನರ್ನಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ