ಕಾಲೇಜು ಹುಡುಗಿಯರ ಡ್ರೀಮ್ ಬಾಯ್ ಈಗ ಸ್ಯಾಂಡಲ್ ವುಡ್ ನಿರ್ದೇಶಕ

Team Udayavani, Jan 29, 2020, 1:27 PM IST

ಒಂದು ಕಾಲದಲ್ಲಿ ಕಾಲೇಜು ಹುಡುಗಿಯರ ಡ್ರೀಮ್ ಬಾಯ್ ಆಗಿದ್ದ ಡಾರ್ಲಿಂಗ್ ಕೃಷ್ಣ ಈಗ ನಿರ್ದೇಶಕ. ಕಿರುತೆರೆಯ ಜನಪ್ರಿಯ ಧಾರವಾಹಿ ಕೃಷ್ಣ ರುಕ್ಮಿಣಿ ಮೂಲಕ ಜನಪ್ರಿಯತೆ ಕಳಿಸಿಕೊಂಡ ಕೃಷ್ಣ ನಂತರ ಬೆಳ್ಳೆತೆರೆಗೆ ಎಂಟ್ರಿ ಕೊಟ್ರು. ಮದರಂಗಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ನಾಯಕ ನಟನಾಗಿ ಗುರುತಿಸಿಕೊಂಡಿರುವ ಡಾರ್ಲಿಂಗ್ ಕೃಷ್ಣ ಈಗ `ಲವ್ ಮೊಕ್ಟೈಲ್’ ಎಂಬ ತಮ್ಮದೇ ಕನಸಿನ ಕೂಸಿನ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಲವ್ ಮೊಕ್ಟೈಲ್.. ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಟಿಸಿರುವ ಸಿನಿಮಾ. ಎಲ್ಲ ಹುಡುಗರ ಜೀವನದಲ್ಲೂ ನಡೆಯುವ ಲವ್ ಸ್ಟೋರಿ, ತರ್ಲೆ, ತುಂಟಾಗಳೇ ಈ ಚಿತ್ರದಲ್ಲಿದೆ. ಆದ್ರೆ ಅದನ್ನೇ ವಿಭಿನ್ನವಾಗಿ ಕಮರ್ಶಿಯಲ್ ಜಾಡಿನಲ್ಲಿ ಹೇಳ ಹೊರಟಿದ್ದಾರೆ ಡಾರ್ಲಿಂಗ್ ಕೃಷ್ಣ.

ಮಿಲನ ನಾಗರಾಜ್ ಡಾರ್ಲಿಂಗ್ ಕೃಷ್ಣನ ಹೀರೋಯಿನ್ ಆಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಶೇಡ್ ನಲ್ಲಿ ಡಾರ್ಲಿಂಗ್ ಕೃಷ್ಣ ತೆರೆ ಮೇಲೆ ಕಾಣಸಿಗಲಿದ್ದಾರೆ.
ರಘು ದೀಕ್ಷಿತ್ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು ಈಗಾಗಲೇ ಎಲ್ಲಾ ಹಾಡುಗಳು ಹಿಟ್ ಆಗಿವೆ. ಗಾನ ಪ್ರಿಯರಿಗೂ ಹತ್ತಿರವಾಗಿವೆ. ಲವ್ ಮೊಕ್ಟೈಲ್ ಚಿತ್ರದ ಟ್ರೈಲರ್‌ಗೆ ಕಿಚ್ಚ ಸುದೀಪ ವಾಯ್ಸ್ ನೀಡಿದ್ದು ಯೂಟ್ಯೂವಬ್ನಲ್ಲಿ ಮೆಚ್ಚುಗೆಯ ಮಹಾಪೂರವನ್ನೇ ಪಡೆದುಕೊಂಡಿದೆ. ನಿರ್ದೇಶನದ ಜೊತೆ ನಿರ್ಮಾಣಕ್ಕೂ ಕೈ ಹಾಕಿರುವ ಡಾರ್ಲಿಂಗ್ ಕೃಷ್ಣ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಟಿ ಮಿಲನಾ ನಾಗರಾಜ್ ಕೂಡ ಡಾರ್ಲಿಂಗ್ ಕೃಷ್ಣ ಜೊತೆ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಚಿತ್ರ ಇದೇ ಶುಕ್ರವಾರ ಅಂದ್ರೆ ಜನವರಿ 31ಕ್ಕೆ ಬಿಡುಗಡೆಯಾಗುತ್ತಿದ್ದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ ಡಾರ್ಲಿಂಗ್ ಕೃಷ್ಣ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದರ್ಶನ್‌ ಈಗ "ಗಂಡುಗಲಿ ಮದಕರಿನಾಯಕ' ಸಿನಿಮಾದಲ್ಲಿ ತೊಡಗಿದ್ದಾರೆ. ಅವರ ಅಭಿನಯದ "ಕುರುಕ್ಷೇತ್ರ' ಚಿತ್ರದ ಶತದಿನೋತ್ಸವ ಕೂಡ ಶಿವರಾತ್ರಿ ದಿನ ಅದ್ಧೂರಿಯಾಗಿ ನಡೆದಿದೆ....

  • "ಜೋಗಿ' ಚಿತ್ರದ ನಿರ್ಮಾಪಕ, ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿಯ ರೂವಾರಿ ಅಶ್ವಿ‌ನಿ ರಾಮ್‌ ಪ್ರಸಾದ್‌ ಈಗ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆ...

  • ಇತ್ತೀಚೆಗಷ್ಟೇ "ರ್‍ಯಾಂಬೋ-2' ಚಿತ್ರದ "ಚುಟು ಚುಟು ಅಂತೈತಿ...' ಅನ್ನೋ ಉತ್ತರ ಕರ್ನಾಟಕ ಶೈಲಿಯ ಜವಾರಿ ಹಾಡು ಯು-ಟ್ಯೂಬ್‌ನಲ್ಲಿ 100 ಮಿಲಿಯನ್‌ ಹಿಟ್ಸ್ ಪಡೆದುಕೊಂಡು...

  • ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್‌ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್‌ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ...

  • ಈ ಬಾರಿ ನಡೆಯಲಿರುವ ಹನ್ನೆರಡನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ನಟ ಯಶ್‌ ಅವರು ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಪ್ರತಿ...

ಹೊಸ ಸೇರ್ಪಡೆ

  • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

  • ಹುಬ್ಬಳ್ಳಿ: ಉತ್ತರಾಧಿಕಾರಿ ನೇಮಕ ವಿಚಾರ, ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ,...

  • ಜಾಗತಿಕ ಮಟ್ಟದಲ್ಲಿ ಬೆಂಗಳೂರು ಬೆಳೆಯುತ್ತಿದೆ. ದೇಶದ ನಾನಾ ಭಾಗಗಳಿಂದ ಜನ ಇಲ್ಲಿಗೆ ಬಂದು ನೆಲೆಸಿದ್ದಾರೆ. ಬದುಕಿರುವಾಗ ಹೇಗೋ ನೆಲೆ ಸಿಗುತ್ತಿದೆ. ಆದರೆ ಅದೇ...

  • ಬೆಂಗಳೂರು: ವಿವಿಧ ಇಲಾಖೆಯ ಸಚಿವರು ಸುಲಭವಾಗಿ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಲಭ್ಯವಾಗಬೇಕೆಂಬ ಸದುದ್ದೇಶದಿಂದ ಬಿಜೆಪಿ ಕೇಂದ್ರ ಕಚೇರಿಗೆ ವಾರಕ್ಕೆ...

  • ಬೆಂಗಳೂರು: ಹುಳಿಮಾವು ಕೆರೆ ದುರಂತ ಸಂಭವಿಸಿ ಇಂದಿಗೆ (ಫೆ.24)ನಾಲ್ಕು ತಿಂಗಳಾಗಲಿದೆ. ಆದರೆ, ಇದಕ್ಕೆ "ಪರೋಕ್ಷವಾಗಿ ಕಾರಣರಾದ ಪಾಲಿಕೆಯ ಕೆರೆ ವಿಭಾಗದ ಅಧಿಕಾರಿಗಳ'...